Asianet Suvarna News Asianet Suvarna News

ಹೊಸ ವರ್ಷಕ್ಕೆ ಜಿಯೋ ಕೊಡುಗೆ, ಮೈಸೂರಿನಲ್ಲಿ ಟ್ರೂ 5ಜಿ ಸೇವೆ ಆರಂಭ!

ಹೊಸ ವರ್ಷದ ಹೊಸ್ತಿಲಲ್ಲಿ ರಿಲಯನ್ಸ್ ಜಿಯೋ ಹೊಸ ಕೂಡುಗೆ ನೀಡಿದೆ. ಮೈಸೂರಿನಲ್ಲಿ ಟ್ರೂ ಜಿಯೋ ಸೇವೆ ಆರಂಭಿಸಿದೆ. ಇದರ ಜೊತೆಗೆ ಹೆಚ್ಚುವರಿ ವೆಚ್ಚವಿಲ್ಲದೆ ಹೊಸ ಆಫರ್ ನೀಡಲಾಗಿದೆ.

Reliance Jio launches true 5g service in Mysuru Karnataka and 10 other cities ahead of New year 2023 ckm
Author
First Published Dec 28, 2022, 7:53 PM IST

ಮೈಸೂರು(ಡಿ.28) ಹೊಸ ವರ್ಷಕ್ಕೆ ಇನ್ನೆರಡು ದಿನ ಮಾತ್ರ ಬಾಕಿ. ಎಲ್ಲೆಡೆ ಸಂಭ್ರಮ ಆರಂಭಗೊಂಡಿದೆ. ಇದರ ನಡುವೆ ಕರ್ನಾಟಕಕ್ಕೆ ಜಿಯೋ ಬಂಪರ್ ಕೂಡುಗೆ ನೀಡಿದೆ. ಮೈಸೂರಿನಲ್ಲಿ ಜಿಯೋ ಟ್ರೂ5ಜಿ ಸೇವೆ ಆರಂಭಗೊಂಡಿದೆ. ಮೈಸೂರು ಸೇರಿದಂತೆ  ದೇಶದ 11 ನಗರಗಳಲ್ಲಿ ಟ್ರೂ 5ಜಿ ಸೇವೆ ಆರಂಭಿಸಲಾಗಿದೆ. ಲಖನೌ, ತಿರುವನಂತಪುರ, ನಾಸಿಕ್, ಔರಂಗಾಬಾದ್, ಚಂಡೀಗಢ, ಮೊಹಾಲಿ, ಪಂಚಕುಲ, ಜಿರಾಕ್‌ಪುರ, ಖರಾರ್ ಮತ್ತು ದೇರಾಬಸ್ಸಿ ನಗರದಲ್ಲಿ ಇದೀಗ ಜಿಯೋ ಟ್ರೂ5ಜಿ ಸೇವೆಗೆ ಚಾಲನೆ ನೀಡಲಾಗಿದೆ.  ರಿಲಯನ್ಸ್ ಜಿಯೋ ಮೊಹಾಲಿ, ಪಂಚಕುಲ, ಜಿರಾಕ್‌ಪುರ, ಖರಾರ್ ಮತ್ತು ದೇರಾಬಸ್ಸಿ ಪ್ರದೇಶಗಳನ್ನು ಒಳಗೊಂಡಂತೆ, ತಿರುವನಂತಪುರ, ಮೈಸೂರು, ನಾಸಿಕ್, ಔರಂಗಾಬಾದ್, ಚಂಡೀಗಢ ಟ್ರೈಸಿಟಿಯಲ್ಲಿ 5ಜಿ ಸೇವೆಗಳನ್ನು ಪ್ರಾರಂಭಿಸುವ ಮೊದಲ ಮತ್ತು ಏಕೈಕ ಆಪರೇಟರ್ ಆಗಿದೆ.
 
ಮೈಸೂರು ಸೇರಿದಂತೆ 11 ನಗರಗಳಲ್ಲಿ ಆರಂಭಗೊಂಡಿರುವ ಟ್ರೂ 5ಜಿ ಸೇವೆಗೆ ಯಾವುದೇ ಹೆಚ್ಚುವರಿ ವೆಚ್ಚವಿಲ್ಲ. 1 ಜಿಬಿಪಿಎಸ್+ ವೇಗದಲ್ಲಿ ಅನಿಯಮಿತ ಡೇಟಾವನ್ನು ಅನುಭವಿಸಲು ಈ ನಗರಗಳಲ್ಲಿನ ಜಿಯೋ ಬಳಕೆದಾರರನ್ನು ಜಿಯೋ ವೆಲ್‌ಕಂ ಆಫರ್‌ಗಾಗಿ ಆಹ್ವಾನಿಸಲಾಗುತ್ತದೆ.

 

ಐಫೋನ್ ಬಳಕೆದಾರರಿಗೆ ಗುಡ್ ನ್ಯೂಸ್, ಅನ್‌ಲಿಮಿಟೆಡ್ ಡೇಟಾ ಜೊತೆ ಜಿಯೋ ಟ್ರು 5ಜಿ ಸೇವೆ ಲಭ್ಯ!

ಮೈಸೂರು ನಗರದಲ್ಲಿ 5ಜಿ ಆರಂಭಿಸುವುದಕ್ಕೆ ನಾವು ಹೆಮ್ಮೆಪಡುತ್ತೇವೆ ಮತ್ತು ನಾವು ಟ್ರೂ 5ಜಿ ಸೇವೆಗಳನ್ನು ಹೊರತರಲು ಪ್ರಾರಂಭಿಸಿದಾಗಿನಿಂದ ನಮ್ಮ ಅತಿದೊಡ್ಡ ಆರಂಭದಲ್ಲಿ ಇದು ಒಂದಾಗಿದೆ. ಜಿಯೋ ಟ್ರೂ 5ಜಿ ತಂತ್ರಜ್ಞಾನದ ವೇರಿಯಂಟ್‌ ಪ್ರಯೋಜನಗಳನ್ನು ಆನಂದಿಸುವ ಮೂಲಕ ಈಗ 2023ರಿಂದ ಪ್ರಾರಂಭ ಆಗುವುದರೊಂದಿಗೆ ಲಕ್ಷಾಂತರ ಜಿಯೋ ಬಳಕೆದಾರರಿಗೆ ಇದು ಗೌರವವಾಗಿದೆ ಎಂದು ಜಿಯೋ ವಕ್ತಾರರು ಹೇಳಿದ್ದಾರೆ.

"ಈ ನಗರಗಳು ಪ್ರಮುಖ ಪ್ರವಾಸೋದ್ಯಮ ತಾಣಗಳು ಮತ್ತು ನಮ್ಮ ದೇಶದ ಪ್ರಮುಖ ಶಿಕ್ಷಣ ಕೇಂದ್ರಗಳಾಗಿವೆ. ಜಿಯೋದ ಟ್ರೂ 5ಜಿ ಸೇವೆಗಳ ಪ್ರಾರಂಭದೊಂದಿಗೆ, ಈ ಪ್ರದೇಶದ ಗ್ರಾಹಕರು ಉತ್ತಮ ದೂರಸಂಪರ್ಕ ಜಾಲವನ್ನು ಪಡೆಯುತ್ತಾರೆ ಮಾತ್ರ ಅಲ್ಲ, ಆದರೆ ಇ-ಆಡಳಿತ, ಶಿಕ್ಷಣ, ಆಟೋಮೇಷನ್, ಕೃತಕ ಬುದ್ಧಿಮತ್ತೆ, ಗೇಮಿಂಗ್, ಆರೋಗ್ಯ, ಕೃಷಿ, ಐಟಿ ಕ್ಷೇತ್ರಗಳಲ್ಲಿ ಸಣ್ಣ ಮತ್ತು ಮಧ್ಯಮ ಸಂಸ್ಥೆಗಳು ಅಮೋಘ ಬೆಳವಣಿಗೆಯ ಅವಕಾಶಗಳನ್ನು ಪಡೆಯುತ್ತಾರೆ. 

 

ಜಿಯೋ ಹಾಗೂ ಒನ್‌ಪ್ಲಸ್ ಒಪ್ಪಂದ, ಎಲ್ಲಾ ಫೋನ್‌ಗಳಲ್ಲಿ ಟ್ರೂ 5G ತಂತ್ರಜ್ಞಾನ ಲಭ್ಯ!

"ಚಂಡೀಗಢ ಆಡಳಿತ, ಪಂಜಾಬ್, ಹರ್ಯಾಣ, ಕೇರಳ, ಕರ್ನಾಟಕ, ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶ ರಾಜ್ಯ ಸರ್ಕಾರಗಳು ಈ ಪ್ರದೇಶವನ್ನು ಡಿಜಿಟಲೈಸ್ ಮಾಡುವ ನಮ್ಮ ಪ್ರಯತ್ನದಲ್ಲಿ ನಿರಂತರ ಬೆಂಬಲ ನೀಡುತ್ತಿರುವುದಕ್ಕೆ ನಾವು ಕೃತಜ್ಞರಾಗಿರುತ್ತೇವೆ ಎಂದರು.

ಮುಕೇಶ್ ಅಂಬಾನಿ ನೇತೃತ್ವದಲ್ಲಿ ರಿಲಯನ್ಸ್ ಲಾಭ 20 ವರ್ಷಗಳಲ್ಲಿ 20 ಪಟ್ಟು ಹೆಚ್ಚಳ
ಮುಕೇಶ್ ಅಂಬಾನಿ ಅವರು ಇಪ್ಪತ್ತು ವರ್ಷಗಳ ಹಿಂದೆ ರಿಲಯನ್ಸ್‌ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಕವಾದರು. ರಿಲಯನ್ಸ್‌ನ ಜವಾಬ್ದಾರಿ ವಹಿಸಿಕೊಂಡಾಗಿನಿಂದ ಕಂಪನಿಯನ್ನು ಯಶಸ್ಸಿನ ಹಾದಿಯಲ್ಲಿ ಮುನ್ನಡೆಸಲು ಆರಂಭಿಸಿದ ಅಂಬಾನಿ, ಆ ಪ್ರಕ್ರಿಯೆಯನ್ನು ಇಂದಿಗೂ ಮುಂದುವರಿಸಿದ್ದಾರೆ. ಮುಕೇಶ್ ಅಂಬಾನಿ ಅವರ ನಾಯಕತ್ವದಲ್ಲಿ ಕಂಪನಿಯು ಕಳೆದ ಎರಡು ದಶಕಗಳಲ್ಲಿ ಆದಾಯ, ಲಾಭ ಮತ್ತು ಮಾರುಕಟ್ಟೆ ಬಂಡವಾಳ ಮೌಲ್ಯದಲ್ಲಿ ಸ್ಥಿರವಾದ ಎರಡಂಕಿ ಬೆಳವಣಿಗೆ ದರಗಳನ್ನು ಸಾಧಿಸಿದೆ. ಈ ಅವಧಿಯಲ್ಲಿ ಕಂಪನಿಯ ಮಾರುಕಟ್ಟೆ ಬಂಡವಾಳ ಮೌಲ್ಯ 42 ಪಟ್ಟು ಮತ್ತು ಲಾಭದ ಪ್ರಮಾಣವು ಸುಮಾರು 20 ಪಟ್ಟು ಹೆಚ್ಚಾಗಿದೆ.

Follow Us:
Download App:
  • android
  • ios