Asianet Suvarna News Asianet Suvarna News

ಅಮೆರಿಕದಲ್ಲಿ ಹಿಂದೂ ದೇವಾಲಯ ವಿರೂಪ: ಖಲಿಸ್ತಾನಿ ಪರ ಘೋಷಣೆಗಳ ಬರೆದ ಕಿಡಿಗೇಡಿಗಳು

ಅಮೆರಿಕದಲ್ಲಿ ಹಿಂದೂ ದೇವಾಲಯವನ್ನು ವಿರೂಪಗೊಳಿಸಿದ್ದು ಇದೇ ಮೊದಲಲ್ಲ. ಇಂತಹ ಘಟನೆಗಳು ಈ ಹಿಂದೆಯೂ ಯುಎಸ್‌ ಹಾಗೂ ನೆರೆಯ ಕೆನಡಾದಲ್ಲಿಯೂ ನಡೆದಿವೆ.

hindu temple defaced with pro khalistani slogans in united states ash
Author
First Published Dec 23, 2023, 12:02 PM IST

ವಾಷಿಂಗ್ಟನ್‌ ಡಿಸಿ (ಡಿಸೆಂಬ್ 23, 2023): ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಖಲಿಸ್ತಾನಿ ಪರ ಘೋಷಣೆಗಳನ್ನು ಬರೆದು ಹಿಂದೂ ದೇವಾಲಯವನ್ನು ವಿರೂಪಗೊಳಿಸಲಾಗಿದೆ. ಕ್ಯಾಲಿಫೋರ್ನಿಯಾದ ನೆವಾರ್ಕ್‌ ನಗರದಲ್ಲಿ ಈ ಘಟನೆ ನಡೆದಿದೆ. 

ಅಮೆರಿಕದ ಸ್ವಾಮಿನಾರಾಯಣ ಮಂದಿರ ವಸನಾ ಸಂಸ್ಥೆಯ ಗೋಡೆಗಳ ಮೇಲೆ ಗೀಚಿದ ಘೋಷಣೆಗಳನ್ನು ತೋರಿಸುವ ಚಿತ್ರಗಳನ್ನು ಹಿಂದೂ ಅಮೆರಿಕನ್ ಫೌಂಡೇಶನ್ X ನಲ್ಲಿ (ಈ ಹಿಂದಿನ ಟ್ವಿಟ್ಟರ್‌) ನಲ್ಲಿ ಹಂಚಿಕೊಂಡಿದೆ. ದೇವಾಲಯದ ಗೋಡೆಯ ಮೇಲೆ ಭಾರತ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ದ್ವೇಷಪೂರಿತ ಘೋಷಣೆಗಳನ್ನು ಚಿತ್ರಗಳು ತೋರಿಸಿವೆ.

ಇದನ್ನು ಓದಿ: ಕೋಳಿ ಅಂಗಡಿಯಾದ ಪಾಕಿಸ್ತಾನದ ಪ್ರಸಿದ್ಧ ರಾಮ-ಸೀತೆ ದೇವಸ್ಥಾನ!

ಘಟನೆಯನ್ನು ದ್ವೇಷದ ಅಪರಾಧವೆಂದು ತನಿಖೆ ಮಾಡಬೇಕು ಎಂದು ಪ್ರತಿಷ್ಠಾನ ಒತ್ತಾಯಿಸಿದ್ದು, ನೆವಾರ್ಕ್ ಪೊಲೀಸ್ ಇಲಾಖೆ ಮತ್ತು ನ್ಯಾಯಾಂಗ ನಾಗರಿಕ ಹಕ್ಕುಗಳ ವಿಭಾಗಕ್ಕೆ ಈ ಬಗ್ಗೆ ತಿಳಿಸಲಾಗಿದೆ ಎಂದೂ ಹೇಳಿದರು. ಇನ್ನು, ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ದೂತಾವಾಸ ಕಚೇರಿ ಸ್ವಾಮಿನಾರಾಯಣ ಮಂದಿರ ವಸನಾ ಸಂಸ್ಥೆಯ ವಿರೂಪಗೊಳಿಸುವಿಕೆಯನ್ನು ಖಂಡಿಸಿದೆ ಮತ್ತು ದುಷ್ಕರ್ಮಿಗಳ ವಿರುದ್ಧ ತ್ವರಿತ ತನಿಖೆ ಮತ್ತು ತ್ವರಿತ ಕ್ರಮಕ್ಕಾಗಿ ಯುಎಸ್ ಅಧಿಕಾರಿಗಳಿಗೆ ಒತ್ತಡ ಹೇರಿದ್ದೇವೆ ಎಂದು ಹೇಳಿದರು.

ಈ ಸಂಬಂಧ ಸ್ಯಾನ್ ಫ್ರಾನ್ಸಿಸ್ಕೋದ ಭಾರತೀಯ ಕಾನ್ಸುಲೇಟ್ ಟ್ವೀಟ್‌ ಮಾಡಿದ್ದು, ಕ್ಯಾಲಿಫೋರ್ನಿಯಾದ ನೆವಾರ್ಕ್‌ನಲ್ಲಿರುವ ಎಸ್‌ಎಂವಿಎಸ್ ಶ್ರೀ ಸ್ವಾಮಿನಾರಾಯಣ ಮಂದಿರವನ್ನು ಭಾರತ ವಿರೋಧಿ ಗೀಚುಬರಹದ ಮೂಲಕ ವಿರೂಪಗೊಳಿಸಿರುವುದನ್ನು ನಾವು ಬಲವಾಗಿ ಖಂಡಿಸುತ್ತೇವೆ. ಈ ಘಟನೆಯು ಭಾರತೀಯ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿದೆ. ಈ ವಿಚಾರವಾಗಿ ಯುಎಸ್ ಅಧಿಕಾರಿಗಳಿಂದ ತ್ವರಿತ ಕ್ರಮಕ್ಕಾಗಿ ನಾವು ಆಗ್ರಹಿಸಿದ್ದೇವೆ ಎಂದೂ ಪೋಸ್ಟ್‌ ಮಾಡಿದೆ. 

ದೇವಸ್ಥಾನದೊಳಗೆ ನುಗ್ಗಿ ಶಿವಲಿಂಗದ ಎದುರೇ ಮೂತ್ರ ವಿಸರ್ಜನೆ : ಮುಸ್ಲಿಂ ಯುವಕನ ಬಂಧನ

ಆದರೆ, ಅಮೆರಿಕದಲ್ಲಿ ಹಿಂದೂ ದೇವಾಲಯವನ್ನು ವಿರೂಪಗೊಳಿಸಿದ್ದು ಇದೇ ಮೊದಲಲ್ಲ. ಇಂತಹ ಘಟನೆಗಳು ಈ ಹಿಂದೆಯೂ ಯುಎಸ್‌ ಹಾಗೂ ನೆರೆಯ ಕೆನಡಾದಲ್ಲಿಯೂ ನಡೆದಿವೆ.

ಕೆನಡಾದ ಸರ್ರೆ ನಗರದಲ್ಲಿನ ದೇವಾಲಯವನ್ನು ಮಧ್ಯರಾತ್ರಿಯಲ್ಲಿ ಕಿಡಿಗೇಡಿಗಳು ಧ್ವಂಸಗೊಳಿಸಿದರು. ಅಲ್ಲದೆ, ದೇವಸ್ಥಾನದ ಮುಖ್ಯ ಬಾಗಿಲಿಗೆ ಸಾರ್ವಜನಿಕ ಸಭೆಗೆ ಸಂಬಂಧಿಸಿದ ಪೋಸ್ಟರ್‌ಗಳನ್ನು ಅಂಟಿಸಲಾಗಿದ್ದು, ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯನ್ನುಖಂಡಿಸಿ ಈ ಕೃತ್ಯ ಮಾಡಿದಂತೆ ಇತ್ತು.

ವಿದೇಶದ ಅತಿ ದೊಡ್ಡ ಹಿಂದೂ ದೇಗುಲ ಅಮೆರಿಕದಲ್ಲಿ ಉದ್ಘಾಟನೆ: ಆ.18ರಿಂದ ಭಕ್ತರಿಗೆ ಮುಕ್ತ ಪ್ರವೇಶ

Latest Videos
Follow Us:
Download App:
  • android
  • ios