Bangkok Tor Kor Market Shooting: ಬ್ಯಾಂಕಾಕ್‌ನ ಚತುಚಕ್ ಮಾರುಕಟ್ಟೆಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಆರು ಜನರು ಸಾವನ್ನಪ್ಪಿದ್ದಾರೆ. ದಾಳಿಕೋರನು ತನ್ನ ಮೇಲೆಯೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆಯ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬ್ಯಾಂಕಾಕ್: ಥೈಲ್ಯಾಂಡ್‌ನ ಬ್ಯಾಂಕಾಕ್‌ನ ಚತುಚಕ್ ಎಂಬಲ್ಲಿ ಟೋರ್ ಕೊರ್ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ ನಡೆದಿದೆ. ಈ ದಾಳಿಯಲ್ಲಿ 6 ಜನರು ಮೃತರಾಗಿದ್ದಾರೆ. ಮೃತರಲ್ಲಿ ಓರ್ವ ವ್ಯಾಪಾರಿ, ಮೂವರ ಭದ್ರತಾ ಸಿಬ್ಬಂದಿ ಸೇರಿದ್ದಾರೆ ಎಂದು ವರದಿಯಾಗಿದೆ. ಆಗುಂತಕ ಗನ್ ಹಿಡಿದುಕೊಂಡು ಬಂದು ಗುಂಡಿನ ದಾಳಿ ನಡೆಸಿರುವ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.
ಮಾರುಕಟ್ಟೆಯಲ್ಲಿ ಗುಂಡಿನ ದಾಳಿ ನಡೆಸಿರುವ ವ್ಯಕ್ತಿ ಕೊನೆಗೆ ತನ್ನ ಮೇಲೆಯೇ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ್ದಾನೆ. ಈ ದಾಳಿ ನಡೆಸಿದ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಸ್ಥಳಕ್ಕೆ ದೌಡಾಯಿಸಿರುವ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ದಾಳಿಯ ಹಿಂದಿನ ಉದ್ದೇಶ ಏನು ಎಂದು ತಿಳಿದು ಬಂದಿಲ್ಲ. ಈ ದಾಳಿಯಿಂದಾಗಿ ಟೋರ್ ಕೊರ್ ಮಾರುಕಟ್ಟೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಅಮೆರಿಕ ಮಧ್ಯಸ್ಥಿಕೆಯ ನಡುವೆ ಥೈಲ್ಯಾಂಡ್-ಕಾಂಬೋಡಿಯಾ ಗಡಿ ಉದ್ವಿಗ್ನತೆ ಶಮನ
ಥೈಲ್ಯಾಂಡ್ ಮತ್ತು ಕಾಂಬೋಡಿಯಾ ನಡುವಿನ ಉದ್ವಿಗ್ನತೆ ಕಡಿಮೆಯಾಗುವ ಲಕ್ಷಣಗಳು ಕಂಡು ಬಂದಿವೆ. ಎರಡೂ ದೇಶಗಳು ತಮ್ಮ ನಡೆಯುತ್ತಿರುವ ಗಡಿ ಘರ್ಷಣೆಗಳನ್ನು ಕೊನೆಗೊಳಿಸಲು ಮಾತುಕತೆ ನಡೆಸಲು ಇಚ್ಛೆ ವ್ಯಕ್ತಪಡಿಸಿವೆ ಎಂದು ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ. ಈ ಘರ್ಷಣೆಯಿಂದ ಈಗಾಗಲೇ ಕನಿಷ್ಠ 33 ಜನರು ಸಾವನ್ನಪ್ಪಿದ್ದಾರೆ ಮತ್ತು 1,68,000 ಕ್ಕೂ ಹೆಚ್ಚು ಜನರು ಸ್ಥಳಾಂತರಗೊಂಡಿದ್ದಾರೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಧ್ಯ ಪ್ರವೇಶ
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ವಿವಾದದಲ್ಲಿ ಮಧ್ಯಪ್ರವೇಶಿಸಿ, ಎರಡೂ ರಾಷ್ಟ್ರಗಳ ನಾಯಕರೊಂದಿಗೆ ಮಾತನಾಡಿದ್ದಾಗಿ ಟ್ರುತ್ ಸೋಶಿಯಲ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಮುಂದಿನ ಹಿಂಸಾಚಾರವು ಅಮೆರಿಕದೊಂದಿಗಿನ ವ್ಯಾಪಾರ ಒಪ್ಪಂದಗಳನ್ನು ಅಪಾಯಕ್ಕೆ ಸಿಲುಕಿಸಬಹುದು ಎಂದು ಅವರು ಎಚ್ಚರಿಸಿದ್ದಾರೆ. ಎರಡೂ ಕಡೆಯವರು ಶಾಂತಿಯನ್ನು ಅನುಸರಿಸುವಂತೆ ಒತ್ತಾಯಿಸಿದ್ದಾರೆ.
