ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾಗಿಯಾಗಿದ್ದ ಔತಣಕೂಟದ ವೇಳೆ ಶ್ವೇತಭವನದಲ್ಲಿ ಗುಂಡಿನ ದಾಳಿ ನಡೆದಿದೆ. ಗುಂಡಿನ ಸದ್ದು ಕೇಳುತ್ತಿದ್ದಂತೆ ಭದ್ರತಾ ಸಿಬ್ಬಂದಿ ಟ್ರಂಪ್ ಅವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದರು. ಈ ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ.

ವಾಷಿಂಗ್ಟನ್ ಡಿಸಿ: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾಗಿಯಾಗಿದ್ದ ಔತಣಕೂಟದ ವೇಳೆ ಸುಮಾರು ಆರು ಸುತ್ತಿನ ಗುಂಡಿನ ದಾಳಿ ನಡೆದಿದೆ. ಶ್ವೇತಭವನದಲ್ಲಿಯೇ ಗುಂಡಿನ ದಾಳಿ ನಡೆದಿರೋದನ್ನು ಕಂಡು ಇಡೀ ವಿಶ್ವವೇ ಆಘಾತ ವ್ಯಕ್ತಪಡಿಸಿದೆ. ಗುಂಡಿನ ಸದ್ದು ಕೇಳುತ್ತಿದ್ದಂತೆ ಡೊನಾಲ್ಡ್ ಟ್ರಂಪ್ ಅವರನ್ನು ಭದ್ರತಾ ಸಿಬ್ಬಂದಿ ಸುರಕ್ಷಿತ ಸ್ಥಳಕ್ಕೆ ಕರೆದುಕೊಂಡು ಹೋಗಿದ್ದಾರೆ. ಸೀಕ್ರೆಟ್ ಸರ್ವಿಸ್ ಮತ್ತು ಇತರ ಅಧಿಕಾರಿಗಳ ಜೊತೆಗಿನ ಔತಣಕೂಟದಲ್ಲಿ ಡೊನಾಲ್ಡ್ ಟ್ರಂಪ್ ಭಾಗಿಯಾಗಿದ್ದರು.

Add Asianetnews Kannada as a Preferred SourcegooglePreferred

ಭೋಜನ ಕೂಟದ ಸಮಯದಲ್ಲಿ ಶ್ವೇತಭವನದಲ್ಲಿ ಗುಂಡು ಹಾರಿಸಲಾಯಿತು, ಆದರೆ ಯಾವುದೇ ಗಾಯಗಳು ವರದಿಯಾಗಿಲ್ಲ ಎಂದು ಕ್ಯಾಬಿನೆಟ್ ಸದಸ್ಯರೊಬ್ಬರು ಹೇಳಿರುವುದಾಗಿ AFP ವರದಿ ಮಾಡಿದೆ. ಈ ಸಮಯದಲ್ಲಿ, ಟ್ರಂಪ್, ಪ್ರಥಮ ಮಹಿಳೆ ಮೆಲಾನಿಯಾ ಟ್ರಂಪ್ ಮತ್ತು ಇತರ ಹಿರಿಯ ನಾಯಕರನ್ನು ಸುರಕ್ಷತಾ ಕಾರಣಗಳಿಗಾಗಿ ತಕ್ಷಣವೇ ಸ್ಥಳಾಂತರಿಸಲಾಯಿತು. ಸದ್ಯ ಔತಣಕೂಟದಿಂದ ಜನರು ಓಡಿ ಹೋಗುತ್ತಿರುವ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.

Scroll to load tweet…

Scroll to load tweet…