ಇಟಲಿಯಲ್ಲಿ ಹಣದುಬ್ಬರ ಮತ್ತು ಶಿಕ್ಷಣ ವ್ಯವಸ್ಥೆ ಹದಗೆಡುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಸರ್ಕಾರದ ವಿರುದ್ಧ ವಿದ್ಯಾರ್ಥಿಗಳು ಮತ್ತು ಕಾರ್ಮಿಕರು ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ. ಹಲವು ನಗರಗಳಲ್ಲಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಪೊಲೀಸರ ಮೇಲೆ ದಾಳಿ ನಡೆದಿವೆ.

ಭಾರತದಲ್ಲಿ ನೀಟ್ ಪರೀಕ್ಷಾ ಅಕ್ರಮ, ಶಿಕ್ಷಣ ಸುಧಾರಣೆಗಾಗಿ ವಿದ್ಯಾರ್ಥಿಗಳ ಪ್ರತಿಭಟನೆಯಂತೆಯೇ ಇಟಲಿಯಲ್ಲಿ ಹಣದುಬ್ಬರ ಮತ್ತು ಹದಗೆಡುತ್ತಿರುವ ಶಿಕ್ಷಣ ವ್ಯವಸ್ಥೆ ವಿರುದ್ಧ ಆಕ್ರೋಶಗೊಂದ ಜನರು ಬೀದಿಗಿಳಿದಿದ್ದು ಪ್ರಧಾನಿ ಜಾರ್ಜಿಯಾ ಮೆಲೋನಿ ವಿರುದ್ಧ ಸಂಘರ್ಷ ಭುಗಿಲೆದ್ದಿದೆ.

ಹೌದು ತೀವ್ರಗೊಂಡಿರುವ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಕಾರ್ಮಿಕ ಸಂಘಟನೆಗಳು ಒಟ್ಟಾಗಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರ ಸರ್ಕಾರದ ವಿರುದ್ಧ ಪ್ರತಿಭಟನೆ ತೀವ್ರಗೊಳಿಸಿವೆ. ರೋಮ್ ಸೇರಿದಂತೆ ಹಲವು ನಗರಗಳಲ್ಲಿ ಶಾಲೆಗಳನ್ನು ವಶಕ್ಕೆ ಪಡೆಲಾಗಿದೆ. ಉದ್ರಿಕ್ತ ಜನರು ಪೊಲೀಸರೊಂದಿಗೆ ಘರ್ಷಣೆ ನಡೆಸುತ್ತಿದ್ದಾರೆ.

ಫ್ರಾನ್ಸ್, ಸ್ಪೇನ್‌ನಲ್ಲಿ ನಡೆಯುತ್ತಿರುವ ಹಿಂಸಾಚಾರ ಚಳವಳಿಗಳಿಂದ ಪ್ರೇರಿತರಾಗಿರುವ ಜನರು ಇಟಲಿಯಾದ್ಯಂತ ಸರಣಿ ಪ್ರತಿಭಟನೆಗಳು ನಡೆಸುತ್ತಿದ್ದಾರೆ ಎಂದು ವರದಿಯಾಗಿವೆ. ಆದರೆ ಈ ಎಲ್ಲಾ ಪ್ರತಿಭಟನೆ ಸಂಘರ್ಷ ಹಿಂಸಾಚಾರಗಳ ಹಿಂದಿರುವ ಉದ್ದೇಶವೊಂದೇ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರ ಬಲಪಂಥೀಯ ಸರ್ಕಾರವನ್ನು ವಿರೋಧಿಸುವುದಾಗಿದೆ.

ಹಿಂಸಾಚಾರ ಖಂಡಿಸಿದ ಪ್ರಧಾನಿ ಮೆಲೋನಿ

ದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಗಳನ್ನು ಪ್ರಧಾನಿ ಮೆಲೋನಿ ತೀವ್ರವಾಗಿ ಖಂಡಿಸಿದ್ದಾರೆ. ಅಲ್ಲದೆ ದೇಶದಲ್ಲಿ ಹಿಂಸಾಚಾರ ಅರಾಜಕತೆ ಸೃಷ್ಟಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿರುವ ಅವರು ಇಂತಹ ಘಟನೆಗಳನ್ನು ಸಹಿಸಲು ಸಾಧ್ಯವಿಲ್ಲ ಎಂದು ಎಚ್ಚರಿಸಿದ್ದಾರೆ.

ಮೆಲೋನಿ ಎಕ್ಸ್‌ ಪೋಸ್ಟ್‌ನಲ್ಲಿ ಏನಿದೆ?

ಇಟಲಿಯಾದ್ಯಂತ ನಡೆಯುತ್ತಿರುವ ಪ್ರತಿಭಟನೆ, ಹಿಂಸಾಚಾರ ಕುರಿತಂತೆ 'X' ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೆಲೋನಿ, ಶಾಂತಿಯುತ ಪ್ರತಿಭಟನೆ ನಡೆಸುವ ಜನರ ಬಗ್ಗೆ ನನಗೆ ಅಪಾರ ಗೌರವವಿದೆ. ಆದರೆ ವಿದ್ಯಾರ್ಥಿಗಳ ನೆಪದಲ್ಲಿ ಹಿಂಸಾಚಾರ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟ ಮಾಡುವ ಕ್ಷುದ್ರ ಶಕ್ತಿಗಳ ಕೃತ್ಯವನ್ನು ಸಹಿಸಲು ಸಾಧ್ಯವಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಪೋಸ್ಟ್‌ನಲ್ಲಿ ಸಿಜಿಐಎಲ್ (CGIL) ಕರೆ ನೀಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿದವರು ಹಾಗೂ ಅದರಲ್ಲಿ ಪಾಲ್ಗೊಂಡಿದ್ದವರೆಲ್ಲ ಎಡಪಂಥೀಯ ನಾಯಕರೇ ಸೇರಿದ್ದಾರೆ. ಜನರು ಯಾವುದೇ ವಿಚಾರ ಅಥವಾ ಬೇಡಿಕೆಗಳಿಗೆ ಪ್ರತಿಭಟಿಸಲು ನಿರ್ಧರಿಸಿದರೂ ಸರಿ. ಆದ್ರೆ ಪ್ರಜಾಪ್ರಭುತ್ವ ಧಕ್ಕೆಯಾಗದಂತೆ ಸಾರ್ವಜನಿಕರು ಸಹಕಾರ ಮುಖ್ಯವಾಗಿದೆ ಎಂದಿದ್ದಾರೆ.

ಇಟಲಿಯ ವಿವಿಧ ನಗರಗಳಲ್ಲಿ ಭುಗಿಲೆದ್ದ ಹಿಂಸಾಚಾರ

ಇಟಲಿಯ ಹಲವು ನಗರಗಳಲ್ಲಿ ಪ್ರತಿಭಟನೆ ನೆಪದಲ್ಲಿ ನಡೆದ ಹಿಂಸಾಚಾರಗಳು ಸಹಿಸಲು ಸಾಧ್ಯವಿಲ್ಲ ಎಂದಿರುವ ಪ್ರಧಾನಿ ಮೆಲೋನಿ, ಮಿಲನ್‌ನಲ್ಲಿ, ಇಟಾಲಿಯನ್ ಪೊಲೀಸರು ಮತ್ತು ಭದ್ರತಾ ಪಡೆಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಈ ಹಿಂಸಾಚಾರದಲ್ಲಿ ಹಲವು ಅಧಿಕಾರಿಗಳು ಗಾಯಗೊಂಡಿದ್ದಾರೆ. ಪ್ರತಿಭಟನಾಕಾರರು ದಾಂಧಲೆ ಹಿಂಸಾಚಾರ ನಡೆಸಿದ್ದಾರೆ.

ಇನ್ನು ಟುರಿನ್‌ನಲ್ಲಿ ಕಿಟಕಿಗಳನ್ನು ಒಡೆಯಲು ಕಲ್ಲು, ಸುತ್ತಿಗೆಗಳನ್ನು ಕೊಂಡೊಯ್ಯುತ್ತಿದ್ದ ಕೆಲವರನ್ನ ವಶಕ್ಕೆ ಪಡೆಯಲಾಗಿದೆ. ಅದೇ ಸಮಯದಲ್ಲಿ, ಬೊಲೊಗ್ನಾದಲ್ಲಿ ಹಿಂಸಾಚಾರ ಮತ್ತು ಅಶಾಂತಿಯ ಕಾರಣದಿಂದಾಗಿ ಮುಂಜಾಗ್ರತೆಗಾಗಿ ರೈಲು ನಿಲ್ದಾಣವನ್ನು ಮುಚ್ಚಬೇಕಾಯಿತು. ಕೆಲವು ಸಮಾಜಘಾತುಕ ಶಕ್ತಿಗಳು ಪ್ರತಿಭಟನೆಗಳನ್ನು ದುರುಪಯೋಗಪಡಿಸಿಕೊಂಡು ಹಿಂಸಾಚಾರ ಸೃಷ್ಟಿಸಲು ಭದ್ರತಾ ಸಿಬ್ಬಂದಿ ಮೇಲೆ ದಾಳಿ ಮಾಡಲು ನಗರದಾದ್ಯಂತ ವ್ಯವಸ್ಥೆ ಹಾಳುಗೆಡವಲು ಯತ್ನಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

Scroll to load tweet…

ಪ್ರತಿಪಕ್ಷಗಳಿಗೆ ಪ್ರಧಾನಿ ಮೆಲೋನಿ ಮನವಿ

ಅದೇ ರೀತಿ ತಮ್ಮ ಪೋಸ್ಟ್‌ನಲ್ಲಿ ಪ್ರಧಾನಿಯವರು ಮೆಲೋನಿ ಅವರು, ಪ್ರತಿಯೊಬ್ಬ ವ್ಯಕ್ತಿಗೂ ಪ್ರತಿಭಟಿಸುವ ಹಕ್ಕಿದೆ, ಆದರೆ ನಗರಗಳಲ್ಲಿ ಹಿಂಸಾಚಾರ ಮತ್ತು ಬೆಂಕಿ ಹಚ್ಚುವ ಕೃತ್ಯಗಳನ್ನು ಎಸಗುವುದು ಪ್ರತಿಭಟನೆಯ ಹಕ್ಕು ಆಗಲಾರದು ಎಂದಿದ್ದಾರೆ.

ಈ ವಿಷಯದಲ್ಲಿ ಯಾವುದೇ ರೀತಿಯ ಹಿಂಸಾ ಸ್ವರೂಪದ ಪ್ರತಿಭಟನೆಗಳಿಗೆ ಬೆಂಬಲ ನೀಡದಂತೆ ನಾವು ಪಕ್ಷಗಳಿಗೆ ಮತ್ತೊಮ್ಮೆ ಮನವಿ ಮಾಡುತ್ತೇನೆ. ಇಂಥ ಹಿಂಸಾತ್ಮಕ ಘಟನೆಗಳನ್ನು ಖಂಡಿಸಬೇಕು, ಎಲ್ಲಾ ಪ್ರತಿಭಟನೆಗಳು ಶಾಂತಿಯುತವಾಗಿ ನಡೆಯುವಂತೆ ಸ್ಪಷ್ಟ ಕರೆ ನೀಡಬೇಕು. ಇಂತಹ ಸನ್ನಿವೇಶಗಳಲ್ಲಿ, ಎಲ್ಲರೂ ಒಗ್ಗಟ್ಟಾಗಿ ವಿರೋಧಿಸಬೇಕು. ಈ ವಿಷಯದಲ್ಲಿ ಪ್ರತಿಪಕ್ಷಗಳ ಮೌನ ವಹಿಸುವುದು ಅಥವಾ ಹಿಂಜರಿಯುವುದು ಹಿಂಸಾಚಾರಕ್ಕೆ ಬೆಂಬಲ ನೀಡಿದಂತಾಗುತ್ತದೆ. ಇಂತಹ ಸಂದರ್ಭಗಳಲ್ಲಿ ಮೌನವು ಸ್ವೀಕಾರಾರ್ಹವಲ್ಲ ಎಂದು ಪ್ರತಿಪಕ್ಷಗಳಿಗೂ ಎಚ್ಚರಿಕೆ ನೀಡಿದ್ದಾರೆ.