ಬೆಂಗಳೂರು: ಬಿಎಂಟಿಸಿ ಬಸ್‌ನಲ್ಲಿ ಮಹಿಳೆಯರಿಗೆ ಪ್ರಯಾಣ ಉಚಿತ?
ಮಹಿಳೆಯರಿಗೆ ಸುರಕ್ಷಿತ ಮತ್ತು ಭದ್ರತೆಯುಳ್ಳ ಸಾರ್ವಜನಿಕ ಸಾರಿಗೆ ಸೌಲಭ್ಯ ಒದಗಿಸುವುದು ಬಿಎಂಟಿಸಿ ಉದ್ದೇಶವಾಗಿದೆ. ಮಹಿಳಾ ದಿನದಂದು ಬಿಎಂಟಿಸಿ ಬಸ್‌ಗಳಲ್ಲಿ ಮಹಿಳೆಯರು ಒಂದು ದಿನ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡುವ ಮೂಲಕ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಕುರಿತು ಅರಿವು ಮೂಡಿಸಿದಂತಾಗಲಿದೆ. ಜೊತೆಗೆ ವಿಶ್ವ ಮಹಿಳಾ ದಿನದಂದು ಮಹಿಳೆಯರಿಗೆ ವಿಶೇಷ ಕೊಡುಗೆ ನೀಡಿದಂತಾಗಲಿದೆ ಎಂದು ನಿಗಮದ ಚಿಂತನೆ.
ಬೆಂಗಳೂರು(ಮಾ.04): ವಿಶ್ವ ಮಹಿಳೆಯರ ದಿನದಂದು ಬಿಎಂಟಿಸಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ಮೂಲಕ ಸಾರ್ವಜನಿಕ ಸಾರಿಗೆ ಉತ್ತೇಜಿಸಲು ಬಿಎಂಟಿಸಿ ಯೋಜಿಸಿದ್ದು, ಈ ಬಗ್ಗೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.
ಮಹಿಳೆಯರಿಗೆ ಸುರಕ್ಷಿತ ಮತ್ತು ಭದ್ರತೆಯುಳ್ಳ ಸಾರ್ವಜನಿಕ ಸಾರಿಗೆ ಸೌಲಭ್ಯ ಒದಗಿಸುವುದು ಬಿಎಂಟಿಸಿ ಉದ್ದೇಶವಾಗಿದೆ. ಮಹಿಳಾ ದಿನದಂದು ಬಿಎಂಟಿಸಿ ಬಸ್‌ಗಳಲ್ಲಿ ಮಹಿಳೆಯರು ಒಂದು ದಿನ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡುವ ಮೂಲಕ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಕುರಿತು ಅರಿವು ಮೂಡಿಸಿದಂತಾಗಲಿದೆ. ಜೊತೆಗೆ ವಿಶ್ವ ಮಹಿಳಾ ದಿನದಂದು ಮಹಿಳೆಯರಿಗೆ ವಿಶೇಷ ಕೊಡುಗೆ ನೀಡಿದಂತಾಗಲಿದೆ ಎಂದು ನಿಗಮ ಚಿಂತನೆ ನಡೆಸಿದ್ದು ಪ್ರಸ್ತಾವನೆ ಮೂಲಕ ಸರ್ಕಾರಕ್ಕೆ ಈ ಕುರಿತು ಮನವರಿಕೆ ಮಾಡಿಕೊಡಲು ಪ್ರಯತ್ನಿಸಿದೆ.
1 ರೂಪಾಯಿ ಚಿಲ್ಲರೆ ಕೊಡದ ಕಂಡಕ್ಟರ್‌ಗೆ 3 ಸಾವಿರ ರೂ. ದಂಡ: ಬಿಎಂಟಿಸಿ ಸಿಬ್ಬಂದಿಗೆ ಕೋರ್ಟ್ ತರಾಟೆ
ಬೆಂಗಳೂರಿನಲ್ಲಿ 40,86,580 ಮಹಿಳೆಯರಿದ್ದು, ಅದರಲ್ಲಿ ಪ್ರತಿದಿನ 10,21,645 ಮಂದಿ ಮಹಿಳೆಯರು ಬಿಎಂಟಿಸಿ ಬಸ್‌ಗಳಲ್ಲಿ ಸಂಚರಿಸುತ್ತಾರೆ ಎಂದು ಅಂದಾಜಿಸಲಾಗಿದೆ. ಮಹಿಳಾ ದಿನವಾದ ಮಾರ್ಚ್ 8ರಂದು ಉಚಿತ ಬಸ್ ಪ್ರಯಾಣಕ್ಕೆ ಅನುವು ಮಾಡಿಕೊಟ್ಟರೆ ಅಂದಾಜು 20.44 ಲಕ್ಷ ಮಹಿಳೆಯರು ಪ್ರಯಾಣಿಸುವ ಸಾಧ್ಯತೆ ಇದೆ. ಇದರಿಂದ ಬಿಎಂಟಿಸಿಗೆ ಸುಮಾರು 8.17 ಕೋಟಿ ಖರ್ಚಾಗುವ ನಿರೀಕ್ಷೆ ಇದೆ ಎಂದು ಅಂದಾಜಿಸಲಾಗಿದೆ.
ಆದರೆ, ಮಾರ್ಚ್ 8ರಂದು ಮಹಿಳೆಯರಿಗೆ ಉಚಿತ ಸೇವೆ ನೀಡುವುದರಿಂದ ನಿಗಮಕ್ಕೆ ಮುಂದಿನ ದಿನಗಳಲ್ಲಿ ಹೆಚ್ಚಿನ ಅನುಕೂಲವಾಗಲಿದೆ. ಮಹಿಳೆಯರು ಬಿಎಂಟಿಸಿ ಬಸ್‌ಗಳಲ್ಲಿ ಇನ್ನಷ್ಟು ಸಂಖ್ಯೆಯಲ್ಲಿ ಸಂಚರಿಸಲು ಅನುಕೂಲವಾಗಲಿದೆ ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಸತ್ಯವತಿ ಅವರು ಪ್ರಸ್ತಾವನೆಯಲ್ಲಿ ಉಲ್ಲೇಖಿಸಿದ್ದಾರೆ ಎಂದು ಸಾರಿಗೆ ಇಲಾಖೆ ಮೂಲಗಳು ಮಾಹಿತಿ ನೀಡಿವೆ.