Asianet Suvarna News Asianet Suvarna News

ಸೀಮಂತ ಕಾರ್ಯಕ್ರಮದ ಫ್ಲೆಕ್ಸ್ ನಲ್ಲಿ ಗರ್ಭಿಣಿ ಭಾವಚಿತ್ರ: ಭಜರಂಗದಳ ಆಕ್ರೋಶ!

ಸಾಮೂಹಿಕ ಸೀಮಂತ ಕಾರ್ಯಕ್ರಮದ ಫ್ಲೆಕ್ಸ್ ನಲ್ಲಿ ಗರ್ಭಿಣಿಯ ಭಾವಚಿತ್ರ ಅಳವಡಿಕೆಗೆ ಕೆರಳಿದ ಬಜರಂಗದಳದ ಕಾರ್ಯಕರ್ತರು ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಮಂಗಳೂರು ಹೊರವಲಯದ ಕೊಲ್ಯ ಎಂಬಲ್ಲಿ ನಡೆದಿದೆ.

Pregnant portrait in Seemantha program flex Bajrang Dal outrage against ut khadar mangaluru
Author
First Published Sep 28, 2022, 3:44 PM IST

ಭರತ್ ರಾಜ್ ಏಷ್ಯಾನೆಟ್ ಸುವರ್ಣ ನ್ಯೂಸ್ ಮಂಗಳೂರು

ಮಂಗಳೂರು (ಸೆ.28): ಸಾಮೂಹಿಕ ಸೀಮಂತ ಕಾರ್ಯಕ್ರಮದ ಫ್ಲೆಕ್ಸ್ ನಲ್ಲಿ ಗರ್ಭಿಣಿಯ ಭಾವಚಿತ್ರ ಅಳವಡಿಕೆಗೆ ಕೆರಳಿದ ಬಜರಂಗದಳದ ಕಾರ್ಯಕರ್ತರು ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಮಂಗಳೂರು ಹೊರವಲಯದ ಕೊಲ್ಯ ಎಂಬಲ್ಲಿ ನಡೆದಿದೆ. ಕಾರ್ಯಕ್ರಮವೊಂದರ ಫ್ಲೆಕ್ಸ್(Flex) ನಲ್ಲಿ ಮಹಿಳೆಯ ಅನುಮತಿ ಇಲ್ಲದೇ ಫೊಟೋ ಅಳವಡಿಸಿದ ಕುರಿತಾಗಿ ಕೆರಳಿದ ಬಜರಂಗದಳ(Bajarangadala)ದ ಕಾರ್ಯಕರ್ತರು ಕಾರ್ಯಕ್ರಮ ಆಯೋಜಕರಿಗೆ ಸರಿಯಾಗಿ ಕ್ಲಾಸ್ ತೆಗೆದುಕೊಂಡಿದ್ದಾರೆ. ದಕ್ಷಿಣ ಕನ್ನಡ(Dakshina Kannada) ಜಿಲ್ಲಾ ಪಂಚಾಯಿತಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಮಂಗಳೂರು ಗ್ರಾಮಾಂತರ ವತಿಯಿಂದ ತಾಲೂಕು ಮಟ್ಟದ ಪೋಷಣ್ ಮಾಸಾಚರಣೆ ಕಾರ್ಯಕ್ರಮ , 

ಸರ್ಕಾರವನ್ನು ಕೋಮುವಾದಿಗಳ ಮತ್ತು ಗೂಂಡಾಗಳ ಕೈಗೆ ಕೊಡಲಾಗಿದೆ: ಖಾದರ್ ಆಕ್ರೋಶ

ಅನ್ನಪ್ರಾಶನ, ಪೌಷ್ಟಿಕ ಆಹಾರ ಪ್ರದರ್ಶನ ಹಾಗೂ ಸೀಮಂತ ಕಾರ್ಯಕ್ರಮವನ್ನು‌ ಕೊಲ್ಯ ನಾರಾಯಣಗುರು ಸಭಾಂಗಣ(Kolya Narayanguru Hall)ದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಪ್ರಚಾರ ಪ್ರಯುಕ್ತ ಸಭಾಂಗಣದ ಮುಂದೆ ಅಳವಡಿಸಿದ್ದ ಫ್ಲೆಕ್ಸ್ ನಲ್ಲಿ ಹಿಂದೂ‌ ಮಹಿಳೆಯೊಬ್ಬರ ಹಲವು ವರ್ಷಗಳ ಹಿಂದಿನ ಗರ್ಭಿಣಿಯಾಗಿದ್ದ ಭಾವಚಿತ್ರವನ್ನು‌ ಜಾಲತಾಣದಿಂದ ನಕಲು ಮಾಡಿ ಅಳವಡಿಸಲಾಗಿದ್ದು ಪಕ್ಕದಲ್ಲೇ ಕ್ಷೇತ್ರದ ಶಾಸಕ ಯು.ಟಿ. ಖಾದರ್(U.T.Khadar) ಅವರ ಫೊಟೋ ಬಳಸಲಾಗಿತ್ತು. 

ವಿಷಯ ತಿಳಿಯುತ್ತಿದ್ದಂತೆಯೇ ಕೆರಳಿದ ಬಜರಂಗದಳದ ಕಾರ್ಯಕರ್ತರು ಬುಧವಾರ ಕಾರ್ಯಕ್ರಮ ನಡೆಯುತ್ತಿದ್ದ ನಾರಾಯಣಗುರು ಸಭಾಂಗಣದೊಳಗೆ ನುಗ್ಗಿ ಆಯೋಜಕರ ನಿರ್ಲಕ್ಷ್ಯತನಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಲ್ಲದೆ ಶಾಸಕರ ವಿರುದ್ಧ ಘೋಷಣೆ ಕೂಗಿದರು. 
ನಾವು ಮದ್ವೆಯಾಗ್ತೀವಿ, ಕೇಳೋಕೆ ಅವರ್ಯಾರು: ಬಜರಂಗದಳ ಕಾರ್ಯಕರ್ತರ ವಿರುದ್ಧ ಯುವತಿ ಕಿಡಿ

ಮಹಿಳೆಯರ ಬಗ್ಗೆ ಪುಂಖಾನುಪುಂಖವಾಗಿ ಹೊಗಳುವ ಸರಕಾರಿ ಮಹಿಳಾ ಅಧಿಕಾರಿಗಳು ಮಾಡಿದ ಕ್ರಮ‌ ಸಮಂಜಸವಲ್ಲ ಎಂದು ಆರೋಪಿಸಿ ಶಾಸಕ ಯು.ಟಿ. ಖಾದರ್ ಅವರ ವಿರುದ್ಧ ಘೋಷಣೆ ಕೂಗಿದರು.  ಬಳಿಕ ಆಯೋಜಕರು ಕಾರ್ಯಕರ್ತರ ಮನವೊಲಿಸಿ  ಫ್ಲೆಕ್ಸ್ ತೆರವುಗೊಳಿಸಿದರು. ಉಳ್ಳಾಲ(Ullala) ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದರು.

Follow Us:
Download App:
  • android
  • ios