India
ಉತ್ತರಾಖಂಡದ ಅಲ್ಮೋರಾದಲ್ಲಿ ಸೋಮವಾರ ಬೆಳಗ್ಗೆ 8 ಗಂಟೆಗೆ ಭೀಕರ ಅಪಘಾತ ಸಂಭವಿಸಿದೆ. ಪ್ರಯಾಣಿಕರಿಂದ ತುಂಬಿದ್ದ ಬಸ್ 200 ಅಡಿಗಳ ಕಂದಕಕ್ಕೆ ಬಿದ್ದಿದೆ. ಈ ಅಪಘಾತದಲ್ಲಿ 36 ಜನರು ಸಾವನ್ನಪ್ಪಿದ್ದಾರೆ.
ಈ ಭೀಕರ ಅಪಘಾತ ಅಲ್ಮೋರಾದ ಕೂಪಿಯಲ್ಲಿ ಸಂಭವಿಸಿದೆ. ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯರು ಗಾಯಾಳುಗಳನ್ನು ರಕ್ಷಿಸಿದ್ದಾರೆ. 14 ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಪೊಲೀಸರು, SDRF,NDRF ತಂಡಗಳು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡವು. ಹೆಚ್ಚಿನವರು ತೀವ್ರವಾಗಿ ಗಾಯಗೊಂಡಿರುವುದರಿಂದ ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.
ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅಪಘಾತದ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ 4 ಲಕ್ಷ ರೂಪಾಯಿ, ಗಾಯಾಳುಗಳಿಗೆ ತಲಾ 1 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ನೈನಿಡಾಂಡದ ಕಿನಾಥ್‌ನಿಂದ ರಾಮ್‌ನಗರಕ್ಕೆ ಹೋಗುತ್ತಿದ್ದ ಬಸ್ ವೇಗವಾಗಿ ಚಲಿಸುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದಿದೆ ಎಂದು ಅಲ್ಮೋರಾ ಎಸ್ಪಿ ತಿಳಿಸಿದ್ದಾರೆ.
ಕಂದಕಕ್ಕೆ ಬೀಳುವ ಮೊದಲು ಬಸ್ಸು ಮರಕ್ಕೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಈ ಘಟನೆಯಲ್ಲಿ ಹಲವು ಪ್ರಯಾಣಿಕರು ಕಿಟಕಿಗಳಿಂದ ಹೊರಗೆ ಬಂದಿದ್ದಾರೆ.
ಜಮ್ಮು-ಕಾಶ್ಮೀರದಲ್ಲಿ ಅಬ್ದುಲ್ಲಾ ಸರ್ಕಾರ; ಮತ್ತೆ ಹೆಚ್ಚಾಯ್ತು ಉಗ್ರರ ಉಪಟಳ!
ಮಿರಯಾ ವಾದ್ರಾ: ಪ್ರಿಯಾಂಕಾ ಗಾಂಧಿ ಮಗಳೇನು ಮಾಡ್ತಿದ್ದಾಳೆ?
ಡಿಜಿಟಲ್ ಅರೆಸ್ಟ್ ಸ್ಕ್ಯಾಮ್‌ನಿಂದ ಎಸ್ಕೇಪ್ ಆಗಲು ಇಲ್ಲಿದೆ ಅಷ್ಟಸೂತ್ರ
ಇರಾನ್ ದಾಳಿಗೆ ಪ್ರತಿಕಾರ ತೀರಿಸಿಕೊಂಡ ಇಸ್ರೇಲ್! ಸೇನಾ ನೆಲೆಗಳ ಮೇಲೆ ಐಡಿಎಫ್ ದಾಳಿ