ದುಬೈನಲ್ಲಿರುವ ಭಾರತೀಯ ರಾಯಭಾರ ಕಚೇರಿಯಲ್ಲಿ ಶನಿವಾರ ದುಬೈ ಬಸವ ಸಮಿತಿಯು ಬಸವಣ್ಣನವರ ಪಂಚಲೋಹ ಪ್ರತಿಮೆ ಪ್ರತಿಷ್ಠಾಪಿಸಿದೆ.

ಬೆಂಗಳೂರು (ಜು. 06): ದುಬೈನಲ್ಲಿರುವ ಭಾರತೀಯ ರಾಯಭಾರ ಕಚೇರಿಯಲ್ಲಿ ಶನಿವಾರ ದುಬೈ ಬಸವ ಸಮಿತಿಯು ಬಸವಣ್ಣನವರ ಪಂಚಲೋಹ ಪ್ರತಿಮೆ ಪ್ರತಿಷ್ಠಾಪಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

"

ಇಲ್ಲಿಯವರೆಗೂ ಭಾರತದ ಹೊರಗೆ ವಿದೇಶಗಳ ಪೈಕಿ ಲಂಡನ್‌ನ ಥೇಮ್ಸ್‌ ನದಿ ದಂಡೆ ಮೇಲೆ ವಿಶ್ವ ಗುರು ಬಸವಣ್ಣ ಪ್ರತಿಮೆ ಸ್ಥಾಪನೆಯಾಗಿತ್ತು. ಇದೀಗ ಅರಬ್‌ ಸಂಯುಕ್ತ ಸಂಸ್ಥಾನದ ದುಬೈನಲ್ಲಿ ಬಸವಣ್ಣನರ ಪ್ರತಿಮೆ ಸ್ಥಾಪನೆಯಾಗುವ ಮೂಲಕ ಮಧ್ಯಪ್ರಾಚ್ಯ ರಾಷ್ಟ್ರಗಳಿಗೂ ಬಸವಣ್ಣನವರ ಚಿಂತನೆಗಳು ಹರಡಲು ಮುಂದಾಗಿದೆ. ಬೆಂಗಳೂರಿನಲ್ಲಿ ಪ್ರತಿಮೆಯನ್ನು ಕೆತ್ತನೆ ಮಾಡಿಸಿ ದುಬೈನಲ್ಲಿ ಪ್ರತಿಷ್ಠಾಪಿಸಲಾಗಿದೆ.

ಕನ್ನಡದಲ್ಲಿ ಬಸವಣ್ಣನ ವಚನದ ಮೂಲಕ ಐಕ್ಯತೆ ಸಂದೇಶ ಸಾರಿದ ಕೇರಳ ಸಿಎಂ!

ಮೂರ್ತಿ ಪ್ರತಿಷ್ಠಾಪನೆ ಸಂದರ್ಭದಲ್ಲಿ ಮಾತನಾಡಿದ ಭಾರತೀಯ ರಾಯಭಾರಿ ಕಚೇರಿ ಅಧಿಕಾರಿ ವಿಪುಲ್‌ ಶಾ, ‘ಮೂರ್ತಿಯನ್ನು ಬಸವ ಜಯಂತಿಯಂದು ಪ್ರತಿಷ್ಠಾಪಿಸುವ ಯೋಜನೆ ಹಾಕಿಕೊಳ್ಳಲಾಗಿತ್ತು. ಆದರೆ, ಕೊರೊನಾ ಲಾಕ್‌ಡೌನ್‌ ಪರಿಣಾಮ ಬಸವ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲು ಸಾಧ್ಯವಾಗಿರಲಿಲ್ಲ. ಆದ್ದರಿಂದ ಶನಿವಾರ ಸರಳವಾಗಿ ಬಸವಣ್ಣನ ಪ್ರತಿಷ್ಠಾಪನೆ ಮಾಡುವ ಕಾರ್ಯಕ್ರಮ ನಡೆಸಲಾಗಿದೆ’ ಎಂದರು.

‘ಮುಂದಿನ ದಿನಗಳಲ್ಲಿ ಕನ್ನಡಿಗರೆಲ್ಲರನ್ನೂ ಸೇರಿಸಿ ಅಧಿಕೃತವಾಗಿ ದೊಡ್ಡ ಪ್ರಮಾಣದ ಕಾರ್ಯಕ್ರಮವನ್ನು ನೆರವೇರಿಸಿ ಜಗಜ್ಯೋತಿ ಬಸವೇಶ್ವರರ ಪುತ್ಥಳಿಯನ್ನು ಅನಾವರಣ ಮಾಡಲಾಗುತ್ತದೆ. ಕರ್ನಾಟಕದ ಮಹಾನ್‌ ಸಮಾಜ ಸುಧಾರಕರಾದ ಬಸವಣ್ಣನವರ ವಚನಗಳಿಂದ ನಾವೆಲ್ಲರೂ ಪ್ರೇರೇಪಿತರಾಗಿರುವುದರಿಂದ ಪ್ರತಿಮೆ ಸ್ಥಾಪಿಸಲಾಗಿದೆ’ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಯುಎಇ ಬಸವ ಸಮಿತಿ ದುಬೈ ಅಧ್ಯಕ್ಷರಾದ ರುದ್ರಯ್ಯ ನವಲಿ ಹಿರೇಮಠ, ಸತೀಶ, ಮಲ್ಲಿಕಾರ್ಜುನ ಉಪಸ್ಥಿತರಿದ್ದರು.