ಹಿಂದೂಗಳನ್ನು ಮನೆಯೊಳಗೆ ಕೂಡಿಹಾಕಿ ಬೆಂಕಿ ಹಚ್ಚಿದ ಸರಣಿ ಘಟನೆಗಳ ಬೆನ್ನಲ್ಲೇ, ಬಾಂಗ್ಲಾದೇಶದಲ್ಲಿ ಹಿಂದೂ ಶಿಕ್ಷಕರೊಬ್ಬರ ಮನೆ ಬೆಂಕಿಗೆ ಆಹುತಿಯಾಗಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣಹಾನಿಯಾಗಿಲ್ಲ.

ಢಾಕಾ: ಹಿಂದೂಗಳನ್ನು ಮನೆಯೊಳಗೆ ಕೂಡಿಹಾಕಿ ಬೆಂಕಿ ಹಚ್ಚಿದ ಸರಣಿ ಘಟನೆಗಳ ಬೆನ್ನಲ್ಲೇ, ಬಾಂಗ್ಲಾದೇಶದಲ್ಲಿ ಹಿಂದೂ ಶಿಕ್ಷಕರೊಬ್ಬರ ಮನೆ ಬೆಂಕಿಗೆ ಆಹುತಿಯಾಗಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣಹಾನಿಯಾಗಿಲ್ಲ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸಿಲ್ಹೆಟ್‌ನ ಉಪಜಿಲ್ಲೆಯಾದ ಗೊವೈನ್‌ಘಾಟ್‌ ಎಂಬಲ್ಲಿದ್ದ ಶಿಕ್ಷಕ

ಸಿಲ್ಹೆಟ್‌ನ ಉಪಜಿಲ್ಲೆಯಾದ ಗೊವೈನ್‌ಘಾಟ್‌ ಎಂಬಲ್ಲಿದ್ದ ಶಿಕ್ಷಕ ಬಿರೇಂದ್ರ ಕುಮಾರ್‌ ದೇ ಅವರ ಮನೆಯಲ್ಲಿ ಗುರುವಾರ ಸಂಜೆ 4 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಇದರ ವಿಡಿಯೋದಲ್ಲೊ ಬೆಂಕಿ ಮನೆಯನ್ನು ಆವರಿಸಿಕೊಳ್ಳುತ್ತಿರುವುದು ಮತ್ತು ಒಳಗಿದ್ದವರು ಹೊರಬರಲು ಹೆಣಗಾಡುವುದನ್ನು ಕಾಣಬಹುದಾಗಿದೆ. ಘಟನೆ ಬೆನ್ನಲ್ಲೆ ಸ್ಥಳ ಪರಿಶೀಲನೆ ನಡೆಸಿದ ಪೊಲೀಸ್‌ ಅಧಿಕಾರಿಗಳು, ‘ಬೆಂಕಿಗೆ ಕಾರಣ ಶಾರ್ಟ್‌ ಸರ್ಕಿಟ್‌ ಇರಬಹುದು’ ಎಂದಿದ್ದಾರೆ.

ಹಿಂದೂಗಳನ್ನು ಗುರಿಯಾಗಿಸಿಕೊಂಡು ಕ್ರೌರ್ಯಗಳು

ದೇ ಕೂಡ, ‘ಹಿಂದೂ-ಮುಸಲ್ಮಾನರು ಸಾಮರಸ್ಯದಿಂದಿದ್ದೇವೆ. ಯಾರೊಂದಿಗೂ ದ್ವೇಷವಿಲ್ಲ’ ಎನ್ನುವ ಮೂಲಕ ಉದ್ದೇಶಪೂರ್ವಕ ದಾಳಿ ಸಾಧ್ಯತೆಯನ್ನು ಅಲ್ಲಗಳೆದಿದ್ದಾರೆ. ಆದರೆ, ಹಿಂದೂಗಳನ್ನು ಗುರಿಯಾಗಿಸಿಕೊಂಡು ಕ್ರೌರ್ಯಗಳು ನಡೆಯುತ್ತಿರುವ ಹೊತ್ತಿನಲ್ಲಿ ಈ ಘಟನೆ ಸಂಭವಿಸಿರುವುದು ಅನುಮಾನಕ್ಕೆ ಕಾರಣವಾಗಿದೆ.

ಘಟನೆ ಬಗ್ಗೆ ಭಾರತದ ವಿದೇಶಾಂಗ ವ್ಯವಹಾರಗಳ ವಕ್ತಾರ ರಣಧೀರ್‌ ಜೈಸ್ವಾಲ್‌, ‘ಬಾಂಗ್ಲಾದಲ್ಲಿ ಅಲ್ಪಸಂಖ್ಯಾತರು ಪದೇ ಪದೇ ದಾಳಿಯಾಗುತ್ತಿರುವುದನ್ನು ನೋಡುತ್ತಿದ್ದೇವೆ. ಇಂತಹ ಕೋಮು ಘಟನೆಗಳನ್ನು ತ್ವರಿತವಾಗಿ ಮತ್ತು ದೃಢವಾಗಿ ನಿಭಾಯಿಸಬೇಕು’ ಎಂದು ಆಗ್ರಹಿಸಿದ್ದಾರೆ.