ಪಶ್ಚಿಮ ಏಷ್ಯಾದಲ್ಲಿ ಸಂಘರ್ಷ 7ನೇ ದಿನಕ್ಕೆ ಕಾಲಿಟ್ಟಿದೆ. ಇರಾನ್ ಬೇಷರತ್ ಶರಣಾಗಬೇಕು ಎಂದು ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಗ್ರಹಿಸಿದ್ದಾರೆ. ಇತ್ತ ಇಸ್ರೇಲ್, ಇರಾನ್‌ನ ಖೋಮ್ ನಗರದ ಜನರಿಗೆ ಜಾಗ ಖಾಲಿ ಮಾಡಲು ಸೂಚಿಸಿದೆ.

ಟೆಹ್ರಾನ್: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷ 7ನೇ ದಿನಕ್ಕೆ ಕಾಲಿಟ್ಟಿದೆ. ಇರಾನ್ ಬೇಷರತ್ ಶರಣಾಗಬೇಕು, ಇದಕ್ಕಿಂತ ಬೇರೆ ಯಾವುದೇ ಒಪ್ಪಂದ ಸಾಧ್ಯವಿಲ್ಲ ಅಂತ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಖಡಕ್ಕಾಗಿ ಹೇಳಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಅಮೆರಿಕ ಮತ್ತು ಅದರ ಮಿತ್ರರಾಷ್ಟ್ರಗಳು ಸೇರಿ ಇರಾನ್ ಅನ್ನು ಪುನರ್‌ನಿರ್ಮಾಣ ಮಾಡುತ್ತೇವೆ ಎಂದು ಟ್ರಂಪ್ ತಮ್ಮ 'ಟ್ರೂತ್ ಸೋಶಿಯಲ್' ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಇನ್ನೊಂದೆಡೆ, ಅಮೆರಿಕ-ಇಸ್ರೇಲ್ ಮೈತ್ರಿಕೂಟ ಇರಾನ್ ಮೇಲೆ ಭಾರಿ ದಾಳಿ ನಡೆಸುತ್ತಿದೆ. ಇರಾನ್‌ನ ಖೋಮ್ ನಗರದ ವಾಣಿಜ್ಯ ಪ್ರದೇಶವನ್ನು ತಕ್ಷಣ ಖಾಲಿ ಮಾಡುವಂತೆ ಇಸ್ರೇಲ್ ಸೇನೆ ಜನರಿಗೆ ಸೂಚನೆ ನೀಡಿದೆ. ಇದರ ಬೆನ್ನಲ್ಲೇ, ಇಸ್ರೇಲ್ ಅನ್ನು ಗುರಿಯಾಗಿಸಿಕೊಂಡು ನಾವು ಮತ್ತೆ ಕ್ಷಿಪಣಿ ದಾಳಿ ಆರಂಭಿಸಿದ್ದೇವೆ ಎಂದು ಇರಾನ್ ಹೇಳಿಕೊಂಡಿದೆ. ಇರಾನ್‌ನಲ್ಲಿ ಸಾವಿನ ಸಂಖ್ಯೆ 1200 ದಾಟಿದೆ.

ಗಲ್ಫ್ ವಲಯದಲ್ಲೂ ಇರಾನ್ ತನ್ನ ದಾಳಿಯನ್ನು ಮುಂದುವರಿಸಿದೆ. ಸೌದಿ ಅರೇಬಿಯಾದ ಅಲ್-ಖರ್ಜ್ ಪ್ರದೇಶದ ಮೇಲೆ ಇರಾನ್ ಹಾರಿಸಿದ ಕ್ಷಿಪಣಿಯನ್ನು ನಾವು ಹೊಡೆದುರುಳಿಸಿದ್ದೇವೆ ಎಂದು ಸೌದಿ ಸರ್ಕಾರ ತಿಳಿಸಿದೆ. ಇದೇ ವೇಳೆ, ಬಹ್ರೇನ್‌ನಲ್ಲಿ ಇರಾನ್ ನಡೆಸಿದ ದಾಳಿಯಲ್ಲಿ ತಮ್ಮ 'ಖತಾರ್ ಅಮಿರಿ ನೌಕಾಪಡೆ'ಯ ಸಿಬ್ಬಂದಿಯನ್ನು ಟಾರ್ಗೆಟ್ ಮಾಡಿದ್ದಕ್ಕೆ ಖತಾರ್ ತೀವ್ರ ವಿರೋಧ ವ್ಯಕ್ತಪಡಿಸಿದೆ.

YouTube video player