ವರ್ಷದ ಎಲ್ಲ ಋತುಗಳಲ್ಲಿ ಸಿಗುವ ಹಣ್ಣೆಂದರೆ ಅದು ಬಾಳೆಹಣ್ಣು. ಬಾಳೆ ಹಣ್ಣು ಸೇವನೆಯಿಂದ ಅನೇಕ ಆರೋಗ್ಯಕರ ಪ್ರಯೋಜನಗಳಿವೆ ಎಂಬುದು ಗೊತ್ತೇ ಇದೆ. ಆದರೆ ಈ ಹಣ್ಣು ಖಾಲಿ ಹೊಟ್ಟೆಯಲ್ಲಿ ತಿನ್ನಬೇಕೆ? ಬೇಡವೇ?
food Jan 22 2025
Author: Ravi Janekal Image Credits:Getty
Kannada
ಶಕ್ತಿವರ್ಧಕ
ಬಾಳೆಹಣ್ಣಿನಲ್ಲಿ ನೈಸರ್ಗಿಕ ಸಕ್ಕರೆ ಹೇರಳವಾಗಿದೆ. ಆದ್ದರಿಂದ ಈ ಹಣ್ಣನ್ನು ಖಾಲಿ ಹೊಟ್ಟೆಯಲ್ಲಿ ತಿಂದರೆ ನಮ್ಮ ದೇಹಕ್ಕೆ ತಕ್ಷಣ ಶಕ್ತಿ ಸಿಗುತ್ತದೆ.
Image credits: Getty
Kannada
ರಕ್ತದೊತ್ತಡ
ಬಾಳೆಹಣ್ಣಿನಲ್ಲಿ ಪೊಟ್ಯಾಸಿಯಮ್ ಹೆಚ್ಚಿನ ಪ್ರಮಾಣದಲ್ಲಿರುತ್ತದೆ. ಈ ಹಣ್ಣನ್ನು ಬೆಳಗ್ಗೆ ತಿಂದರೆ ಅಧಿಕ ರಕ್ತದೊತ್ತಡ ನಿಯಂತ್ರಣದಲ್ಲಿರುತ್ತದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.
Image credits: Getty
Kannada
ಮಲಬದ್ಧತೆ
ಬಾಳೆಹಣ್ಣಿನಲ್ಲಿ ಹೇರಳವಾಗಿರುವ ನಾರಿನಂಶದಿಂದಾಗಿ ಈ ಹಣ್ಣನ್ನು ಬೆಳಗ್ಗೆ ತಿಂದರೆ ಮಲಬದ್ಧತೆ ಸಮಸ್ಯೆ ನಿವಾರಣೆಯಾಗುತ್ತದೆ. ಈ ಹಣ್ಣು ಜೀರ್ಣಕ್ರಿಯೆಯ ಸಮಸ್ಯೆಗಳನ್ನು ಕಡಿಮೆ ಮಾಡಲು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ.
Image credits: Getty
Kannada
ಖಾಲಿ ಹೊಟ್ಟೆಯಲ್ಲಿ ಬಾಳೆಹಣ್ಣು ತಿಂದರೆ?
ಖಾಲಿ ಹೊಟ್ಟೆಯಲ್ಲಿ ಬಾಳೆಹಣ್ಣು ತಿನ್ನುವುದರಿಂದ ಕೆಲವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಅವು ಯಾವುವು?
Image credits: Getty
Kannada
ಆಮ್ಲತೆ
ಬಾಳೆಹಣ್ಣು ತಿಂದರೆ ಆಮ್ಲತೆ ಬರುವ ಸಾಧ್ಯತೆ ಇದೆ. ಆದ್ದರಿಂದ ಕೆಲವರು ಖಾಲಿ ಹೊಟ್ಟೆಯಲ್ಲಿ ಬಾಳೆಹಣ್ಣು ತಿಂದರೆ ಜೀರ್ಣಕ್ರಿಯೆಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.
Image credits: Getty
Kannada
ರಕ್ತದಲ್ಲಿ ಸಕ್ಕರೆ ಹೆಚ್ಚಾಗಬಹುದು
ಬಾಳೆಹಣ್ಣಿನಲ್ಲಿ ಗ್ಲೈಸೆಮಿಕ್ ಸೂಚ್ಯಂಕ ಹೆಚ್ಚಾಗಿರುತ್ತದೆ. ಆದ್ದರಿಂದ ಇದನ್ನು ಖಾಲಿ ಹೊಟ್ಟೆಯಲ್ಲಿ ತಿಂದರೆ ರಕ್ತದಲ್ಲಿನ ಸಕ್ಕರೆ ಹೆಚ್ಚಾಗುತ್ತದೆ.
Image credits: Getty
Kannada
ಬಾಳೆಹಣ್ಣನ್ನು ಯಾವಾಗ ತಿನ್ನಬೇಕು?
ಆರೋಗ್ಯ ತಜ್ಞರ ಪ್ರಕಾರ, ಏನನ್ನಾದರೂ ತಿಂದ ನಂತರ ಬಾಳೆಹಣ್ಣು ತಿನ್ನುವುದು ಒಳ್ಳೆಯದು.