Food
ರಾಗಿ ಅಂಬಲಿಯಲ್ಲಿ ಮೆಗ್ನೀಷಿಯಮ್ ಹೇರಳವಾಗಿದೆ. ಇದು ರಕ್ತ ಪರಿಚಲನೆಯನ್ನು ಸುಧಾರಿಸಿ ಕೂದಲು ಉದುರುವಿಕೆಯನ್ನು ತಡೆಯುತ್ತದೆ. ಅಲ್ಲದೆ ಕೂದಲಿನ ಬೆಳವಣಿಗೆಯನ್ನು ಉತ್ತೇಜಿಸುತ್ತದೆ.
ಮಧುಮೇಹಿಗಳು ರಾಗಿ ಅಂಬಲಿಯನ್ನು ಸೇವಿಸಬಹುದು. ರಾಗಿ ಅಂಬಲಿಯಲ್ಲಿರುವ ಪಾಲಿಫಿನಾಲ್‌ಗಳು ಮತ್ತು ಆಹಾರದ ನಾರುಗಳು ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ರಾಗಿ ಅಂಬಲಿಯನ್ನು ನಿಯಮಿತವಾಗಿ ಸೇವಿಸಿದರೆ ದೇಹದಲ್ಲಿ ಉತ್ತಮ ಕೊಬ್ಬು ಹೆಚ್ಚಾಗುತ್ತದೆ. ಇದು ಹೃದಯ ಸ್ನಾಯುಗಳ ಕಾರ್ಯಕ್ಷಮತೆ ಮತ್ತು ಆರೋಗ್ಯವನ್ನು ಸುಧಾರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.
ರಾಗಿ ಅಂಬಲಿ ಕಬ್ಬಿಣಕ್ಕೆ ಹೆಸರುವಾಸಿಯಾಗಿದೆ. ಹೀಗಾಗಿ ಹಿಮೋಗ್ಲೋಬಿನ್ ಕಡಿಮೆ ಇರುವವರು, ರಕ್ತಹೀನತೆಯಿಂದ ಬಳಲುತ್ತಿರುವವರು ನಿಯಮಿತವಾಗಿ ರಾಗಿ ಮಾಲ್ಟ್ ಸೇವಿಸಿದರೆ ಈ ಸಮಸ್ಯೆಯಿಂದ ಪರಿಹಾರ ಪಡೆಯಬಹುದು.
ರಾಗಿ ಮಾಲ್ಟ್‌ನಲ್ಲಿ ಕ್ಯಾಲ್ಸಿಯಂ ಹೇರಳವಾಗಿದೆ. ಇದು ಮೂಳೆಗಳ ಆರೋಗ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಇದರಲ್ಲಿರುವ ರಂಜಕವು ಹಲ್ಲುಗಳ ಆರೋಗ್ಯವನ್ನೂ ಕಾಪಾಡುತ್ತದೆ.
ತೂಕ ಇಳಿಸಿಕೊಳ್ಳಲು ಬಯಸುವಿರಾ? ಹಾಗಾದರೆ ಪ್ರತಿದಿನ ಬೆಳಿಗ್ಗೆ ಉಪಾಹಾರಕ್ಕೆ ಬದಲಾಗಿ ರಾಗಿ ಮಾಲ್ಟ್ ಸೇವಿಸಿ. ಇದರಲ್ಲಿರುವ ನಾರಿನ ಅಂಶವು ಹೊಟ್ಟೆ ತುಂಬಿದ ಭಾವನೆಯನ್ನು ಉಂಟುಮಾಡುತ್ತದೆ.
ಆತಂಕ, ಖಿನ್ನತೆ, ನಿದ್ರಾಹೀನತೆ ಮುಂತಾದ ಸಮಸ್ಯೆಗಳನ್ನು ದೂರ ಮಾಡಲು ರಾಗಿ ಮಾಲ್ಟ್ ಸಹಾಯಕವಾಗಿದೆ. ಇದರಲ್ಲಿರುವ ಉತ್ಕರ್ಷಣ ನಿರೋಧಕಗಳು ಮತ್ತು ಅಮೈನೋ ಆಮ್ಲಗಳು ದೇಹಕ್ಕೆ ವಿಶ್ರಾಂತಿ ನೀಡುತ್ತವೆ.
ಮೇಲೆ ತಿಳಿಸಿದ ವಿಷಯಗಳು ಕೇವಲ ಪ್ರಾಥಮಿಕ ಮಾಹಿತಿಗೆ ಮಾತ್ರ. ಆರೋಗ್ಯಕ್ಕೆ ಸಂಬಂಧಿಸಿದಂತೆ ವೈದ್ಯರ ಸಲಹೆ ಪಾಲಿಸುವುದೇ ಉತ್ತಮ.