Cricket
ಭಾರತ ಹಾಗೂ ವೆಸ್ಟ್ ಇಂಡೀಸ್ ತಂಡಗಳ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿ ಇಂದಿನಿಂದ(ಜು.12) ಆರಂಭವಾಗಲಿದೆ.
ಡೋಮಿನಿಕಾದಲ್ಲಿ ಭಾರತೀಯ ಕಾಲಮಾನ ಸಂಜೆ 7.30ರಿಂದ ಮೊದಲ ಟೆಸ್ಟ್ ಪಂದ್ಯ ಆರಂಭವಾಗಲಿದೆ.
ಮೊದಲ ಟೆಸ್ಟ್‌ನಲ್ಲಿ ಎಡಗೈ ಬ್ಯಾಟರ್ ಯಶಸ್ವಿ ಜೈಸ್ವಾಲ್, ರೋಹಿತ್ ಶರ್ಮಾ ಜತೆ ಇನಿಂಗ್ಸ್ ಆರಂಭಿಸಲಿದ್ದಾರೆ.
2023ರ ಐಪಿಎಲ್ ಟೂರ್ನಿಯಲ್ಲಿ ಜೈಸ್ವಾಲ್ 48ರ ಬ್ಯಾಟಿಂಗ್ ಸರಾಸರಿಯಲ್ಲಿ 625 ರನ್ ಸಿಡಿಸಿದ್ದರು.
ಇಲ್ಲಿಯವರೆಗೆ ಆರಂಭಿಕನಾಗಿ ಕಣಕ್ಕಿಳಿಯುತ್ತಿದ್ದ ಶುಭ್‌ಮನ್ ಗಿಲ್ ಇದೀಗ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಲಿದ್ದಾರೆ ಎಂದು ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ.
ಈವರೆಗೂ ಮೂರನೇ ಕ್ರಮಾಂಕದಲ್ಲಿ ಚೇತೇಶ್ವರ್ ಪೂಜಾರ ಕಣಕ್ಕಿಳಿಯುತ್ತಿದ್ದರು. ಇದೀಗ ಪೂಜಾರ ಅನುಪಸ್ಥಿತಿಯಲ್ಲಿ ಗಿಲ್ ಕಣಕ್ಕಿಳಿಯಲಿದ್ದಾರೆ.
ಗಿಲ್, ದ್ರಾವಿಡ್ ಬಳಿ ಮಧ್ಯಮ ಕ್ರಮಾಂಕದಲ್ಲಿ ಆಡುವುದಾಗಿ ಕೇಳಿಕೊಂಡಿದ್ದರಿಂದ ಅವರು 3ನೇ ಕ್ರಮಾಂಕದಲ್ಲಿ ಆಡುತ್ತಾರೆ ಎಂದು ರೋಹಿತ್ ಶರ್ಮಾ ಹೇಳಿದ್ದಾರೆ.
ಇನ್ನು ಋತುರಾಜ್ ಗಾಯಕ್ವಾಡ್ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಲು ಇನ್ನಷ್ಟು ಸಮಯ ಕಾಯಬೇಕಾಗುವ ಸಾಧ್ಯತೆಯಿದೆ.
ಸದ್ಯಕ್ಕೆ ಭಾರತದ ಬ್ಯಾಟಿಂಗ್ ಕ್ರಮಾಂಕ ಸಾಕಷ್ಟು ಸದೃಢವಾಗಿದ್ದು, ಯುವ ಹಾಗೂ ಅನುಭವಿ ಬ್ಯಾಟರ್‌ಗಳನ್ನೊಳಗೊಂಡ ದಂಡೇ ಇದೆ
ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಶುಭ್‌ಮನ್ ಗಿಲ್, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ ಭಾರತದ ಅಗ್ರಕ್ರಮಾಂಕದ ಬ್ಯಾಟರ್‌ಗಳೆನಿಸಿದ್ದಾರೆ.