ರಾಜಕೀಯ ಅಖಾಡಕ್ಕೆ ಪ್ರಿಯಾಂಕಾ, ಚುನಾವಣೇಲಿ ಸ್ಪರ್ಧಿಸುತ್ತಿರೋ ಗಾಂಧಿ ಕುಟುಂಬದ ಹತ್ತನೇ ಸದಸ್ಯೆ!
ಪ್ರಿಯಾಂಕಾ ಗಾಂಧಿ ಅಭಿಮಾನಿಗಳಿಗೆ ಖುಷಿ ಸುದ್ದಿ ಸಿಕ್ಕಾಗಿದೆ. ವಯನಾಡಾದಿಂದ ಪ್ರಿಯಾಂಕಾ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಇಷ್ಟು ದಿನ ಕಾರ್ಯತಂತ್ರದಲ್ಲಿ ಬ್ಯುಸಿ ಇರ್ತಿದ್ದ ಪ್ರಿಯಾಂಕಾ ಚುನಾವಣೆಯಲ್ಲಿ ಗೆಲ್ತಾರಾ ಅನ್ನೋದನ್ನು ಕಾದು ನೋಡ್ಬೇಕಿದೆ.
ಗಾಂಧಿ ಪರಿವಾರದ ಮತ್ತೊಂದು ಕುಡಿ ಚುನಾವಣಾ ಅಖಾಡಕ್ಕೆ ಇಳಿಯುತ್ತಿದೆ. ಅದು ಮತ್ತ್ಯಾರೂ ಅಲ್ಲ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ. 2019ರಿಂದ ಪ್ರಿಯಾಂಕಾ ಗಾಂಧಿ ಚುನಾವಣೆ ಸ್ಪರ್ಧಿಸುತ್ತಾರೆಂಬ ಸುದ್ದಿ ಹಬ್ಬುತ್ತಲೇ ಇತ್ತು. ಆದ್ರೆ ಪ್ರಿಯಾಂಕಾ ಗಾಂಧಿ, ಯಾವುದೇ ಚುನಾವಣೆಗೆ ಸ್ಪರ್ಧಿಸುವ ಸಾಹಸ ಮಾಡಿರಲಿಲ್ಲ. ಪಕ್ಷ ಸಂಘಟಿಸುವ, ಸ್ಟಾರ್ ಪ್ರಚಾರಕರಾಗಿ ಪ್ರಚಾರ ಮಾಡುವ ಕೆಲಸವನ್ನು ಮಾತ್ರ ಪ್ರಿಯಾಂಕಾ ಮಾಡಿದ್ದರು. ಆದ್ರೀಗ ಪ್ರಿಯಾಂಕಾ ಚುನಾವಣೆಯಲ್ಲಿ ಸ್ಪರ್ಧಿಸಿ ತಮ್ಮ ಅದೃಷ್ಟ ಪರೀಕ್ಷೆ ನಡೆಸುವ ಕಾಲ ಸನ್ನಿಹಿತವಾಗುವಂತಿದೆ.
ಲೋಕಸಭೆ (Lok Sabha) ಚುನಾವಣೆಯಲ್ಲಿ ರಾಹುಲ್ ಗಾಂಧಿ (Rahul Gandhi) ಎರಡು ಕ್ಷೇತ್ರಗಳಲ್ಲಿ ಜಯಗಳಿಸಿದ್ದರು. ಅದ್ರಲ್ಲಿ ಒಂದನ್ನು ಆಯ್ಕೆ ಮಾಡಿಕೊಂಡು ಇನ್ನೊಂದನ್ನು ತೊರೆಯುವ ಅನಿವಾರ್ಯತೆ ಇದೆ. ಹಾಗಾಗಿ ರಾಹುಲ್ ಗಾಂಧಿ ವಯನಾಡ್ ತೊರೆದು, ಗಾಂಧಿ ಕುಟುಂಬಕ್ಕೆ ಹತ್ತಿರವಾಗಿರೋ ರಾಯ್ ಬರೇಲಿ ಸಂಸದರಾಗಿ ಮುಂದುವರೆಯಲಿದ್ದಾರೆ. ವಯನಾಡದಲ್ಲಿ ಲೋಕಸಭೆ ಉಪಚುನಾವಣೆ ನಡೆಯಲಿದ್ದು, ಈ ಕ್ಷೇತ್ರಕ್ಕೆ ಪ್ರಿಯಾಂಕಾ (Priyanka) ಗಾಂಧಿ ಸ್ಪರ್ಧಿಸಲಿದ್ದಾರೆಂದು ಕಾಂಗ್ರೆಸ್ ಘೋಷಣೆ ಮಾಡಿದೆ.
ಸ್ಪೂರ್ತಿ ಕತೆ; ಅಂದು 500 ರೂ. ಸಾಲ ಪಡೆದಿದ್ದ ಈಕೆ ಇಂದು 5 ಕೋಟಿ ವ್ಯವಹಾರ ನಡೆಸುವ ಕಂಪನಿ ಒಡತಿ!
ಪ್ರಿಯಾಂಕಾ ಗಾಂಧಿ, ಗಾಂಧಿ ಕುಟುಂಬದ ಹತ್ತನೇ ಸದಸ್ಯೆ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರ ಪುತ್ರಿ ಪ್ರಿಯಾಂಕಾ ಗಾಂಧಿ ಎಂಬುದು ನಿಮಗೆಲ್ಲ ತಿಳಿದಿದೆ. ದೇಶದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಅವರಿಂದ ಹಿಡಿದು ರಾಹುಲ್ ಗಾಂಧಿಯವರೆಗೆ ಅವರ ಕುಟುಂಬದ ಪ್ರತಿಯೊಬ್ಬ ಸದಸ್ಯರೂ ಅಧಿಕಾರ ಮತ್ತು ರಾಜಕೀಯದ ಜೊತೆ ಅತ್ಯಂತ ನಿಕಟ ಸಂಬಂಧವನ್ನು ಹೊಂದಿದ್ದಾರೆ. ಅವರ ಕುಟುಂಬದ ಪಂಡಿತ್ ಜವಾಹರಲಾಲ್ ನೆಹರು, ಇಂದಿರಾ ಗಾಂಧಿ, ಫಿರೋಜ್ ಗಾಂಧಿ, ರಾಜೀವ್ ಗಾಂಧಿ, ಸೋನಿಯಾ ಗಾಂಧಿ, ಸಂಜಯ್ ಗಾಂಧಿ, ಮೇನಕಾ ಗಾಂಧಿ, ರಾಹುಲ್ ಗಾಂಧಿ ಮತ್ತು ವರುಣ್ ಗಾಂಧಿ ಈವರೆಗೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದರು. ರಾಜಕೀಯ ಪ್ರವೇಶ ಮಾಡಿದ್ರೂ ಪ್ರಿಯಾಂಕಾ ಗಾಂಧಿ, ಲೋಕಸಭೆ ಚುನಾವಣೆಗೆ ಸ್ಪರ್ಧಿಸಿರಲಿಲ್ಲ. ಈಗ ಮೊದಲ ಬಾರಿ, ಗಾಂಧಿ ಕುಟುಂಬದ ಹತ್ತನೇ ಸದಸ್ಯೆಯಾಗಿ ಲೋಕಸಭೆ ಉಪಚುನಾವಣೆಗೆ ಸ್ಪರ್ಧೆ ನಡೆಸಲಿದ್ದಾರೆ.
ಪ್ರಿಯಾಂಕಾ ಗಾಂಧಿ ರಾಜಕೀಯ ನಡೆ : ಅನೇಕ ವರ್ಷಗಳ ಕಾಲ ಪ್ರಿಯಾಂಕಾ ಗಾಂಧಿ ರಾಜಕೀಯದಿಂದ ದೂರ ಉಳಿದಿದ್ದರು. ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಜೊತೆ ಪ್ರಚಾರದಲ್ಲಿ ಆಗಾಗ ಕಾಣಿಸಿಕೊಳ್ತಿದ್ದಿದ್ದು ಬಿಟ್ರೆ ಅವರು ಸಕ್ರಿಯ ರಾಜಕಾರಣಿಯಾಗಿರಲಿಲ್ಲ. 2019ರಲ್ಲಿ ರಾಜಕೀಯ ಪ್ರವೇಶಿಸಿದ ಅವರು ಪೂರ್ವ ಉತ್ತರ ಪ್ರದೇಶದ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡರು. 2020ರಲ್ಲಿ ಅವರನ್ನು ಉತ್ತರ ಪ್ರದೇಶದ ಉಸ್ತುವಾರಿ ಪ್ರಧಾನ ಕಾರ್ಯದರ್ಶಿಯನ್ನಾಗಿ ಮಾಡಲಾಯಿತು. ಉತ್ತರ ಪ್ರದೇಶದಲ್ಲಿ ಪ್ರಿಯಾಂಕ ಸಕ್ರಿಯವಾಗಿದ್ದಾರೆ. ಅವರ ಲಡ್ಕಿ ಹೂಂ, ಲಡ್ ಸಕ್ತಿ ಹು ಅಭಿಯಾನ ಹೆಚ್ಚು ಜನಪ್ರಿಯತೆ ಪಡೆದಿತ್ತು. 2022ರಲ್ಲಿ ಅವರ ನಾಯಕತ್ವದಲ್ಲಿ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ನಡೆದ್ರೂ ಕಾಂಗ್ರೆಸ್ ಯಶಸ್ಸು ಕಾಣಲಿಲ್ಲ. ಆ ಸಮಯದಲ್ಲಿ ತಳಮಟ್ಟದ ಸಂಘಟನೆಗೆ ಪ್ರಿಯಾಂಕಾ ಗಾಂಧಿ ಮುಂದಾಗಿದ್ದರು. 2023ರಲ್ಲಿ ಪ್ರಿಯಾಂಕಾ ಗಾಂಧಿ, ಪ್ರಧಾನ ಕಾರ್ಯದರ್ಶಿ ಹುದ್ದೆಗೆ ನೇಮಕಗೊಂಡ್ರು. ಅವರ ತಂತ್ರಗಾರಿಕೆಯಲ್ಲಿ ಕಾಮಗ್ರೆಸ್ 2024ರ ಲೋಕಸಭೆ ಚುನಾವಣೆ ಎದುರಿಸಿದೆ. ಹಿಂದಿನ ಬಾರಿಗಿಂತ ಈ ಬಾರಿ ಕಾಂಗ್ರೆಸ್ ಹೆಚ್ಚಿನ ಸ್ಥಾನದಲ್ಲಿ ಗೆಲುವ ಸಾಧಿಸಲು ಪ್ರಿಯಾಂಕಾ ಗಾಂಧಿ ಕೊಡುಗೆ ಹೆಚ್ಚಿದೆ ಎಂದೇ ನಂಬಲಾಗಿದೆ.
ತಮಿಳುನಾಡಿನಲ್ಲಿ ಶೂನ್ಯ ಸಂಪಾದನೆಗೆ ಮೋದಿ ಕಣ್ಣೀರು: ಮುರಸೋಳಿ ವರದಿ
ಈ ಉಪಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ಗೆಲುವು ಸಾಧಿಸಿದ್ರೆ, ಮೊದಲ ಬಾರಿ ಸಂಸತ್ತಿನಲ್ಲಿ ತಾಯಿ ಹಾಗೂ ಇಬ್ಬರು ಮಕ್ಕಳನ್ನು ನೋಡ್ಬಹುದು. ಸೋನಿಯಾ ಗಾಂಧಿ ರಾಜ್ಯಸಭಾ ಸದಸ್ಯರಾಗಿದ್ದು, ರಾಹುಲ್ ಹಾಗೂ ಪ್ರಿಯಾಂಕಾ ಗಾಂಧಿ, ಲೋಕಸಭೆ ಸದಸ್ಯರಾಗಿ ಸಂಸತ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.