Cricket
ಭಾರತೀಯ ಕ್ರಿಕೆಟಿಗ ಯುಜುವೇಂದ್ರ ಚಹಲ್ ಮತ್ತು ಧನಶ್ರೀ ವರ್ಮಾ ಅಧಿಕೃತವಾಗಿ ಬೇರೆಯಾಗಿದ್ದಾರೆ ಎನ್ನುವ ವಿಷಯ ಖಚಿತವಾಗಿದೆ
ಚಹಲ್ ಮತ್ತು ಧನಶ್ರೀ ಇಬ್ಬರೂ ಸೋಶಿಯಲ್ ಮೀಡಿಯಾದಲ್ಲಿ ಈ ಹಿಂದೆಯೇ ಒಬ್ಬರನ್ನೊಬ್ಬರು ಅನ್‌ಫಾಲೋ ಮಾಡಿಕೊಂಡಿದ್ದರು.
ಮುಂಬೈನ ಭಾಂದ್ರಾ ಕೌಟುಂಬಿಕ ನ್ಯಾಯಾಲಯದಲ್ಲಿ ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿ 18 ತಿಂಗಳಿಂದ ಬೇರೆ ಬೇರೆಯಾಗಿಯೇ ವಾಸವಾಗಿದ್ದರು
ಸಕಾರಾತ್ಮಕವಾಗಿರಲು ನಿರ್ಧರಿಸಿ ಪರಸ್ಪರ ಸಮ್ಮತಿಯ ಮೇರೆಗೆ ಧನಶ್ರೀ ವರ್ಮಾ ಹಾಗೂ ಯುಜುವೇಂದ್ರ ಚಹಲ್ ಡಿವೋರ್ಸ್ ಪಡೆಯಲು ನಿರ್ಧರಿಸಿದರು.
ಯುಜುವೇಂದ್ರ ಚಹಲ್ ಹಾಗೂ ಧನಶ್ರೀ ವರ್ಮಾ 2020ರ ಡಿಸೆಂಬರ್‌ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದರು.
ಕಳೆದ ಕೆಲ ವರ್ಷಗಳಿಂದಲೇ ಚಹಲ್ ಹಾಗೂ ಧನಶ್ರೀ ದಾಂಪತ್ಯ ಜೀವನದಲ್ಲಿ ಬಿರುಕು ಬಿಟ್ಟಿದೆ ಎನ್ನುವಂತಹ ಮಾತುಗಳು ಕೇಳಿ ಬಂದಿದ್ದರೂ ಸಹಾ ಈ ಇಬ್ಬರು ಅಧಿಕೃತವಾಗಿ ಯಾವುದೇ ಹೇಳಿಕೆ ನೀಡಿರಲಿಲ್ಲ.
ಈ ಜೋಡಿ ಆಗಾಗ ಕ್ರಿಪ್ಟಿಕ್ ಸಂದೇಶಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಲೇ ಬಂದಿತ್ತು.