Cricket
ಭಾರತ ಕ್ರಿಕೆಟ್ ದಿಗ್ಗಜ ನಾಯಕ ಸೌರವ್ ಗಂಗೂಲಿ ಜುಲೈ 08, 2023ರಂದು ತಮ್ಮ 51ನೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.
ಸೌರವ್ ಗಂಗೂಲಿ 51ನೇ ಹುಟ್ಟುಹಬ್ಬದ ಸಂದರ್ಭದಲ್ಲಿ, 2006ರಲ್ಲಿ ದಕ್ಷಿಣ ಆಫ್ರಿಕಾ ಎದುರು ದಾದಾ ಕಮ್‌ಬ್ಯಾಕ್ ಪಂದ್ಯದಲ್ಲಿ ಅಬ್ಬರಿಸಿದ್ದು ಯಾರೂ ಮರೆಯಲು ಸಾಧ್ಯವಿಲ್ಲ.
ಭಾರತ ತಂಡಕ್ಕೆ ಕಮ್‌ಬ್ಯಾಕ್ ಮಾಡಿದ ಪಂದ್ಯದಲ್ಲಿ ಹರಿಣಗಳೆದರು ಸೌರವ್ ಗಂಗೂಲಿ ಅಜೇಯ 51* ರನ್ ಬಾರಿಸಿದ್ದರು. ಇದು ಭಾರತ ಪರ ಮೊದಲ ಇನಿಂಗ್ಸ್‌ನಲ್ಲಿ ದಾಖಲಾದ ಗರಿಷ್ಠ ರನ್ ಎನಿಸಿತು
ಸ್ಪೋಟಕ ಎಡಗೈ ಬ್ಯಾಟರ್ ಎನಿಸಿಕೊಂಡಿದ್ದ ಸೌರವ್ ಗಂಗೂಲಿ ಏಕದಿನ ಕ್ರಿಕೆಟ್‌ನಲ್ಲಿ 11 ಸಾವಿರಕ್ಕೂ ಅಧಿಕ ರನ್ ಬಾರಿಸಿದ್ದಾರೆ
ಸೌರವ್ ಗಂಗೂಲಿ 1996ರಲ್ಲಿ ಇಂಗ್ಲೆಂಡ್ ಎದುರು ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ ಪಾದಾರ್ಪಣೆ ಮಾಡಿದ್ದರು. ಚೊಚ್ಚಲ ಪಂದ್ಯದಲ್ಲೇ ಶತಕ ಸಿಡಿಸಿ ಸಂಭ್ರಮಿಸಿದ್ದರು.
1999ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಶ್ರೀಲಂಕಾ ಎದುರು ಸೌರವ್ ಗಂಗೂಲಿ ಸ್ಪೋಟಕ 183 ರನ್ ಸಿಡಿಸಿದ್ದರು.
ಸೌರವ್ ಗಂಗೂಲಿ ನಾಯಕತ್ವದಲ್ಲಿ 2003ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಫೈನಲ್ ಪ್ರವೇಶಿಸಿ, ರನ್ನರ್ ಅಪ್ ಸ್ಥಾನ ಪಡೆದಿತ್ತು.
2002ರಲ್ಲಿ ನಡೆದ ಚೊಚ್ಚಲ ಆವೃತ್ತಿಯ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಸೌರವ್ ಗಂಗೂಲಿ ನೇತೃತ್ವದ ಭಾರತ ಹಾಗೂ ಶ್ರೀಲಂಕಾ ಜಂಟಿ ಚಾಂಪಿಯನ್ ಆಗಿತ್ತು.
ಸೌರವ್ ಎಂದಾಕ್ಷಣ ಇಂಗ್ಲೆಂಡ್ ತಂಡವನ್ನು ಲಾರ್ಡ್ಸ್ ಮೈದಾನದಲ್ಲಿ ಮಣಿಸಿದ ಬಳಿಕ ದಾದಾ ಶರ್ಟ್ ಬಿಚ್ಚಿ ಗಾಳಿಯಲ್ಲಿ ಬೀಸಿದ್ದು ಮರೆಯಲು ಸಾಧ್ಯವೇ?