Sri Lanka Crisis ಭಾರತದಿಂದ ಮತ್ತೆ $1 ಬಿಲಿಯನ್ ನೆರವು ಕೇಳಿದ ಶ್ರೀಲಂಕಾ!

  • ಆರ್ಥಿಕ ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಕಳೆದ ವಾರ 1 ಬಿಲಿಯನ್ ನೆರವು
  • ಅಗತ್ಯ ವಸ್ತುಗಳ ಖರೀದಿಗೆ ಮತ್ತೆ 1 ಬಿಲಿಯನ್ ಸಾಲ, ಮಹತ್ವದ ಮಾತುಕತೆ 
  • ಪಾತಾಳಕ್ಕೆ ಕುಸಿದಿರುವ ಆರ್ಥಿಕತ ಸರಿದಾರಿಗೆ ತರಲು ಇನ್ನಿಲ್ಲದ ಹರಸಾಹಸ
     
Economic crisis Sri lanka request india for additional credit line of 1 billion us dollar to import essentials ckm

ನವದೆಹಲಿ(ಮಾ.28): ಒಂದು ಕೆಜಿ ಅಕ್ಕಿಗೆ 500 ರೂಪಾಯಿ, 500 ಗ್ರಾಂ ಹಾಲಿನ ಪುಡಿ ಬೆಲೆ 790 ರೂಪಾಯಿ, ಒಂದು ಕೆಜಿ ಸಕ್ಕರೆ 290 ರೂಪಾಯಿ, ಒಂದು ಲೀಟರ್ ಪೆಟ್ರೋಲ್ ಬೆಲೆ 300 ರೂಪಾಯಿ. ಇದು ಶ್ರೀಲಂಕಾದಲ್ಲಿನ ಆರ್ಥಿಕ ಪರಿಸ್ಥಿತಿ(Srilanka Economic Crisis). ಕಂಡು ಕೇಳರಿಯದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಶ್ರೀಲಂಕಾ ಎಲ್ಲಾ ರಾಷ್ಟ್ರಗಳಲ್ಲಿ ನೆರವು ಬೇಡುತ್ತಿದೆ. ಈಗಾಗಲೇ ಭಾರತ(India) ಅಗತ್ಯ ವಸ್ತುಗಳ ಖರೀದಿಗೆ 1 ಬಿಲಿಯನ್ ಅಮೆರಿಕನ್ ಡಾಲರ್ ಹಣ ಸಾಲ ನೀಡಿದೆ. ಇದೀಗ ಮತ್ತೆ 1 ಬಿಲಿಯನ್ ಅಮೆರಿಕನ್ ಡಾಲರ್ ನೆರವು(Credit) ನೀಡಿ ಎಂದು ಭಾರತಕ್ಕೆ ಮನವಿ ಮಾಡಿದೆ. 

ವಿದೇಶಿ ವಿನಿಮಯದಲ್ಲಿ ಶೇಕಡಾ 70 ರಷ್ಟು ಕುಸಿತ ಕಂಡಿರುವ ಶ್ರೀಲಂಕಾದಲ್ಲಿ ಜನರು ಹಸಿವಿನಿಂದ ಸಾಯುತ್ತಿದ್ದಾರೆ. ಭಾರತ ಈಗಾಗಲೇ ನೆರವು ನೀಡಿದರೂ ಸದ್ಯದ ಪರಿಸ್ಥಿತಿಯಲ್ಲಿ ಶ್ರೀಲಂಕಾಗೆ ಸಾಕಾಗುತ್ತಿಲ್ಲ. ಹೀಗಾಗಿ ಮತ್ತೆ 1 ಬಿಲಿಯನ್ ಅಮೆರಿಕನ್ ಡಾಲರ್ ನೆರವು ನೀಡುವಂತೆ ಭಾರತವನ್ನು ಕೇಳಿಕೊಂಡಿದೆ. ಭಾರತದ ವಿದೇಶಾಂಗ ಸಚಿವ ಹಾಗೂ ಶ್ರೀಲಂಕಾ ಅಧಿಕಾರಿಗಳು ಮಾತುಕತೆ ನಡೆಸಿದ್ದಾರೆ.

ಲಂಕಾಗೆ 40ಸಾವಿರ ಟನ್‌ ಡೀಸೆಲ್‌ ನೀಡಿ ನೆರವಾದ ಭಾರತ

ಭಾರತ ಹಾಗೂ ಶ್ರೀಲಂಕಾ ವಿದೇಶಾಂಗ ಸಚಿವರು ಮಹತ್ವದ ಮಾತುಕತೆ ನಡೆಸಿದ್ದಾರೆ. ಆದರೆ ಈ ಮಾಹಿತಿಗಳನ್ನು ಬಹಿರಂಗಪಡಿಸಲು ಉಭಯ ದೇಶದ ನಾಯಕರು ನಿರಾಕರಿಸಿದ್ದಾರೆ. ಮೂಲಗಳ ಪ್ರಕಾರ ಶ್ರೀಲಂಕಾಗೆ ಮತ್ತೆ ನೆರವು ನೀಡಲು ಭಾರತದ ಮುಂದಾಗಿದೆ ಅನ್ನೋ ಮಾತುಗಳು ಕೇಳಿಬಂದಿದೆ

ಆಹಾರ ಧಾನ್ಯಗಳು ಸೇರಿದಂತೆ ವಿದೇಶಗಳಿಂದ ಯಾವ ವಸ್ತುಗಳನ್ನು ಖರೀದಿಸಲು ಶ್ರೀಲಂಕಾ ಬಳಿ ನಯಾ ಪೈಸೆ ಇಲ್ಲದಾಗಿದೆ. ಹಣದುಬ್ಬರದಿಂದ ಜನರು ಕಂಗಾಲಾಗಿದ್ದಾರೆ.ಶ್ರೀಲಂಕಾದ ಪ್ರಮುಖ ಆದಾಯ ಮೂಲ ಪ್ರವಾಸೋದ್ಯಮ. ಆದರೆ ಕೋವಿಡ್‌ನಿಂದಾಗಿ ಕಳೆದ 3 ವರ್ಷಗಳಿಂದ ಈ ಉದ್ಯಮ ಪೂರ್ಣ ನೆಲಕಚ್ಚಿದೆ. ಮತ್ತೊಂದೆಡೆ ಶ್ರೀಲಂಕಾ ತನ್ನ ಬಹುತೇಕ ವಸ್ತುಗಳಿಗಾಗಿ ವಿದೇಶಗಳನ್ನೇ ಅವಲಂಬಿಸಿದೆ. ಪ್ರತಿಯೊಂದಕ್ಕೂ ಡಾಲರ್‌ ಮೂಲಕವೇ ಹಣ ಪಾವತಿ ಮಾಡಬೇಕು. ಆದರೆ ಆದಾಯ ಮೂಲ ಬತ್ತಿಹೋದ ಕಾರಣ, ದೇಶ ಆರ್ಥಿಕ ಸಂಕಷ್ಟಕ್ಕೆ ಸಿಕ್ಕಿಹಾಕಿಕೊಂಡಿದೆ. ವಿದೇಶಿ ವಿನಿಮಯ ಪೂರ್ಣ ಕರಗಿಹೋಗಿದೆ. ವಿದೇಶಗಳಿಂದ ಅಗತ್ಯ ವಸ್ತುಗಳ ಖರೀದಿಗೂ ಹಣ ಇಲ್ಲದಾಗಿದೆ. ಹೀಗೆ ಅಗತ್ಯ ವಸ್ತು ಪೂರೈಕೆ ಕಡಿತಗೊಂಡ ಕಾರಣ ಅವುಗಳ ಬೆಲೆ ಗಗನಕ್ಕೇರಿದೆ.

ಶ್ರೀಲಂಕಾದಲ್ಲಿ ಆರ್ಥಿಕ ಸ್ಥಿತಿ ಭೀಕರ: ತಮಿಳುನಾಡಿನ ರಾಮೇಶ್ವರಂಗೆ 6 ನಿರಾಶ್ರಿತರ ಆಗಮನ!

ಲಂಕಾದಲ್ಲಿ ಬದುಕು ದುಸ್ತರವಾದ ಬೆನ್ನಲ್ಲೇ, ಅಲ್ಲಿನ ತಮಿಳು ಕುಟುಂಬಗಳು ಬೋಟ್‌ ಮಾಲೀಕರಿಗೆ  ಹಣ ಕೊಟ್ಟು ಭಾರತಕ್ಕೆ ವಲಸೆ ಬರುತ್ತಿವೆ. ಹಸಿವಿನಿಂದ ಸಾಯುವ ಬದಲು ಭಾರತದ ಜೈಲಿನಲ್ಲಾದರು ಇರುತ್ತೇವೆ ಎಂದು ಭಾರತ ರಾಮೇಶ್ವರಂ ಸೇರಿದಂತೆ ತಮಿಳುನಾಡಿನ ಕರಾವಳಿ ತೀರಕ್ಕೆ ಅಕ್ರಮವಾಗಿ ಆಗಮಿಸುತ್ತಿದ್ದಾರೆ.

ತೀವ್ರ ಆರ್ಥಿಕ ಬಿಕ್ಕಟ್ಟು ಸೃಷ್ಟಿಯಾಗಿದೆ. ಪರಿಣಾಮ ಅಡುಗೆ ಅನಿಲ, ಪೆಟ್ರೋಲ್‌ ಮತ್ತು ಡೀಸೆಲ್‌ನಂಥ ಅಗತ್ಯವಸ್ತುಗಳ ಭಾರೀ ಕೊರತೆ ಉಂಟಾಗಿದೆ. ಹೀಗಾಗಿ ಪೆಟ್ರೋಲ್‌ ಬಂಕ್‌ಗಳಲ್ಲಿ ಸರತಿ ಸಾಲಿನಲ್ಲಿ ನಿಂತ ಜನರು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಅದು ಹಿಂಸಾಚಾರಕ್ಕೆ ತಿರುಗಿದೆ. ಹೀಗಾಗಿ ಪರಿಸ್ಥಿತಿ ನಿಯಂತ್ರಣಕ್ಕೆ ಪೆಟ್ರೋಲ್‌ ಬಂಕ್‌ಗಳಲ್ಲಿ ಸೇನೆ ನಿಯೋಜಿಸಿ ಶ್ರೀಲಂಕಾ ಆದೇಶ ಹೊರಡಿಸಿದೆ.

ತೈಲ ಖರೀದಿಗಾಗಿ ಸರದಿ ಸಾಲಿನಲ್ಲಿ ನಿಂತ ಇಬ್ಬರು ಸಾವನ್ನಪಿದ ಘಟನೆಯೂ ಶ್ರೀಲಂಕಾದಲ್ಲಿ ನಡೆದಿದೆ. ಲಂಕಾ ಪರಿಸ್ಥಿತ ಘನಘೋರವಾಗಿದೆ.  

Latest Videos
Follow Us:
Download App:
  • android
  • ios