ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಕಾನೂನು ಹೋರಾಟದಲ್ಲಿ ಹಲವು ತೊಡಕು ಎದುರಾಗುತ್ತಿದೆ. ಹಲವು ಪ್ರಕರಣಗಳಲ್ಲಿ ವಾರೆಂಟ್ ಪಡೆದಿರುವ ಇಮ್ರಾನ್ ಖಾನ್ ಇದೀಗ ನ್ಯಾಯಮೂರ್ತಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಜಾಮೀನು ರಹಿತ ಅರೆಸ್ಟ್ ವಾರೆಂಟ್ ಪಡೆದಿದ್ದಾರೆ. ಹೀಗಾಗಿ ಇಮ್ರಾನ್ ಖಾನ್ ಬಂಧನ ಸಾಧ್ಯತೆ ಹೆಚ್ಚಾಗಿದೆ. 

ಲಾಹೋರ್(ಮಾ.13): ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಂಕಷ್ಟ ಹೆಚ್ಚಾಗಿದೆ. ಇದೀಗ ಜಿಲ್ಲಾ ಕೋರ್ಟ್ ಜಡ್ಜ್‌ಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಇಮ್ರಾನ್ ಖಾನ್, ಜಾಮೀನು ರಹಿತ ಬಂಧನ ವಾರೆಂಟ್ ಪಡೆದಿದ್ದಾರೆ. ಕಾನೂನು ಹೋರಾಟಕ್ಕಾಗಿ ಜಿಲ್ಲಾ ಸೆಶನ್ ಕೋರ್ಟ್‌ಗೆ ಹಾಜರಾಗಿದ್ದ ಇಮ್ರಾನ್ ಖಾನ್, ಮಹಿಳಾ ಜಡ್ಜ್ ವಿರುದ್ಧ ಅಕ್ಷೇಪಿತ ಪದ ಬಳಕೆ ಮಾಡಿದ್ದಾರೆ. ಹೀಗಾಗಿ ಜಿಲ್ಲಾ ಸೆಶನ್ ಕೋರ್ಟ್, ಇದೀಗ ಜಾಮೀನು ರಹಿತ ಅರೆಸ್ಟ್ ವಾರೆಂಟ್ ಹೊರಡಿಸಿದೆ. ಇದರ ಬೆನ್ನಲ್ಲೇ ಲಾಹೋರ್ ಪೊಲೀಸರು ಇಮ್ರಾನ್ ಖಾನ್ ವಿರುದ್ದ ಹೊಸ ಪ್ರಕರಣ ದಾಖಲಿಸಿದ್ದಾರೆ. ಪಾಕಿಸ್ತಾನ ತೆಹ್ರೀಕ್ ಇ ಇನ್ಸಾಫ್ ಪಕ್ಷದ ಕಾರ್ಯಕರ್ತನ ಸಾವು ಪ್ರಕರಣ ಇದೀಗ ಪಕ್ಷದ ಮುಖ್ಯಸ್ಥ ಇಮ್ರಾನ್ ಖಾನ್ ವಿರುದ್ಧ ತಿರುಗಿದೆ. ಹೀಗಾಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜಿಲ್ಲಾ ಕೋರ್ಟ್ ಪ್ರಕರಣ ಇದೀಗ ಗಂಭೀರವಾಗಿದೆ. ಜಿಲ್ಲಾ ಸೆಶನ್ ಜಾಮೀನು ರಹಿತ ವಾರೆಂಟ್ ವಿರುದ್ಧ ಇಮ್ರಾನ್ ಖಾನ್ ಇದೀಗ ಹೈಕೋರ್ಟ್ ಮೊರೆ ಹೋಗುವ ಸಾಧ್ಯತೆ ದಟ್ಟವಾಗಿದೆ. ಇತ್ತ ಇಮ್ರಾನ್ ಖಾನ್ ಈಗಾಗಲೇ ಹಲವು ಪ್ರಕರಣಗಳ ತನಿಖೆ ಎದುರಿಸುತ್ತಿದ್ದಾರೆ. ಕಳೆದ ಕೆಲ ತಿಂಗಳಿನಿಂದ ಇಮ್ರಾನ್ ಖಾನ್ ಬಂಧನ ಭೀತಿಯಲ್ಲೇ ಓಡಾಡುತ್ತಿದ್ದಾರೆ.

ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಸೆಕ್ಸ್ ಆಡಿಯೋ ಕಾಲ್ ಲೀಕ್, ಜಗತ್ತಿನ ಮುಂದೆ ಬೆತ್ತಲಾದ ಪಾಕಿಸ್ತಾನ!

ವಿದೇಶಿ ಉಡುಗೊರೆ ಅಕ್ರಮ ಮಾರಾಟ ಪ್ರಕರಣ ಇಮ್ರಾನ್ ಖಾನ್ ಕೊರಳಿಗೆ ಸುತ್ತಿಕೊಂಡಿದೆ. ಈ ಪ್ರಕರಣದಲ್ಲಿ ಇಮ್ರಾನ್ ಖಾನ್ ಅರೆಸ್ಟ್ ವಾರೆಂಟ್ ಪಡೆದಿದ್ದರು. ಇಷ್ಟೇ ಅಲ್ಲ ಈಗಾಗಲೇ ಹಲವು ಪ್ರಕರಣಗಳಲ್ಲಿ ಇಮ್ರಾನ್ ಖಾನ್ ಅರೆಸ್ಟ್ ವಾರೆಂಟ್ ಪಡೆದಿದ್ದಾರೆ. ವಿದೇಶಿ ಉಡುಗೊರೆಗಳನ್ನು ಅಕ್ರಮವಾಗಿ ಮಾರಾಟ ಮಾಡಿದ ಪ್ರಕರಣದಲ್ಲೂ ಬಂಧನ ವಾರೆಂಟ್ ಪಡೆದಿದ್ದರು. ತಮ್ಮ ವಿರುದ್ಧ ಹೊರಡಿಸಲಾದ ಬಂಧನ ವಾರಂಟ್‌ ರದ್ದುಪಡಿಸುವಂತೆ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಸಲ್ಲಿಸಿದ್ದ ಮೇಲ್ಮನವಿಯನ್ನು ಇಸ್ಲಾಮಾಬಾದ್‌ ಕೋರ್ಚ್‌ ವಜಾಗೊಳಿಸಿತ್ತು. ಕೊನೆಯ ಕ್ಷಣದಲ್ಲಿ ಇಮ್ರಾನ್ ಖಾನ್ ಬಂಧನ ಭೀತಿಯಿಂದ ಪಾರಾಗಿದ್ದರು. 

ಇಮ್ರಾನ್‌ ಮತ್ತು ಅವರ ಪಿಟಿಐ ಪಕ್ಷದ 400 ಕಾರ್ಯಕರ್ತರ ಮೇಲೆ ಪೊಲೀಸರು ಹತ್ಯೆ ಮತ್ತು ಭಯೋತ್ಪಾದನೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇತ್ತೀಚೆಗೆ ಪೊಲೀಸರರೊಂದಿಗೆ ನಡೆದ ಕಾದಾಟದ ವೇಳೆ ಪಿಟಿಐ ಪಕ್ಷದ ಓರ್ವ ಕಾರ್ಯಕರ್ತ ಸಾವನ್ನಪ್ಪಿದ್ದ. ಜೊತೆಗೆ ಆಸ್ತಿಪಾಸ್ತಿಗೆ ಭಾರೀ ಹಾನಿಯಾಗಿತ್ತು. ಈ ಪ್ರಕರಣದಲ್ಲಿ ಖಾನ್‌ ವಿರುದ್ಧ ಕೇಸು ದಾಖಲಿಸಲಾಗಿದೆ. ಇದು ಇಮ್ರಾನ್‌ ವಿರುದ್ಧ ಇತ್ತೀಚಿನ ದಿನಗಳಲ್ಲಿ ದಾಖಲಾದ 80ನೇ ಕೇಸು.

Imran Khan ನಟನೆಯಲ್ಲಿ ಶಾರುಖ್‌, ಸಲ್ಮಾನ್‌ ಅವರನ್ನೂ ಮೀರಿಸುತ್ತಾರೆ: ಪಾಕ್‌ ನಾಯಕ

ಸಂಸತ್ತಿನಿಂದ ಅನರ್ಹರಾದ ನಂತರ ಪಾಕ್‌ ಚುನಾವಣಾ ಆಯೋಗದ ಎದುರು ಪ್ರತಿಭಟನೆ ನಡೆಸಿದ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ಗೆ ಲಾಹೋರ್‌ ಹೈಕೋರ್ಚ್‌ ಸೋಮವಾರ ನಿರೀಕ್ಷಣಾ ಜಾಮೀನು ನೀಡಿದೆ. ಈ ಪ್ರಕರಣದಲ್ಲಿ ಇತ್ತೀಚೆಗೆ ಉಗ್ರ ನಿಗ್ರಹ ಕೋರ್ಟು, ಖಾನ್‌ ನಿರೀಕ್ಷಣಾ ಜಾಮೀನು ರದ್ದು ಮಾಡಿ ಕೋರ್ಟಿಗೆ ಬರುವಂತೆ ಸೂಚಿಸಿತ್ತು. ಇದನ್ನು ಪ್ರಶ್ನಿಸಿ ಇಮ್ರಾನ್‌, ಹೈಕೋರ್ಚ್‌ ಮೊರೆ ಹೋಗಿದ್ದರು.