ಭಾರತಕ್ಕೆ ಬೇಕಾಗಿದ್ದ ಮೋಸ್ಟ್‌ ವಾಟೆಂಡ್‌ ಉಗ್ರ ಕೈಸರ್ ಫಾರೂಕ್ ಪಾಕಿಸ್ತಾನದ ಕರಾಚಿಯಲ್ಲಿ ಅಪರಿಚಿತ ವ್ಯಕ್ತಿಗಳ ಗುಂಡೇಟಿಗೆ ಬಲಿಯಾಗಿದ್ದಾನೆ.

ಇಸ್ಲಾಮಬಾದ್ (ಅ.1): ಭಾರತಕ್ಕೆ ಬೇಕಾಗಿದ್ದ ಮೋಸ್ಟ್‌ ವಾಟೆಂಡ್‌ ಉಗ್ರ ಕೈಸರ್ ಫಾರೂಕ್ ಪಾಕಿಸ್ತಾನದ ಕರಾಚಿಯಲ್ಲಿ ಅಪರಿಚಿತ ವ್ಯಕ್ತಿಗಳ ಗುಂಡೇಟಿಗೆ ಬಲಿಯಾಗಿದ್ದಾನೆ.

ಪಾಕಿಸ್ತಾನದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾ (ಎಲ್‌ಇಟಿ)ದ ಮೋಸ್ಟ್ ವಾಂಟೆಡ್ ನಾಯಕರಲ್ಲಿ ಒಬ್ಬನಾಗಿದ್ದ ಕೈಸರ್ ಫಾರೂಕ್, 26/11 ಮುಂಬೈ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್‌ನ ನಿಕಟ ಸಹವರ್ತಿಯಾಗಿದ್ದ. ಹಲವು ಭಾರತ ವಿರೋಧಿ ಕೃತ್ಯಗಳಲ್ಲಿ ಭಾಗಿಯಾಗಿದ್ದ.

ಪೊಲೀಸ್ ಮೂಲಗಳ ಪ್ರಕಾರ, ಕರಾಚಿಯ ಬೀದಿಯಲ್ಲಿ ಇತರೆ ವ್ಯಕ್ತಿಗಳೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ ಅಪರಿಚಿತ ವ್ಯಕ್ತಿಗಳು ಗುಂಡಿನ ದಾಳಿ ನಡೆಸಿದ್ದಾರೆ. ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿರುವ ಉಗ್ರ ಗುಂಡೇಟಿಗೆ ತೀವ್ರ ಗಾಯಗೊಂಡಿದ್ದಾನೆ. ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾನೆ.

ಕೆಣಕಿದವರ ಸುಮ್ಮನೆ ಬಿಡಲ್ಲ, 5 ದಿನದಲ್ಲಿ ದೇಶ ಬಿಟ್ಟು ಹೋಗಿ: ಕೆನಡಾ ಏಟಿಗೆ ಭಾರತದ ಎದಿರೇಟು

ಉಗ್ರ ಫಾರೂಕ್ ಹತ್ಯೆಯ ದೃಶ್ಯಗಳು ಸಿಸಿಟಿವಿಯಲ್ಲಿ ದಾಖಲಾಗಿದ್ದು, ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದೆ. 

Scroll to load tweet…