ರಾಗಿಯಲ್ಲಿ ಕಬ್ಬಿಣಾಂಶ, ಟ್ರಿಪ್ಟೊಫಾನ್ ಮತ್ತು ಆ್ಯಂಟಿಆಕ್ಸಿಡೆಂಟ್ ಗುಣಗಳಿವೆ. ಇದನ್ನು ಪ್ರತಿದಿನ ಸೇವಿಸುವುದರಿಂದ ಮೆದುಳಿನ ಕಾರ್ಯಕ್ಷಮತೆ ಸುಧಾರಿಸುತ್ತದೆ ಮತ್ತು ರಾತ್ರಿ ಒಳ್ಳೆಯ ನಿದ್ದೆ ಬರುತ್ತದೆ.
health-life Oct 24 2026
Author: Shriram Bhat Image Credits:Getty
Kannada
ಮೂಳೆಗಳ ಆರೋಗ್ಯ ಸುಧಾರಿಸುತ್ತದೆ
ರಾಗಿಯಲ್ಲಿ ಕ್ಯಾಲ್ಸಿಯಂ ಪ್ರಮಾಣ ಹೇರಳವಾಗಿದೆ. ಪ್ರತಿದಿನ ರಾಗಿ ಸೇವಿಸುವುದರಿಂದ ಮೂಳೆಗಳು ಬಲಶಾಲಿಯಾಗುತ್ತವೆ ಮತ್ತು ಮೂಳೆಗಳ ಆರೋಗ್ಯ ಸುಧಾರಿಸುತ್ತದೆ.
Image credits: Getty
Kannada
ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣ
ರಾಗಿಯಲ್ಲಿ ಹೆಚ್ಚಿನ ಪ್ರಮಾಣದ ಫೈಬರ್ ಇದೆ. ಜೊತೆಗೆ ಇದರ ಗ್ಲೈಸೆಮಿಕ್ ಇಂಡೆಕ್ಸ್ ತುಂಬಾ ಕಡಿಮೆ. ಹೀಗಾಗಿ ಪ್ರತಿದಿನ ರಾಗಿ ತಿಂದರೆ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣದಲ್ಲಿರುತ್ತದೆ.
Image credits: Getty
Kannada
ಕರುಳಿನ ಆರೋಗ್ಯಕ್ಕೆ ಉತ್ತಮ
ಇದರಲ್ಲಿರುವ ಡಯೆಟರಿ ಫೈಬರ್ ಜೀರ್ಣಕ್ರಿಯೆಯನ್ನು ಸುಲಭಗೊಳಿಸುತ್ತದೆ. ಮಲಬದ್ಧತೆ ಸಮಸ್ಯೆಯನ್ನು ದೂರ ಮಾಡಿ, ಕರುಳಿನ ಆರೋಗ್ಯವನ್ನು ಕಾಪಾಡಲು ರಾಗಿ ತುಂಬಾ ಸಹಕಾರಿ.