Cricket
ಐಪಿಎಲ್ 2025 ಮಾರ್ಚ್ 22 ರಿಂದ ಪ್ರಾರಂಭವಾಗಲಿದೆ. ಎಲ್ಲಾ 10 ತಂಡಗಳಲ್ಲಿ ಅತ್ಯಂತ ದುಬಾರಿ ಆಟಗಾರರು ಯಾರು ಮತ್ತು ಅವರನ್ನು ಏಕೆ ಆಯ್ಕೆ ಮಾಡಲಾಗಿದೆ ಎಂದು ತಿಳಿಯೋಣ?
ಪಂಜಾಬ್ ಕಿಂಗ್ಸ್‌ನ ಅತ್ಯಂತ ದುಬಾರಿ ಆಟಗಾರ ಶ್ರೇಯಸ್ ಅಯ್ಯರ್, ಇವರನ್ನು 26.75 ಕೋಟಿ ರೂಪಾಯಿಗಳಿಗೆ ಖರೀದಿಸಲಾಗಿದೆ. ಅವರು ಈ ಸೀಸನ್‌ನಲ್ಲಿ ನಾಯಕತ್ವ ವಹಿಸಲಿದ್ದಾರೆ.
ಕೋಲ್ಕತ್ತಾ ನೈಟ್ ರೈಡರ್ಸ್‌ನ ಅತ್ಯಂತ ದುಬಾರಿ ಆಟಗಾರ ವೆಂಕಟೇಶ್ ಅಯ್ಯರ್, ಇವರನ್ನು 23.75 ಕೋಟಿ ರೂಪಾಯಿಗಳಿಗೆ ಖರೀದಿಸಲಾಗಿದೆ. ಅವರು ಈ ತಂಡದ ಪ್ರಮುಖ ಆಲ್ರೌಂಡರ್
ಚೆನ್ನೈ ಸೂಪರ್ ಕಿಂಗ್ಸ್‌ನ ಅತ್ಯಂತ ದುಬಾರಿ ಆಟಗಾರ ಋತುರಾಜ್ ಗಾಯಕ್ವಾಡ್. ನಾಯಕ ಋತುರಾಜ್ ಅವರನ್ನು ಹಾಗೂ ಆಲ್ರೌಂಡರ್ ರವೀಂದ್ರ ಜಡೇಜಾರನ್ನು ಫ್ರಾಂಚೈಸಿ 18 ಕೋಟಿ ರೂಪಾಯಿಗಳಿಗೆ ರೀಟೈನ್ ಮಾಡಿಕೊಂಡಿದೆ.
ಮುಂಬೈ ಇಂಡಿಯನ್ಸ್ ತಂಡದಲ್ಲಿ ಅತ್ಯಂತ ದುಬಾರಿ ಆಟಗಾರ ಜಸ್ಪ್ರೀತ್ ಬುಮ್ರಾ. ಬುಮ್ರಾ ಅವರನ್ನು ಐಪಿಎಲ್ 2025 ರ ಮೆಗಾ ಹರಾಜಿನಲ್ಲಿ ಫ್ರಾಂಚೈಸಿ 18 ಕೋಟಿ ರೂಪಾಯಿಗಳಿಗೆ ಉಳಿಸಿಕೊಂಡಿದೆ.
ಲಕ್ನೋ ಸೂಪರ್‌ಜೈಂಟ್ಸ್‌ನ ಅತ್ಯಂತ ದುಬಾರಿ ಆಟಗಾರ ರಿಷಭ್ ಪಂತ್. ಎಲ್‌ಎಸ್‌ಜಿ ಐಪಿಎಲ್ 2025 ರ ಮೆಗಾ ಹರಾಜಿನಲ್ಲಿ ಪಂತ್ ಅವರನ್ನು 27 ಕೋಟಿ ರೂಪಾಯಿಗಳಿಗೆ ತೆಗೆದುಕೊಂಡು ನಾಯಕನನ್ನಾಗಿ ಮಾಡಿತು.
ಸನ್‌ರೈಸರ್ಸ್ ಹೈದರಾಬಾದ್ ತಂಡದಲ್ಲಿ ಅತ್ಯಂತ ದುಬಾರಿ ಆಟಗಾರ ಹೆನ್ರಿಕ್ ಕ್ಲಾಸೆನ್. ಕ್ಲಾಸೆನ್ ಅವರನ್ನು ಐಪಿಎಲ್ 2025 ರ ಮೆಗಾ ಹರಾಜಿನಲ್ಲಿ 23 ಕೋಟಿ ರೂಪಾಯಿಗಳಿಗೆ ಉಳಿಸಿಕೊಳ್ಳಲಾಯಿತು.
ಆರ್‌ಸಿಬಿ ರನ್ ಮಷೀನ್ ವಿರಾಟ್ ಕೊಹ್ಲಿಯನ್ನು ಫ್ರಾಂಚೈಸಿ 21 ಕೋಟಿ ರುಪಾಯಿ ನೀಡಿ ರೀಟೈನ್ ಮಾಡಿಕೊಂಡಿದೆ.
ಸಂಜು ಸ್ಯಾಮ್ಸನ್ ಹಾಗೂ ಯಶಸ್ವಿ ಜೈಸ್ವಾಲ್ ಅವರನ್ನು ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿ 18 ಕೋಟಿ ರುಪಾಯಿ ನೀಡಿ ರೀಟೈನ್ ಮಾಡಿಕೊಂಡಿದೆ.
ಗುಜರಾತ್ ಟೈಟಾನ್ಸ್ ಫ್ರಾಂಚೈಸಿಯು ಆಫ್ಘಾನ್ ಮೂಲದ ಲೆಗ್‌ಸ್ಪಿನ್ನರ್ ರಶೀದ್ ಖಾನ್‌ಗೆ 18 ಕೋಟಿ ರುಪಾಯಿ ನೀಡಿ ರೀಟೈನ್ ಮಾಡಿಕೊಂಡಿದೆ.
ಡೆಲ್ಲಿ ಕ್ಯಾಪಿಟಲ್ಸ್ ನಾಯಕ ಅಕ್ಷರ್ ಪಟೇಲ್ ಅವರನ್ನು ಫ್ರಾಂಚೈಸಿ 16.5 ಕೋಟಿ ರುಪಾಯಿ ನೀಡಿ ರೀಟೈನ್ ಮಾಡಿಕೊಂಡಿದೆ.