* ಗೌಪ್ಯತೆಗೆ ಹೆಸರಾಗಿರುವ ಭಾರತದಲ್ಲಿನ ಸ್ವಿಜರ್ಲೆಂಡ್ ಮೂಲದ ಬ್ಯಾಂಕ್‌ಗಸ್ವಿಸ್‌ಬ್ಯಾಂಕಲ್ಲಿ ಭಾರತೀಯರ 30500 ಕೋಟಿ ರು. ಹಣ!* 14 ವರ್ಷಗಳಲ್ಲೇ ಗರಿಷ್ಠ ಪ್ರಮಾಣ
ನವದೆಹಲಿ(ಜೂ.17): ಗೌಪ್ಯತೆಗೆ ಹೆಸರಾಗಿರುವ ಭಾರತದಲ್ಲಿನ ಸ್ವಿಜರ್ಲೆಂಡ್ ಮೂಲದ ಬ್ಯಾಂಕ್‌ಗಳು ಮತ್ತು ಸ್ವಿಜರ್ಲೆಂಡಿನಲ್ಲಿರುವ ಬ್ಯಾಂಕ್‌ಗಳಲ್ಲಿ ಭಾರತೀಯರು ಮತ್ತು ಭಾರತೀಯ ಮೂಲದ ಸಂಸ್ಥೆಗಳು ಇಟ್ಟಿರುವ ಹಣದ ಮೊತ್ತ 30500 ಕೋಟಿ ರು.ಗೆ ಏರಿಕೆಯಾಗಿದೆ. ಇದು ಕಳೆದ 14 ವರ್ಷಗಳಲ್ಲೇ ಗರಿಷ್ಠ. ಎಂದು ಸ್ವಿಸ್ ಸೆಂಟ್ರಲ್ ಬ್ಯಾಂಕಿನ ವಾರ್ಷಿಕ ವರದಿಯು ತಿಳಿಸಿದೆ. 2020ರಲ್ಲಿ ಭಾರತೀಯರ ನಿಧಿಯ ಮೌಲ್ಯ 20,700 ಕೋಟಿ ರು.ಗಳಷ್ಟಿತ್ತು. 2006ರಲ್ಲಿ ಭಾರತೀಯರ ಸ್ವಿಸ್ ಖಾತೆಗಳಲ್ಲಿ 50,000 ಕೋಟಿ ರು.ಗಳಷ್ಟುಹಣ ಠೇವಣಿಗಳ ರೂಪದಲ್ಲಿತ್ತು. ನಂತರ ಇದರ ಪ್ರಮಾಣದಲ್ಲಿ ಸತತ ಇಳಿಕೆ ಕಂಡುಬಂದಿತ್ತು.
ಇದೇ ವೇಳೆ ಭಾರತೀಯರ ಉಳಿತಾಯ ಖಾತೆಯ ಠೇವಣಿ 4,800 ಕೋಟಿ ರು.ಗಳಿಗೆ ಏರಿಕೆಯಾಗಿದೆ. ಇದು ಕಳೆದ 7 ವರ್ಷಗಳ ಗರಿಷ್ಠ. 15.61 ಸಾವಿರ ಕೋಟಿ ರು.ಗಳಷ್ಟುಮೌಲ್ಯದ ಬಾಂಡ್, ಭದ್ರತೆಗಳನ್ನು ಭಾರತೀಯರ ಗ್ರಾಹಕರ ಹೆಸರಿನಲ್ಲಿ ಸ್ವಿಸ್ ಬ್ಯಾಂಕಿನಲ್ಲಿಡಲಾಗಿದೆ ಎಂದು ವರದಿ ತಿಳಿಸಿದೆ.
‘ಈ ಮೌಲ್ಯವನ್ನು ಭಾರತೀಯರು ಸ್ವಿಸ್ ಬ್ಯಾಂಕುಗಳಲ್ಲಿಟ್ಟಕಪ್ಪುಹಣದ ಪ್ರಮಾಣ ಎಂಬಂತೆ ಬಿಂಬಿಸಬಾರದು. ಜೊತೆಗೆ ಅನಿವಾಸಿ ಭಾರತೀಯರು ಹಾಗೂ ಇನ್ನೊಂದು ದೇಶದ ನಿವಾಸಿಯ ಹೆಸರಿನಲ್ಲಿ ಭಾರತೀಯರು ಠೇವಣಿ ಮಾಡಿದ ಹಣವನ್ನು ಇದು ಒಳಗೊಂಡಿಲ್ಲ. ಭಾರತದಲ್ಲಿರುವ ಸ್ವಿಸ್ ಬ್ಯಾಂಕ್ ಶಾಖೆ ಹಾಗೂ ಭಾರತೀಯ ಬ್ಯಾಂಕ್ ಹಾಗೂ ಸ್ವಿಸ್ ಬ್ಯಾಂಕ್ ನಡುವಿನ ವ್ಯವಹಾರ ಹೆಚ್ಚಳವಾದ ಕಾರಣದಿಂದ ಠೇವಣಿಯಲ್ಲಿ ಏರಿಕೆಯಾಗಿದೆ ಎಂದು ವರದಿ ಹೇಳಿದೆ.
