ಏಕದಿನ ಕ್ರಿಕೆಟ್‌ನಲ್ಲಿ ಸಿಕ್ಸರ್ ಸಿಡಿಸುವ ವಿಚಾರದಲ್ಲಿ ಹೊಸದೊಂದು ಮೈಲಿಗಲ್ಲು ನೆಟ್ಟಿದ್ದಾರೆ.
ಏಕದಿನ ಕ್ರಿಕೆಟ್‌ನಲ್ಲಿ ಅತಿಹೆಚ್ಚು ಸಿಕ್ಸರ್ ಬಾರಿಸಿದ ಟಾಪ್ 5 ಬ್ಯಾಟರ್‌ಗಳು ಯಾರು ನೋಡೋಣ ಬನ್ನಿ
ಕ್ಯಾಪ್ಟನ್ ಕೂಲ್ ಖ್ಯಾತಿಯ ಎಂ ಎಸ್ ಧೋನಿ ಏಕದಿನ ಕ್ರಿಕೆಟ್‌ನಲ್ಲಿ ಅತಿಹೆಚ್ಚು ಸಿಕ್ಸರ್ ಸಿಡಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದ್ದಾರೆ.
ಸ್ಫೋಟಕ ಬ್ಯಾಟಿಂಗ್‌ಗೆ ಹೆಸರುವಾಸಿಯಾಗಿರುವ ಧೋನಿ ಏಕದಿನ ಕ್ರಿಕೆಟ್‌ನಲ್ಲಿ 297 ಇನ್ನಿಂಗ್ಸ್‌ಗಳನ್ನಾಡಿ 229 ಸಿಕ್ಸರ್ ಸಿಡಿಸಿದ್ದಾರೆ.
ಶ್ರೀಲಂಕಾದ ಎಡಗೈ ಸ್ಪೋಟಕ ಆರಂಭಿಕ ಬ್ಯಾಟರ್ ಸನತ್ ಜಯಸೂರ್ಯ ಏಕದಿನ ಕ್ರಿಕೆಟ್‌ನಲ್ಲಿ ಲೀಲಾಜಾಲವಾಗಿ ಸಿಕ್ಸರ್ ಸಿಡಿಸುವುದು ಹೇಗೆಂದು ಜಗತ್ತಿಗೆ ತೋರಿಸಿಕೊಟ್ಟ ಬ್ಯಾಟರ್ ಎಂದರೆ ಅತಿಶಯೋಕ್ತಿಯಲ್ಲ
443 ಏಕದಿನ ಇನ್ನಿಂಗ್ಸ್‌ಗಳನ್ನಾಡಿ ಜಯಸೂರ್ಯ 270 ಸಿಕ್ಸರ್ ಸಿಡಿಸುವ ಮೂಲಕ ಗರಿಷ್ಠ ಸಿಕ್ಸರ್ ಸಿಡಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದಾರೆ.
ಯೂನಿವರ್ಸಲ್ ಬಾಸ್ ಖ್ಯಾತಿಯ ಕ್ರಿಸ್ ಗೇಲ್‌ಗೆ ಸಿಕ್ಸರ್ ಬಾರಿಸುವುದು ನೀರು ಕುಡಿದಷ್ಟೇ ಸುಲಭ. ಏಕದಿನ ಕ್ರಿಕೆಟ್‌ನಲ್ಲಿ 331 ಸಿಕ್ಸರ್ ಸಿಡಿಸುವ ಮೂಲಕ ಗೇಲ್ ಮೂರನೇ ಸ್ಥಾನದಲ್ಲಿದ್ದಾರೆ
ವಿಂಡೀಸ್‌ನ ದೈತ್ಯ ಕ್ರಿಕೆಟಿಗ ಗೇಲ್ 294 ಅಂತಾರಾಷ್ಟ್ರೀಯ ಏಕದಿನ ಇನ್ನಿಂಗ್ಸ್‌ಗಳನ್ನಾಡಿ 331 ಸಿಕ್ಸರ್ ಸಿಡಿಸಿದ್ದಾರೆ.
ಹಿಟ್‌ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಇದೀಗ ಅಂತಾರಾಷ್ಟ್ರಿಯ ಏಕದಿನ ಕ್ರಿಕೆಟ್‌ನಲ್ಲಿ 334 ಸಿಕ್ಸರ್ ಸಿಡಿಸುವ ಮೂಲಕ ಕ್ರಿಸ್ ಗೇಲ್ ಹಿಂದಿಕ್ಕಿ ಎರಡನೇ ಸ್ಥಾನಕ್ಕೇರಿದ್ದಾರೆ.
ರೋಹಿತ್ ಶರ್ಮಾ 259 ಏಕದಿನ ಇನ್ನಿಂಗ್ಸ್‌ಗಳನ್ನಾಡಿ 334 ಸಿಕ್ಸರ್ ಸಿಡಿಸುವ ಮೂಲಕ ಎರಡನೇ ಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ.
ಪಾಕಿಸ್ತಾನದ ಸ್ಪೋಟಕ ಬ್ಯಾಟರ್ ಆಗಿ ಗುರುತಿಸಿಕೊಂಡಿದ್ದ ಶಾಹಿದ್ ಅಫ್ರಿದಿ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿ 351 ಸಿಕ್ಸರ್ ಸಿಡಿಸುವ ಮೂಲಕ ಅಗ್ರಸ್ಥಾನದಲ್ಲಿ ಭದ್ರವಾಗಿದ್ದಾರೆ.
ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿ 369 ಇನ್ನಿಂಗ್ಸ್‌ಗಳನ್ನಾಡಿ ಅಫ್ರಿದಿ 351 ಸಿಕ್ಸರ್ ಸಿಡಿಸಿದ್ದಾರೆ. ರೋಹಿತ್ ಶರ್ಮಾ ಈ ದಾಖಲೆ ಮುರಿಯಲು 17 ಸಿಕ್ಸರ್‌ಗಳ ಅಗತ್ಯವಿದೆ.