ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪಾಕಿಸ್ತಾನಕ್ಕೆ ಬಿಗ್ ಶಾಕ್ ನೀಡಿದ್ದರೆ. ಈ ನಿರ್ಧಾರವನ್ನು ಪಾಕಿಸ್ತಾನದ ಮೇಲಿನ ಆರ್ಥಿಕ ಸರ್ಜಿಕಲ್ ಸ್ಟ್ರೈಕ್ ಎಂದು ಕರೆಯಲಾಗುತ್ತಿದೆ.

ಇಸ್ಲಾಮಾಬಾದ್: ಅಮೆರಿಕದ ನೂತನ ಅಧ್ಯಕ್ಷರಾಗಿರುವ ಡೊನಾಲ್ಡ್ ಟ್ರಂಪ್ ಅಧಿಕಾರ ಸ್ವೀಕರಿಸುತ್ತಿದ್ದಂತೆ ಹಲವು ಮಹತ್ವದ ಕಡತಗಳಿಗೆ ಸಹಿ ಹಾಕಿದ್ದಾರೆ. ಅಧಿಕಾರ ಸ್ವೀಕಾರದ ಬಳಿಕ ಭಾರತದ ಗಡಿಯಲ್ಲಿ ತಂಟೆ ತೆಗೆಯುವ ಪಾಕಿಸ್ತಾನಕ್ಕೆ ಡೊನಾಲ್ಡ್ ಟ್ರಂಪ್ ಬಿಗ್ ಶಾಕ್ ನೀಡಿದ್ದಾರೆ. ಡೊನಾಲ್ಡ್ ಟ್ರಂಪ್ ತೆಗೆದುಕೊಂಡ ಈ ನಿರ್ಧಾರದಿಂದ ಪಾಕಿಸ್ತಾನ ಅಕ್ಷರಶಃ ಕಂಗಾಲು ಆಗಲಿದೆ ಎಂಬ ವಿಶ್ಲೇಷಣೆಗಳು ಕೇಳಿ ಬಂದಿವೆ. ಡೊನಾಲ್ಡ್ ಟ್ರಂಪ್ ಅವರ ಈ ನಿರ್ಧಾರವನ್ನು ಪಾಕಿಸ್ತಾನದ ಮೇಲಿನ ಆರ್ಥಿಕ ಸರ್ಜಿಕಲ್ ಸ್ಟ್ರೈಕ್ ಎಂದು ಕರೆಯಲಾಗುತ್ತಿದೆ. ಪಾಕಿಸ್ತಾನಕ್ಕೆ ನೀಡಲಾಗುತ್ತಿರುವ ವಿದೇಶಿ ಸಹಾಯವನ್ನು ತಾತ್ಕಲಿಕವಾಗಿ ರದ್ದುಗೊಳಿಸಲಾಗಿದೆ. 

ಪಾಕಿಸ್ತಾನಕ್ಕೆ ಅಮೆರಿಕಾ ನೀಡುತ್ತಿದ್ದ ಎಲ್ಲಾ ರೀತಿಯ ಸಹಾಯವನ್ನು ಸ್ಥಗಿತಗೊಳಿಸಲಾಗಿದೆ. ಈ ಸಂಬಂಧ ಮತ್ತೊಮ್ಮೆ ಅಮೆರಿಕಾ ಸರ್ಕಾರ ಪರಿಶೀಲನೆ ನಡೆಸಲಿದೆ. ಮಂಗಳವಾರ ಈ ಸಂಬಂಧ ವರದಿಯಾಗಿದೆ. ಪಾಕಿಸ್ತಾನದ ಜಿಯೋ ನ್ಯೂಸ್ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಈ ನಿರ್ಧಾರ ಪಾಕಿಸ್ತಾನಕ್ಕೆ ದೊಡ್ಡ ಶಾಕ್ ನೀಡಿದೆ.

ಟ್ರಂಪ್ ಅವರ ಈ ಆದೇಶದ ಮರುಕ್ಷಣವೇ ಸಾಂಸ್ಕೃತಿಕ ಪರಂಪರೆಯನ್ನು ರಕ್ಷಿಸುವ ರಾಯಭಾರಿ ನಿಧಿ (AFCP) ಸೇರಿದಂತೆ ಪಾಕಿಸ್ತಾನದಲ್ಲಿ ಯುನೈಟೆಡ್ ಸ್ಟೇಟ್ಸ್ ಏಜೆನ್ಸಿ ಫಾರ್ ಇಂಟರ್ನ್ಯಾಷನಲ್ ಡೆವಲಪ್‌ಮೆಂಟ್ (USAID) ನ ಅನೇಕ ಪ್ರಮುಖ ಯೋಜನೆಗಳನ್ನು ತಕ್ಷಣವೇ ಸ್ಥಗಿತಗೊಳಿಸಿದೆ. ಈ ಯೋಜನೆಗಳು ಪಾಕಿಸ್ತಾನದ ಸಾಂಸ್ಕೃತಿಕ ಪರಂಪರೆ ರಕ್ಷಣೆಯನ್ನು ಉತ್ತೇಜಿಸುವ ಕಾರ್ಯಕ್ರಮವಾಗಿದೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪಾಕಿಸ್ತಾನದ ಮೇಲೆ ಆರ್ಥಿಕವಾಗಿ ದಾಳಿ ನಡೆಸಿದ್ದಾರೆ. ಪಾಕಿಸ್ತಾನಕ್ಕೆ ನೀಡುತ್ತಿದ್ದ ಎಲ್ಲಾ ರೀತಿಯ ಆರ್ಥಿಕ ನೆರವನ್ನು ತಕ್ಷಣವೇ ಜಾರಿಗೆ ಬರುವಂತೆ ಆದೇಶ ಪ್ರಕಟಿಸಿದ್ದಾರೆ. ಇದೀಗ ಮರುಮೌಲ್ಯಮಾಪನಕ್ಕಾಗಿ ಪಾಕಿಸ್ತಾನಕ್ಕೆ ವಿದೇಶಿ ನೆರವನ್ನು ಯುಎಸ್ ನಿಲ್ಲಿಸಿದೆ ಎಂದು ಕರಾಚಿಯಲ್ಲಿರುವ ಯುಎಸ್ ಕಾನ್ಸುಲೇಟ್ ಅಧಿಕಾರಿಯೊಬ್ಬರು ಹೇಳಿದ್ದಾರೆ ಎಂದು ವರದಿಯಾಗಿದೆ. ಡೊನಾಲ್ಡ್ ಟ್ರಂಪ್ ತಮ್ಮ ಮೊದಲ ಅವಧಿಯಲ್ಲಿಯೂ ಭಯೋತ್ಪಾದಕ ಚಟುವಟಿಕೆಗಳನ್ನು ಉತ್ತೇಜಿಸುವ ಪಾಕಿಸ್ತಾನವನ್ನು ಹಣಕಾಸು ಕ್ರಿಯಾ ಕಾರ್ಯಪಡೆಯ (ಎಫ್‌ಎಟಿಎಫ್) ಬೂದು ಪಟ್ಟಿಗೆ ಸೇರಿಸಿ ಆದೇಶ ಹೊರಡಿಸಿದ್ದರು.

ಇದನ್ನೂ ಓದಿ: ಇತಿಹಾಸ ಪುಟ ಸೇರಿದ ಮೆಕ್ಸಿಕೋ ಕೊಲ್ಲಿ, ಇನ್ನು ಅಮೆರಿಕ ಕೊಲ್ಲಿ ಹೆಸರೇ ಅಧಿಕೃತ!

ಜ.20ರಂದು ನಡೆದ ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಪ್ರಮಾಣ ವಚನ ಕಾರ್ಯಕ್ರಮದಲ್ಲಿ, ಭಾರತದ ಪ್ರತಿನಿಧಿಯಾಗಿ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಭಾಗಿಯಾಗಿದ್ದರು. ಇತ್ತೀಚೆಗೆ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಭಾರತೀಯ ಮೂಲದ ಕಮಲಾ ಹ್ಯಾರಿಸ್‌ ಅವರನ್ನು ಡೊನಾಲ್ಡ್‌ ಟ್ರಂಪ್‌ ಅವರು ಸೋಲಿಸಿದ್ದರು. ಅವರು ಅಮೆರಿಕದ 47ನೇ ಅಧ್ಯಕ್ಷರಾಗಿ ಜ.20ರಂದು ಪ್ರಮಾಣ ವಚನ ಸ್ವೀಕಸಿದ್ದರು. ಈ ಹಿಂದೆ 2017- 20221ರ ಅವಧಿಗೆ ಟ್ರಂಪ್‌ ಮೊದಲ ಬಾರಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಇದನ್ನೂ ಓದಿ: ಕೈಗೆ ಕೋಳ ಹಾಕಿ ನೀರನ್ನು ಕೊಡದೇ ಬ್ರೆಜಿಲ್ ಅಕ್ರಮ ವಲಸಿಗರ ವಿಮಾನವೇರಿಸಿದ ಡೊನಾಲ್ಡ್ ಟ್ರಂಪ್‌