ಖರ್ತೋಮ್(ಡಿ.04): ಸುಡಾನ್ ಫ್ಯಾಕ್ಟರಿಯೊಂದರಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, 18 ಭಾರತೀಯರು ಸೇರಿದಂತೆ ಒಟ್ಟು 23 ಜನರು ದುರ್ಮರಣಕ್ಕೀಡಾಗಿದ್ದಾರೆ.

ಫ್ಯಾಕ್ಟರಿ ಬಳಿ ಗ್ಯಾಸ್ ಟ್ಯಾಂಕರ್ ಸ್ಫೋಟಗೊಂಡ ಪರಿಣಾಮ ಇಡೀ ಕಾರ್ಖಾನೆ ಬೆಂಕಿಯ ಕೆನ್ನಾಲಿಗೆಗೆ ಸಿಕ್ಕು ಭಸ್ಮವಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಕಾರ್ಖಾನೆಯಲ್ಲಿ ಸುಮಾರು 50 ಭಾರತೀಯರು ಕೆಲಸ ಮಾಡುತ್ತಿದ್ದು, ಈ ಪೈಕಿ 18 ಕಾರ್ಮಿಕರು ದುರ್ಮರಣಕ್ಕೀಡಾಗಿದ್ದಾರೆ ಎಂದು ರಕ್ಷಣಾ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ರನ್’ವೇಯಲ್ಲೇ ವಿಮಾನ ಪತನ; ಪ್ರಯಾಣಿಕರು ಪವಾಡಸದೃಶ ಪಾರು

ಇನ್ನು ಸುಡಾನ್ ಸ್ಫೋಟದ ಮಾಹಿತಿ ಪಡೆದ ಕೇಂದ್ರ ಸರ್ಕಾರ, ಸುಡಾನ್‌ ಜೊತೆ ನಿರಂತರ ಸಂಪರ್ಕದಲ್ಲಿದ್ದು, ಕ್ಷಣ ಕ್ಷಣದ ಮಾಹಿತಿ ಪಡೆಯುತ್ತಿದೆ.

ಸಂತ್ರಸ್ತ ಕುಟುಂಬಸ್ಥರ ನೆರವಿಗಾಗಿ ವಿದೇಶಾಂಗ ಇಲಾಖೆ ಈಗಾಗಲೇ ಸಹಾಯವಾಣಿ ಕೇಂದ್ರ ತೆರೆದಿದ್ದು, +249-921917471 ನಂಬರ್‌ಗೆ ಕರೆ ಮಾಡಿ ಮಾಹಿತಿ ಪಡೆಯುವಂತೆ ಮನವಿ ಮಾಡಿದೆ.

ಈ ಕುರಿತು ಟ್ವಿಟ್ ಮಾಡಿರುವ ವಿದೇಶಾಂಗ ಸಚಿವ ಜೈ ಶಂಕರ್, ಭಾರತೀಯರ ರಕ್ಷಣೆಗಾಗಿ ಸರ್ಕಾರ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಭರವಸೆ ನೀಡಿದ್ದಾರೆ.