Politics
ದೆಹಲಿ ವಿಧಾನಸಭಾ ಚುನಾವಣೆ ಕಾವು ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ, ಕಾಂಗ್ರೆಸ್‌ನಲ್ಲಿ ರಾಹುಲ್ ಗಾಂಧಿ ಬದಲಿಗೆ ಪ್ರಿಯಾಂಕಾ ಗಾಂಧಿ ಪಕ್ಷವನ್ನು ಮುನ್ನಡೆಸಲಿದ್ದಾರೆ ಎಂದು ಘೋಷಿಸಲಾಗಿದೆ.
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ಭಾಗವಹಿಸಬೇಕಿದ್ದ ಎರಡು ಪ್ರಚಾರ ಸಭೆಗಳು ರದ್ದಾಗಿವೆ.
ಹೀಗಾಗಿ ಕಾಂಗ್ರೆಸ್ ಪ್ರಚಾರವನ್ನು ರಾಹುಲ್ ಗಾಂಧಿ ಬದಲಿಗೆ ಪ್ರಿಯಾಂಕಾ ಗಾಂಧಿ ಮುನ್ನಡೆಸಲಿದ್ದಾರೆ ಎಂದು ಘೋಷಿಸಲಾಗಿದೆ.
ರಾಹುಲ್ ಗಾಂಧಿ ಅವರಿಗೆ ಅನಾರೋಗ್ಯದ ಕಾರಣ ದೆಹಲಿ ರ್ಯಾಲಿಯಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ ಎಂದು ದೆಹಲಿ ಕಾಂಗ್ರೆಸ್ ಅಧ್ಯಕ್ಷ ದೇವೇಂದರ್ ಯಾದವ್ ತಿಳಿಸಿದ್ದಾರೆ.
ಜನವರಿ 20 ರಂದು ರಾಹುಲ್ ಗಾಂಧಿ ದೆಹಲಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಂದೀಪ್ ದೀಕ್ಷಿತ್ ಜೊತೆ ಪ್ರಚಾರ ಮಾಡಬೇಕಿತ್ತು. ಆದರೆ ಅನಾರೋಗ್ಯದ ಕಾರಣ ಸಾಧ್ಯವಾಗಲಿಲ್ಲ.
ದೆಹಲಿಯಲ್ಲಿ ಅಧಿಕಾರ ಹಿಡಿಯಬೇಕೆಂದು ಕಾಂಗ್ರೆಸ್ ತೀವ್ರವಾಗಿ ಪ್ರಯತ್ನಿಸುತ್ತಿರುವಾಗ, ರಾಹುಲ್ ಗಾಂಧಿ ಅವರ ಅನಾರೋಗ್ಯ ಹಿನ್ನಡೆಯಾಗಿ ಕಾಣುತ್ತಿದೆ.