ಜಗತ್ತಿನ ಶ್ರೀಮಂತ ಉದ್ಯಮಿ ಎಲಾನ್ ಮಸ್ಕ್‌ ಅವರು ಭಾರತದ ಪ್ರಧಾನಿಯಾಗಿ ನರೇಂದ್ರ ಮೋದಿ ಪುನರಾಯ್ಕೆಯಾಗಿರುವುದಕ್ಕೆ ಶುಭಕೋರಿದ್ದಾರೆ. ಭಾರತದಲ್ಲಿ ತಮ್ಮ ಕಂಪನಿಗಳ ಶಾಖೆಗಳನ್ನು ತೆರೆದು ಕೆಲಸ ಮಾಡಲು ಉತ್ಸುಕನಾಗಿರುವುದಾಗಿ ತಿಳಿಸಿದ್ದಾರೆ.

ನ್ಯೂಯಾರ್ಕ್‌ (ಜೂ.9): ಜಗತ್ತಿನ ಶ್ರೀಮಂತ ಉದ್ಯಮಿ ಎಲಾನ್ ಮಸ್ಕ್‌ ಅವರು ಭಾರತದ ಪ್ರಧಾನಿಯಾಗಿ ನರೇಂದ್ರ ಮೋದಿ ಪುನರಾಯ್ಕೆಯಾಗಿರುವುದಕ್ಕೆ ಶುಭಕೋರಿದ್ದಾರೆ. ಭಾರತದಲ್ಲಿ ತಮ್ಮ ಕಂಪನಿಗಳ ಶಾಖೆಗಳನ್ನು ತೆರೆದು ಕೆಲಸ ಮಾಡಲು ಉತ್ಸುಕನಾಗಿರುವುದಾಗಿ ತಿಳಿಸಿದ್ದಾರೆ. ಹಾಗಾಗಿ ಭಾರತದಲ್ಲಿ ಮತ್ತೊಮ್ಮೆ ಟೆಸ್ಲಾ ಎಲೆಕ್ಟ್ರಿಕ್‌ ಕಾರು ಉತ್ಪಾದನಾ ಘಟಕ ಸ್ಥಾಪನೆಯ ಕನಸು ಚಿಗುರೊಡೆದಿದೆ.

ಎಲಾನ್‌ ಮಸ್ಕ್‌ ಶುಭಕೋರಿದ್ದಕ್ಕೆ ಮೋದಿ ಪ್ರತಿಕ್ರಿಯಿಸಿ ‘ಭಾರತದಲ್ಲಿ ಸದಾಕಾಲ ಉದ್ಯಮಸ್ನೇಹಿ ವಾತಾವರಣವಿದೆ. ನಿಮಗೆ ಧನ್ಯವಾದಗಳು’ ಎಂದು ಟ್ವೀಟ್‌ ಮಾಡಿದ್ದಾರೆ.

10 ವರ್ಷವಾದರೂ 100 ಸ್ಥಾನ ಗೆಲ್ಲಲಾಗಲಿಲ್ಲ: ಕಾಂಗ್ರೆಸ್ ವಿರುದ್ಧ ಮೋದಿ ವಾಗ್ದಾಳಿ!

ಎಲಾನ್‌ ಮಸ್ಕ್‌ ಭಾರತಕ್ಕೆ ಕಳೆದ ಏಪ್ರಿಲ್‌ನಲ್ಲಿ ಬರಬೇಕಿತ್ತಾದರೂ ಕೊನೆಯ ಕ್ಷಣದಲ್ಲಿ ಕಾರ್ಯಕ್ರಮವನ್ನು ರದ್ದುಗೊಳಿಸಿ ಚೀನಾಗೆ ತೆರಳಿದ್ದರು. ಅವರು ಭಾರತದ ಗುಜರಾತ್‌ನಲ್ಲಿ 41.5 ಸಾವಿರ ಕೋಟಿ ರು. (500 ಮಿಲಿಯನ್‌ ಡಾಲರ್‌) ಹೂಡಿಕೆಯಲ್ಲಿ ಟೆಸ್ಲಾ ಕಾರು ಉತ್ಪಾದನಾ ಘಟಕ ಸ್ಥಾಪಿಸಲು ಸಿದ್ಧತೆ ನಡೆಸಿದ್ದಾರೆ.

ಇವಿಎಂ ಅನುಮಾನಿಸಿದ ಕಾಂಗ್ರೆಸ್‌ಗೆ ಮೋದಿ ಚಾಟಿ

ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ 293 ಸ್ಥಾನ ಗೆದ್ದು ಅಧಿಕಾರದ ಭಾಗ್ಯ ಪಡೆದಿರುವ ಬಿಜೆಪಿ ನೇತೃತ್ವದ ಎನ್‌ಡಿಎ ಕೂಟದ ಕೇಂದ್ರ ಸರ್ಕಾರ ಭಾನುವಾರ ಅಸ್ತಿತ್ವಕ್ಕೆ ಬರಲಿದೆ. ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಮಂತ್ರಿಮಂಡಲದ ಸದಸ್ಯರು ರಾತ್ರಿ 7.15ಕ್ಕೆ ರಾಷ್ಟ್ರಪತಿ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡುವುದರೊಂದಿಗೆ ನೂತನ ಸರ್ಕಾರ ರಚನೆಯಾಗಲಿದೆ. 

Scroll to load tweet…

Scroll to load tweet…