ಅಮೆರಿಕ ಅಧ್ಯಕ್ಷ ಜೋ ಬೈಡನ್ ಕ್ವಾಡ್ ಶೃಂಗಸಭೆಯ ವೇದಿಕೆಯಲ್ಲಿ ಮುಂದಿನ ಭಾಷಣಕಾರರನ್ನು ಪರಿಚಯಿಸುವಾಗ ಗೊಂದಲಕ್ಕೊಳಗಾದ ಘಟನೆ ನಡೆದಿದ್ದು, ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.
ನ್ಯೂಯಾರ್ಕ್: ಅಮೆರಿಕ ಅಧ್ಯಕ್ಷ ಜೋ ಬೈಡನ್ ವೇದಿಕೆಗಳಲ್ಲಿ ತಾವು ಎಲ್ಲಿದ್ದೇವೆ ಮತ್ತು ಏನು ಮಾಡುತ್ತಿದ್ದೇವೆ ಎಂಬುದನ್ನು ಒಂದು ಕ್ಷಣ ಮರೆತು ಪೇಚಿಗೆ ಸಿಲುಕುತ್ತಾರೆ. ಇದೀಗ ಇಂತಹವುದೇ ಘಟನೆ ಪ್ರಧಾನಿ ನರೇಂದ್ರ ಮೋದಿ ಅವರಿದ್ದ ವೇದಿಕೆ ಮೇಲೆ ನಡೆದಿದೆ. ಈ ಸಮಯದಲ್ಲಿ ಕೂಡಲೇ ಎಚ್ಚೆತ್ತ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಪರಿಸ್ಥಿತಿಯನ್ನು ನಿಭಾಯಿಸಿದ್ದಾರೆ. ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಭಾರತ, ಅಮೆರಿಕ, ಜಪಾನ್ ಮತ್ತು ಆಸ್ಟ್ರೇಲಿಯಾ ದೇಶಗಳ ಕ್ವಾಡ ಶೃಂಗ ಸಭೆ ಅಮೆರಿಕದಲ್ಲಿ ನಡೆಯುತ್ತಿದೆ.
ಕ್ವಾಡ ಶೃಂಗ ಸಭೆಯಲ್ಲಿ ಮಾತನಾಡುತ್ತಿರುವ ಸಂದರ್ಭದಲ್ಲಿ 81 ವರ್ಷದ ಜೋ ಬೈಡನ್ ತಮ್ಮ ಮಾತು ಮುಗಿಸುವ ಸಂದರ್ಭದಲ್ಲಿ ತಮ್ಮ ಸಿಬ್ಬಂದಿ ಮೇಲೆ ಸಿಡಿಮಿಡಿಗೊಂಡರು. ವಿಶ್ವದಾದ್ಯಂತ ಕ್ಯಾನ್ಸರ್ ಕೊನೆಗೊಳಿಸಲು ಕ್ವಾಡ್ ಕ್ಯಾನ್ಸರ್ ಮೂನ್‌ಶಾಟ್ ಅನಾವರಣಗೊಳಿಸಲು ನಾನು ಹೆಮ್ಮೆ ಪಡುತ್ತೇನೆ. ನಾನು ಎಲ್ಲರಿಗೂ ಧನ್ಯವಾದ ಸಲ್ಲಿಸುತ್ತೇನೆ. ಮುಂದೆ ನಾನು ಯಾರನ್ನೂ ಪರಿಚಯಿಸಬೇಕು ಎಂದು ಜೋ ಬೈಡನ್ ಸಿಟ್ಟಾಗುತ್ತಾರೆ. ಕೂಡಲೇ ಕಮಲಾ ಹ್ಯಾರಿಸ್, ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸುತ್ತಾರೆ. ನಂತರ ಪ್ರಧಾನಿ ಮೋದಿ ಪೋಡಿಯಂ ಬಳಿ ಬರುತ್ತಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದೆ.
ಲೆಬನಾನ್ ಪೇಜರ್ ಸ್ಫೋಟ ಕ್ಲೀನ್‌ಚಿಟ್ ಸಿಕ್ಕರೂ ವಯನಾಡ್‌ನ ರಿನ್ಸನ್ ಜೋಸ್ ನಾಪತ್ತೆ
ನಾವು ಯಾರ ವಿರುದ್ಧವೂ ಅಲ್ಲ. ಕ್ವಾಡ್ ನಿಯಮಗಳನ್ನು ಆಧರಿಸಿದ ಅಂತರಾಷ್ಟ್ರೀಯ ಆದೇಶ, ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಗೆ ಗೌರವ, ಮತ್ತು ಎಲ್ಲಾ ಸಮಸ್ಯೆಗಳ ಶಾಂತಿಯುತ ಪರಿಹಾರವನ್ನು ಬೆಂಬಲಿಸುವ ಮೈತ್ರಿಯಾಗಿದೆ. ಜಗತ್ತು ಉದ್ವಿಗ್ನತೆ ಮತ್ತು ಘರ್ಷಣೆಗಳಿಂದ ಸುತ್ತುವರಿದಿರುವ ಸಮಯದಲ್ಲಿ ನಮ್ಮ ಸಭೆ ನಡೆಯುತ್ತಿದೆ. ಅಂತಹ ಪರಿಸ್ಥಿತಿಯಲ್ಲಿ, ಕ್ವಾಡ್ ಹಂಚಿಕೆಯ ಪ್ರಜಾಪ್ರಭುತ್ವ ಮೌಲ್ಯಗಳ ಆಧಾರದ ಮೇಲೆ ಇಡೀ ಮಾನವೀಯತೆ ಒಟ್ಟಾಗಿ ಚಲಿಸುವುದು ಬಹಳ ಮುಖ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಕ್ವಾಡ ಸಭೆಯಲ್ಲಿ ಹೇಳಿದ್ದಾರೆ. ಇದೇ ವೇಲೆ 2025 ರಲ್ಲಿ ಭಾರತದಲ್ಲಿ ಕ್ವಾಡ್ ಲೀಡರ್ಸ್ ಶೃಂಗಸಭೆಯನ್ನು ಆಯೋಜಿಸಲು ನಾವು ಸಂತೋಷಪಡುತ್ತೇವೆ ಎಂದು ಪ್ರಧಾನಿ ಮೋದಿ ತಿಳಿಸಿದರು.
ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ, ಬೆಳ್ಳಿಯಿಂದ ಮಾಡಲ್ಪಟ್ಟ ಭಾರತೀಯ ರೈಲಿನ ಇಂಜಿನ್ ಕಾಣಿಕೆಯಾಗಿ ನೀಡಿದ್ದಾರೆ.
ಅಮೆರಿಕಾದಲ್ಲಿ ಪ್ರಧಾನಿ ಮೋದಿಗೆ ಅದ್ಧೂರಿ ಸ್ವಾಗತ; ಸೋಮವಾರ ವಿಶ್ವಸಂಸ್ಥೆಯಲ್ಲಿ ಭಾಷಣ
