ಬಾಂಗ್ಲಾದೇಶ ಹಿಂಸಾಚಾರ: ಒಂದೇ ದಿನದಲ್ಲಿ ಪೊಲೀಸರು ಸೇರಿ 1000 ಜನರ ಹತ್ಯೆ!

 ಮೀಸಲಾತಿ ಹೋರಾಟ ಹಿಂಸೆಗೆ ತಿರುಗಿದ ಹಿನ್ನೆಲೆಯಲ್ಲಿ ಶೇಖ್‌ ಹಸೀನಾ ಅವರು ಪ್ರಧಾನಿ ಪಟ್ಟ ತೊರೆದು, ಭಾರತಕ್ಕೆ ಪರಾರಿಯಾದ ಬಳಿಕ ಬಾಂಗ್ಲಾದೇಶದಲ್ಲಿ ಅರಾಜಕತೆ ವಿಕೋಪಕ್ಕೆ ಹೋಗಿದೆ. ಪೊಲೀಸರು ಸೇರಿ ಸುಮಾರು  1000 ಜನರ ಹತ್ಯೆಯಾಗಿದೆ.

Bangladesh news LIVE updates day 1000 people were killed in the violence rav

ಢಾಕಾ (ಆ.8) :  ಮೀಸಲಾತಿ ಹೋರಾಟ ಹಿಂಸೆಗೆ ತಿರುಗಿದ ಹಿನ್ನೆಲೆಯಲ್ಲಿ ಶೇಖ್‌ ಹಸೀನಾ ಅವರು ಪ್ರಧಾನಿ ಪಟ್ಟ ತೊರೆದು, ಭಾರತಕ್ಕೆ ಪರಾರಿಯಾದ ಬಳಿಕ ಬಾಂಗ್ಲಾದೇಶದಲ್ಲಿ ಅರಾಜಕತೆ ವಿಕೋಪಕ್ಕೆ ಹೋಗಿದೆ. ಠಾಣೆಗಳಿಂದ ಪೊಲೀಸರು ಓಡಿ ಹೋಗಿದ್ದು, ಕಾನೂನು-ಸುವ್ಯವಸ್ಥೆ ಕುಸಿದಿದೆ. ಬ್ಯಾಂಕುಗಳು ಬಾಗಿಲು ತೆರೆದರೆ ಜನರು ಲೂಟಿಗೆ ಯತ್ನಿಸುತ್ತಿರುವ ಹಿನ್ನೆಲೆಯಲ್ಲಿ ಬಾಂಗ್ಲಾದೇಶ ಬ್ಯಾಂಕ್‌ನ ಆರು ಮಂದಿ ಉನ್ನತ ಅಧಿಕಾರಿಗಳೇ ರಾಜೀನಾಮೆ ಕೊಟ್ಟಿದ್ದಾರೆ. ಹೀಗಾಗಿ ಬ್ಯಾಂಕುಗಳು ಬಂದ್‌ ಆಗಿವೆ.

ಮತ್ತೊಂದೆಡೆ, ಕೈಗಾರಿಕೆಗಳು ಅದರಲ್ಲೂ ಗಾರ್ಮೆಂಟ್‌ ಫ್ಯಾಕ್ಟರಿಗಳು ಬಾಗಿಲು ತೆರೆಯಲು ಯತ್ನಿಸುತ್ತಿದ್ದಂತೆ ದೊಂಬಿಕೋರರು ನುಗ್ಗಿ ದಾಂಧಲೆ ನಡೆಸಲು ಯತ್ನಿಸುತ್ತಿದ್ದಾರೆ. ಹೀಗಾಗಿ ಫ್ಯಾಕ್ಟರಿಗಳು ಕಾರ್ಯನಿರ್ವಹಿಸಲು ಆಗುತ್ತಿಲ್ಲ. ಮತ್ತೊಂದೆಡೆ, ಶೇಖ್‌ ಹಸೀನಾ ಅವರ ಪಕ್ಷವಾದ ಅವಾಮಿ ಲೀಗ್‌ನ ನಾಯಕರು, ಮುಖಂಡರನ್ನು ಗುರಿಯಾಗಿಸಿ ಕೊಲ್ಲಲಾಗುತ್ತಿದೆ. ಅಲ್ಪಸಂಖ್ಯಾತರಾದ ಹಿಂದುಗಳ ಮನೆ, ಉದ್ದಿಮೆ ಹಾಗೂ ದೇಗುಲಗಳಲ್ಲೂ ವಿಧ್ವಂಸಕ ಕೃತ್ಯ ಎಸಗಲಾಗುತ್ತಿದೆ.

ಬಾಂಗ್ಲಾದಲ್ಲಿ ಗಲಭೆಗೆ ಸೌದಿಯಲ್ಲಿ ಕುಳಿತು ಸಂಚು ರೂಪಿಸಿದ್ದ ಚೀನಾ, ಪಾಕ್‌

ಪೊಲೀಸ್‌ ಠಾಣೆಗಳು ಹಾಗೂ ಸಂಬಂಧಿಸಿದ ಸ್ಥಳಗಳ ಮೇಲೆ ದೇಶಾದ್ಯಂತ ದಾಳಿಗಳು ನಡೆದಿವೆ. ಹೀಗಾಗಿ ಹಲವು ಪೊಲೀಸರು ಸಾವಿಗೀಡಾಗಿದ್ದಾರೆ. ಆದ ಕಾರಣ ಠಾಣೆಗೆ ಕರ್ತವ್ಯಕ್ಕೆ ಪೊಲೀಸರು ಬರುತ್ತಿಲ್ಲ. ಈ ನಡುವೆ, ಸಂಚಾರ ನಿರ್ವಹಣೆ ಕೂಡ ಸಮಸ್ಯೆಯಾಗಿದೆ. ಪೊಲೀಸರು ಇಲ್ಲದ ಕಾರಣ ಅಯೋಮಯ ಪರಿಸ್ಥಿತಿ ನಿರ್ಮಾಣವಾಗಿದೆ. ಏತನ್ಮಧ್ಯೆ ಪೊಲೀಸರ ಅನುಪಸ್ಥಿತಿಯಲ್ಲಿ ವಿದ್ಯಾರ್ಥಿಗಳು ಸ್ವಯಂಸೇವಕರಾಗಿ ಸಂಚಾರ ನಿರ್ವಹಣೆ ಮಾಡಲು ಯತ್ನಿಸಿದ್ದಾರೆ. ಇದೇ ವೇಳೆ, ಪೊಲೀಸರು ಕರ್ತವ್ಯಕ್ಕೆ ಮರಳಬೇಕು. ಕಾನೂನು ಸುವ್ಯವಸ್ಥೆ ಕಾಪಾಡಬೇಕು ಎಂದು ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಎ.ಕೆ.ಎಂ ಶಾಹಿದುರ್‌ ರಹಮಾನ್‌ ಮನವಿ ಮಾಡಿದ್ದಾರೆ.

ದೇಶ ತೊರೆಯುವ ಕೆಲ ಗಂಟೆಗೂ ಮೊದಲು ಶೇಕ್ ಹಸೀನಾ ನಿವಾಸದಲ್ಲಿ ಏನೆಲ್ಲಾ ನಡಿತು?

ಒಂದೇ ದಿನ 100 ಪೊಲೀಸರು ಸೇರಿ 1000 ಜನರ ಸಾವು? 

ಢಾಕಾ: ಬಾಂಗ್ಲಾದ ಮಾಜಿ ಪ್ರಧಾನಿ ಶೇಖ್‌ ಹಸೀನಾ ರಾಜೀನಾಮೆ ಬೆನ್ನಲ್ಲೇ ಹಿಂಸಾಚಾರ ಮಿತಿ ಮೀರಿದ್ದು, ಒಂದೇ ದಿನದಲ್ಲಿ 100 ಮಂದಿ ಪೊಲೀಸರು ಸೇರಿದಂತೆ 1,000ಕ್ಕೂ ಅಧಿಕ ಜನ ಗಲಭೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಬಾಂಗ್ಲಾದ ಹಿರಿಯ ಪತ್ರಕರ್ತರೊಬ್ಬರು ಅಂದಾಜಿಸಿದ್ದಾರೆ ಎಂದು ಪತ್ರಿಕೆಯೊಂದು ವರದಿ ಮಾಡಿದೆ.

Latest Videos
Follow Us:
Download App:
  • android
  • ios