Health
ಮೂತ್ರಪಿಂಡದ ಕಾಯಿಲೆಯ ಆರಂಭಿಕ ಹಂತಗಳು ಸಾಮಾನ್ಯವಾಗಿ ಯಾವುದೇ ಗಮನಾರ್ಹ ಲಕ್ಷಣಗಳನ್ನು ಹೊಂದಿರುವುದಿಲ್ಲ. ಅದ್ಯಾಗೂ ಕೆಲವು ಲಕ್ಷಣಗಳಿಂದ ತಿಳಿದು ಸೂಕ್ತ ಚಿಕಿತ್ಸೆ ಪಡೆದರೆ ಒಳ್ಳೆಯದು.
ರಾತ್ರಿಯಲ್ಲಿ ಪದೇ ಪದೇ ಮೂತ್ರ ವಿಸರ್ಜನೆ ಮಾಡಬೇಕಾದ ಅವಶ್ಯಕತೆ. ಮೂತ್ರ ಬರುತ್ತಿದೆ ಎಂದು ಅನಿಸಿದರೂ ಬಾರದಿರುವುದು ಮುಂತಾದ ಲಕ್ಷಣಗಳು ಕಂಡುಬಂದರೆ ಮೂತ್ರಪಿಂಡದ ಸಮಸ್ಯೆಗಳ ಸಂಕೇತ ಎನ್ನಬಹುದು.
ಮೂತ್ರಪಿಂಡ ಸಂಬಂಧಿ ಸಮಸ್ಯೆಗಳಿರುವವರಲ್ಲಿ ಕೆಂಪು ರಕ್ತ ಕಣಗಳ ಸಂಖ್ಯೆ ಕಡಿಮೆ ಆಗುತ್ತೆ.ಇದು ರಕ್ತಹೀನತೆ ಸಮಸ್ಯೆಗೆ ಬರುತ್ತದೆ. ತಲೆತಿರುಗುವಿಕೆ ಮುಂತಾದ ಲಕ್ಷಣ ಕಂಡುಬಂದರೆ ಮೂತ್ರಪಿಂಡದ ಆರೋಗ್ಯ ಹದಗೆಡುತ್ತಿದೆಂದರ್ಥ
ಪ್ರತಿದಿನ ಬಾಯಿ ರುಚಿ ಇಲ್ಲದಂತೆ ಅನಿಸಿದರೂ, ಸೇವಿಸುವ ಆಹಾರದ ರುಚಿ ತಿಳಿಯದಿರುವುದು ಕೂಡ ಮೂತ್ರಪಿಂಡದ ಸಮಸ್ಯೆಗಳ ಲಕ್ಷಣ ಎನ್ನಬಹುದು.
ಬಾಯಿ ದುರ್ವಾಸನೆ ಕೂಡ ಮೂತ್ರಪಿಂಡ ಸಂಬಂಧಿ ಸಮಸ್ಯೆಗಳ ಪ್ರಾಥಮಿಕ ಸಂಕೇತ ಎಂದು ತಜ್ಞರು ಹೇಳುತ್ತಾರೆ. ದೀರ್ಘಕಾಲ ಈ ಸಮಸ್ಯೆ ಇದ್ದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು.
ಮೂತ್ರಪಿಂಡದ ಸಮಸ್ಯೆ ಇರುವವರಲ್ಲಿ ವಾಕರಿಕೆ, ವಾಂತಿ, ಹಸಿವು ಕಡಿಮೆಯಾಗುವುದು ಮುಂತಾದ ಲಕ್ಷಣಗಳು ಕಂಡುಬರುತ್ತವೆ ಎಂದು ವೈದ್ಯರು ಹೇಳುತ್ತಾರೆ.
ಮೂತ್ರಪಿಂಡದ ಆರೋಗ್ಯದಲ್ಲಿ ತೊಂದರೆಗಳಿದ್ದರೆ ಚರ್ಮ ಒಣಗುವುದು, ತುರಿಕೆ ಮುಂತಾದ ಸಮಸ್ಯೆಗಳು ಕಾಡುತ್ತವೆ ಎಂದು ತಜ್ಞರು ಹೇಳುತ್ತಾರೆ.
ಮೇಲೆ ತಿಳಿಸಿದ ವಿಷಯಗಳು ಕೇವಲ ಪ್ರಾಥಮಿಕ ಮಾಹಿತಿಗೆ ಮಾತ್ರ. ಆರೋಗ್ಯಕ್ಕೆ ಸಂಬಂಧಿಸಿದಂತೆ ವೈದ್ಯರ ಸಲಹೆ ಪಾಲಿಸುವುದೇ ಉತ್ತಮ.