Asianet Suvarna News Asianet Suvarna News

Women's Day 2022: ಮಹಿಳಾ ದಿನಾಚರಣೆ ಹಿಂದಿನ ಬಲವಾದ ಕಾರಣ ನಿಮಗ್ಗೊತ್ತಾ?

ಮಹಿಳೆಯ ಹೋರಾಟ ಇಂದು-ನಿನ್ನೆಯದಲ್ಲ. ಸದಾ ತನ್ನ ಹಕ್ಕಿಗಾಗಿ ಮಹಿಳೆ ಕಾದಾಡಿದ್ದಾಳೆ. ಪ್ರಪಂಚ ಇಷ್ಟು ಮುಂದುವರೆದಿದ್ದರೂ ಮಹಿಳೆಗೆ ಸಿಗಬೇಕಾದ ಸ್ಥಾನ ಇನ್ನೂ ಸಂಪೂರ್ಣವಾಗಿ ಸಿಕ್ಕಿಲ್ಲ. ಪ್ರತಿ ವರ್ಷ ಮಹಿಳಾ ದಿನಾಚರಣೆ ಆಚರಿಸಲಾಗುತ್ತದೆ. ಇಂದು ಅದ್ರ ಇತಿಹಾಸ, ಮಹತ್ವದ ಬಗ್ಗೆ ತಿಳಿಯೋಣ.

Know The history and significance of international womens day
Author
Bangalore, First Published Mar 2, 2022, 5:26 PM IST | Last Updated Mar 2, 2022, 5:26 PM IST

ಮಹಿಳೆ (Woman) ಸಮಾಜದ ಶಕ್ತಿ (Power). ಕುಟುಂಬದ ಕಣ್ಣು. ಸಮಾಜ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಮಹಿಳೆ ಪ್ರಮುಖ ಪಾತ್ರ ವಹಿಸಿದ್ದಾಳೆ. ಹಿಂದಿನ ಕಾಲದಲ್ಲಿ ಬೆರಳೆಣಿಕೆಯಷ್ಟು ಮಹಿಳೆಯರು ಮಾತ್ರ ಮನೆಯಿಂದ ಹೊರಗೆ ಬಂದು ದುಡಿಯುತ್ತಿದ್ದರು. ಆದ್ರೀಗ ಕಾಲ ಬದಲಾಗಿದೆ. ಮಹಿಳೆ ತಾನು ಎಲ್ಲವನ್ನೂ ನಿಭಾಯಿಸಬಲ್ಲೆ ಎಂಬುದನ್ನು ತೋರಿಸಿಕೊಟ್ಟಿದ್ದಾಳೆ. ಗಡಿ ಕಾಯುವುದ್ರಿಂದ ಹಿಡಿದು ಕುಟುಂಬದ ಪ್ರತಿಯೊಂದು ಕೆಲಸವನ್ನು ಅಚ್ಚುಕಟ್ಟಾಗಿ ನಿರ್ವಹಿಸಬಲ್ಲ ಶಕ್ತಿ, ತಾಳ್ಮೆ, ಉತ್ಸಾಹ, ಧೈರ್ಯ ಮಹಿಳೆಗಿದೆ. ಪುರುಷರ ಸಮಾನವಾಗಿ ನಿಂತಿರುವ ಮಹಿಳೆಯರು ಅನೇಕ ಉನ್ನತ ಹುದ್ದೆಗಳನ್ನು ಸಂಭಾಳಿಸುತ್ತಿದ್ದಾರೆ.

ಇಷ್ಟರ ಮಧ್ಯೆಯೂ ತುಳಿತಕ್ಕೊಳಗಾಗ್ತಿರುವ, ಕೌಟುಂಬಿಕ ದೌರ್ಜನ್ಯಕ್ಕೆ ಬಲಿಯಾಗ್ತಿರುವ ಅನೇಕ ಮಹಿಳೆಯರು ನಮ್ಮಲ್ಲಿದ್ದಾರೆ. ಅವರಿಗೆ ಧೈರ್ಯ ನೀಡಿ, ಮಹಿಳೆಗೆ ತನ್ನ ಹಕ್ಕಿನ ಪರಿಚಯ ಮಾಡಿಸಿ, ಆಕೆಯನ್ನು ಸ್ವಾವಲಂಬಿ ಮಾಡುವ ಉದ್ದೇಶದಿಂದ, ಆಕೆಯ ಜೀವನವನ್ನು ಸುಂದರಗೊಳಿಸುವ ಉದ್ದೇಶದಿಂದ ಅಂತಾರಾಷ್ಟ್ರೀಯ ಮಹಿಳಾ ದಿನ (International Women's Day)ವನ್ನು ಆಚರಿಸಲಾಗುತ್ತದೆ. ಪ್ರತಿ ವರ್ಷ ಮಾರ್ಚ್ 8 ರಂದು ಮಹಿಳಾ ದಿನಾಚರಣೆಯನ್ನು ವಿಶ್ವದ ಎಲ್ಲ ದೇಶಗಳಲ್ಲಿ  ಆಯೋಜಿಸಲಾಗುತ್ತದೆ. ಆದರೆ ಅಂತಾರಾಷ್ಟ್ರೀಯ ಮಹಿಳಾ ದಿನದ ಆಚರಣೆ ಯಾವಾಗ ಮತ್ತು ಎಲ್ಲಿಂದ ಪ್ರಾರಂಭವಾಯಿತು ಎಂದು ನಿಮಗೆ ತಿಳಿದಿದೆಯೇ? ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ಮಾರ್ಚ್ 8 ರಂದು ಮಾತ್ರ ಏಕೆ ಆಚರಿಸಲಾಗುತ್ತದೆ ಮತ್ತು ಈ ವರ್ಷದ ಥೀಮ್ ಏನು ಎಂಬುದರ ಬಗ್ಗೆ ಮಾಹಿತಿ ಇಲ್ಲಿದೆ.  

ಮಹಿಳಾ ದಿನಾಚರಣೆ ಇತಿಹಾಸ : 1908ರಲ್ಲಿ ಅಮೆರಿಕದಲ್ಲಿ ಕಾರ್ಮಿಕ ಚಳವಳಿ ನಡೆದಿತ್ತು. ಇದರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ದುಡಿಯುವ ಮಹಿಳೆಯರು ಪಾಲ್ಗೊಂಡಿದ್ದರು. ಸುಮಾರು 15,000 ಮಹಿಳೆಯರು ನ್ಯೂಯಾರ್ಕ್ ಬೀದಿಗಳಲ್ಲಿ ಮೆರವಣಿಗೆ ನಡೆಸಿದ್ದರು ಮತ್ತು ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತಿದ್ದರು. ತಮ್ಮ ಕೆಲಸದ ಅವಧಿಯನ್ನು ಕಡಿಮೆ ಮಾಡಬೇಕು ಮತ್ತು ವೇತನ ಶ್ರೇಣಿಯನ್ನು ಹೆಚ್ಚಿಸಬೇಕು ಎಂದು ಕಾರ್ಮಿಕ ಮಹಿಳೆಯರು ಒತ್ತಾಯಿಸಿದ್ದರು. ಮಹಿಳೆಯರಿಗೂ ಮತದಾನದ ಹಕ್ಕನ್ನು ನೀಡಬೇಕೆಂದು ಬೇಡಿಕೆಯಿಟ್ಟಿದ್ದರು.  ಮಹಿಳೆಯರ ಧ್ವನಿ ಅಂದಿನ ಸರ್ಕಾರದ ಕಿವಿಗೆ ಬಿದ್ದಿತ್ತು. ನಂತರ 1909 ರಲ್ಲಿ, ಚಳುವಳಿಯ ಒಂದು ವರ್ಷದ ನಂತರ, ಅಮೆರಿಕಾದ ಸಮಾಜವಾದಿ ಪಕ್ಷ  ಮಹಿಳಾ ದಿನವನ್ನು ಘೋಷಿಸಿತು.    

ಹೊಸ ತಾಯಂದಿರ Back Pain ಸಮಸ್ಯೆಗೆ ಇಲ್ಲಿದೆ ಪರಿಹಾರ

ಮಾರ್ಚ್ 8 ರಂದು ಅಂತಾರಾಷ್ಟ್ರೀಯ ಮಹಿಳಾ ದಿನ : ಮಾರ್ಚ್ 8 ರಂದು ಅಮೆರಿಕಾದಲ್ಲಿ ಮಹಿಳೆಯರು ತಮ್ಮ ಹಕ್ಕುಗಳಿಗಾಗಿ ಮೆರವಣಿಗೆ ನಡೆಸಿದ್ದರು. ಅದರ ನಂತರ ಮುಂದಿನ ವರ್ಷ ಸಮಾಜವಾದಿ ಪಕ್ಷವು ಈ ದಿನದಂದೇ ಮಹಿಳಾ ದಿನವನ್ನು ಆಚರಿಸಲು ಘೋಷಿಸಿತು. 1917 ರಲ್ಲಿ ಮೊದಲ ಮಹಾಯುದ್ಧದ ಸಮಯದಲ್ಲಿ ರಷ್ಯಾದ ಮಹಿಳೆಯರು ಆಹಾರಕ್ಕಾಗಿ ಮುಷ್ಕರ ನಡೆಸಿದ್ದರು. ಯುದ್ಧದ ಬಗ್ಗೆ ತಮ್ಮ ಅಭಿಪ್ರಾಯ ಮುಂದಿಟ್ಟಿದ್ದರು. ಇದರ ನಂತರ ಚಕ್ರವರ್ತಿ ನಿಕೋಲಸ್  ರಾಜೀನಾಮೆ ನೀಡಿದರು ಮತ್ತು ಮಹಿಳೆಯರು ಮತದಾನದ ಹಕ್ಕನ್ನು ಪಡೆದರು. ಇದರ ಹಿನ್ನಲೆಯಲ್ಲಿ  ಯುರೋಪ್‌ನಲ್ಲಿ ಮಹಿಳೆಯರು ಕೆಲವು ದಿನಗಳ ನಂತರ ಮಾರ್ಚ್ 8 ರಂದು ಶಾಂತಿ ಕಾರ್ಯಕರ್ತರನ್ನು ಬೆಂಬಲಿಸಲು ರ್ಯಾಲಿಗಳನ್ನು ನಡೆಸಿದರು. ಈ ಕಾರಣಕ್ಕಾಗಿ, ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಮಾರ್ಚ್ 8 ರಂದು ಪ್ರಾರಂಭಿಸಲಾಯಿತು. ನಂತರ 1975 ರಲ್ಲಿ ವಿಶ್ವಸಂಸ್ಥೆಯು ಮಾರ್ಚ್ 8ರಂದು ಅಂತಾರಾಷ್ಟ್ರೀಯ ಮಹಿಳಾ ದಿನ ಆಚರಿಸುವ ಘೋಷಣೆ ಮಾಡಿತು.

ಮಹಿಳಾ ದಿನಾಚರಣೆಯ ಉದ್ದೇಶ : ಇಂದು ಪ್ರಪಂಚದ ಎಲ್ಲಾ ದೇಶಗಳು ಅಭಿವೃದ್ಧಿಯಲ್ಲಿ ಸಾಗ್ತಿದ್ದರೂ ಮಹಿಳೆಯರಿಗೆ ಸರಿಯಾದ ಹಕ್ಕು ಸಿಗ್ತಿಲ್ಲ. ಹಕ್ಕಿಗಾಗಿ ಹೋರಾಟ ಮುಂದುರೆದಿದೆ. ಮಹಿಳೆಯರಿಗಿರುವ ಹಕ್ಕುಗಳು ಮತ್ತು ಗೌರವದ ಬಗ್ಗೆ ಸಮಾಜಕ್ಕೆ ಅರಿವು ಮೂಡಿಸುವ ಉದ್ದೇಶದಿಂದ ಪ್ರತಿ ವರ್ಷ ಅಂತರರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲಾಗುತ್ತದೆ.   

Health Tips: ನಿಮ್ಮ ಕಾಸ್ಮೆಟಿಕ್‌ಗಳನ್ನು ಯಾವುದೇ ಕಾರಣಕ್ಕೂ ಹಂಚಿಕೊಳ್ಳಬೇಡಿ

ಮಹಿಳಾ ದಿನಾಚರಣೆ 2022 ರ ಥೀಮ್ :  'ಸುಸ್ಥಿರ ನಾಳೆಗಾಗಿ ಇಂದು ಲಿಂಗ ಸಮಾನತೆ' ಥೀಮ್ ನಲ್ಲಿ ಮಹಿಳಾ ದಿನಾಚರಣೆ ಆಚರಿಸಲಾಗ್ತಿದೆ. 
ಮಹಿಳಾ ದಿನಾಚರಣೆಯ ಬಣ್ಣಗಳು ನೇರಳೆ, ಹಸಿರು ಮತ್ತು ಬಿಳಿ. ನೇರಳೆ ಬಣ್ಣವು ನ್ಯಾಯ ಮತ್ತು ಘನತೆಯನ್ನು ಸಂಕೇತಿಸುತ್ತದೆ. ಹಸಿರು ಭರವಸೆಯ ಸಂಕೇತವಾಗಿದೆ ಮತ್ತು ಬಿಳಿ ಶುದ್ಧತೆಯ ಸಂಕೇತವಾಗಿದೆ.
 

Latest Videos
Follow Us:
Download App:
  • android
  • ios