ಬಿಜೆಪಿ ಸೋಲಿಸಲು ಕರ್ನಾಟಕ ತಂತ್ರವೇ ಮಾದರಿ: ರಾಹುಲ್ ಗಾಂಧಿ
ಇತ್ತೀಚೆಗೆ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಜಯಭೇರಿ ಬಾರಿಸಿ ಬಿಜೆಪಿಗೆ ಮಣ್ಣುಮುಕ್ಕಿಸಿದ್ದನ್ನು ಅಮೆರಿಕ ನೆಲದಲ್ಲಿ ಪ್ರಸ್ತಾಪಿಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಪ್ರತಿಪಕ್ಷಗಳ ನಡುವೆ ಸೂಕ್ತ ಮೈತ್ರಿ ಏರ್ಪಟ್ಟರೆ ಬಿಜೆಪಿಯನ್ನು ಸೋಲಿಸಬಹುದು.
ಸಾಂತಾ ಕ್ಲಾರಾ (ಅಮೆರಿಕ) (ಜೂ.01): ಇತ್ತೀಚೆಗೆ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಜಯಭೇರಿ ಬಾರಿಸಿ ಬಿಜೆಪಿಗೆ ಮಣ್ಣು ಮುಕ್ಕಿಸಿದ್ದನ್ನು ಅಮೆರಿಕ ನೆಲದಲ್ಲಿ ಪ್ರಸ್ತಾಪಿಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಪ್ರತಿಪಕ್ಷಗಳ ನಡುವೆ ಸೂಕ್ತ ಮೈತ್ರಿ ಏರ್ಪಟ್ಟರೆ ಬಿಜೆಪಿಯನ್ನು ಸೋಲಿಸಬಹುದು. ಕಾಂಗ್ರೆಸ್ ಪಕ್ಷ ಈ ನಿಟ್ಟಿನಲ್ಲೇ ಕೆಲಸ ಮಾಡುತ್ತಿದ್ದು, ಉತ್ತಮ ಫಲಿತಾಂಶ ಹೊರಬರುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ.
ಅಮೆರಿಕದ ಸಾಂತಾ ಕ್ಲಾರಾದ ಕ್ಯಾಲಿಫೋರ್ನಿಯಾ ವಿವಿ ಕ್ಯಾಂಪಸ್‌ನಲ್ಲಿ ನಡೆದ ಸಮಾರಂಭದಲ್ಲಿ ಸಭಿಕರೊಂದಿಗೆ ಸಂವಾದ ನಡೆಸಿದ ಗಾಂಧಿ, ‘ಬಿಜೆಪಿಯಲ್ಲಿನ ದೌರ್ಬಲ್ಯಗಳು ಸ್ಪಷ್ಟವಾಗಿ ಗೋಚರಿಸುತ್ತಿವೆ. ಒಬ್ಬ ರಾಜಕೀಯ ನಿಪುಣನಾಗಿ ನನಗೆ ಅವರ ದೌರ್ಬಲ್ಯ ಎದ್ದು ಕಾಣುತ್ತಿವೆ. ಪ್ರತಿಪಕ್ಷಗಳು ಸರಿಯಾಗಿ ಹೊಂದಾಣಿಕೆಯಾದರೆ ಬಿಜೆಪಿಯನ್ನು ಸೋಲಿಸಬಹುದು’ ಎಂದರು. ‘ಕರ್ನಾಟಕ ಚುನಾವಣೆಯನ್ನು ಗಮನಿಸಿದರೆ, ಕಾಂಗ್ರೆಸ್ ಪಕ್ಷವು ಬಿಜೆಪಿ ವಿರುದ್ಧ ಹೋರಾಡಿ ಬಿಜೆಪಿಯನ್ನು ಸೋಲಿಸಿತು ಎಂಬುದು ಮೇಲ್ನೋಟಕ್ಕೆ ಅರ್ಥವಾಗುತ್ತದೆ.
ರಾಜ್ಯದ ಅಭಿವೃದ್ಧಿಯೇ ನಮ್ಮ ಸರ್ಕಾರದ ಗುರಿ: ಸಚಿವ ಜಮೀರ್ ಅಹಮ್ಮದ್
ಆದರೆ ನಾವು ಗೆಲುವು ಸಾಧಿಸಲು ಬಳಸಿದ ತಂತ್ರಗಾರಿಕೆ ಯಾರಿಗೂ ಅರ್ಥ ಮಡಿಕೊಳ್ಳಲು ಆಗಿಲ್ಲ. ಕಾಂಗ್ರೆಸ್ ಪಕ್ಷವು ಚುನಾವಣೆಯನ್ನು ಎದುರಿಸಲು ಮತ್ತು ನಿರೂಪಣೆಯನ್ನು ರಚಿಸಲು ಸಂಪೂರ್ಣ ವಿಭಿನ್ನ ವಿಧಾನವನ್ನು ಬಳಸಿತು. ’ಭಾರತ್ ಜೋಡೋ ಯಾತ್ರೆ’ಯು ಕರ್ನಾಟಕದಲ್ಲಿ ಉತ್ತಮ ಫಲಿತಾಂಶ ಬರಲು ಕಾರಣವಾಗುವ ಉಪಾಯಗಳನ್ನು ನೀಡಿತು’ ಎಂದು ಹೇಳಿದರು. ‘ಕರ್ನಾಟಕ ಚುನಾವಣೆಯಲ್ಲಿ ಬಿಜೆಪಿ ಕಾಂಗ್ರೆಸ್ ಪಕ್ಷಕ್ಕಿಂತ 10 ಪಟ್ಟು ಹೆಚ್ಚು ಹಣವನ್ನು ಖರ್ಚು ಮಾಡಿದೆ’ ಎಂದು ಗಾಂಧಿ ಆರೋಪಿಸಿದರು.
ಒಗ್ಗಟ್ಟಿನ ಜತೆ ಪರಾರಯಯ ದೃಷ್ಟಿಬೇಕು: 2024ರ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರತಿಪಕ್ಷಗಳು ಒಗ್ಗಟ್ಟಾಗಬೇಕು. ಜತೆಗೆ ಆಡಳಿತಾರೂಢ ಬಿಜೆಪಿಯನ್ನು ಸೋಲಿಸಲು ದೇಶಕ್ಕೆ ಪರ್ಯಾಯ ದೃಷ್ಟಿಕೋನದ ಅಗತ್ಯವಿದೆ. ಪ್ರತಿಪಕ್ಷಗಳ ಏಕತೆಯ ವಿಷಯದಲ್ಲಿ, ನಾವು ಆ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದರು.
ಪ್ರಧಾನಿ ಅಭ್ಯರ್ಥಿ ಯಾರು?: ಇದೇ ವೇಳೆ, ಕಾಂಗ್ರೆಸ್ ಪಕ್ಷದ ಅಧ್ಯಕ್ಷರೇ ಪ್ರಧಾನಿ ಅಭ್ಯರ್ಥಿಯನ್ನು ನಿರ್ಧರಿಸುತ್ತಾರೆ ಎಂದು ರಾಹುಲ್ ಸ್ಪಷ್ಟಪಡಿಸಿದರು.
ಬಿಜೆಪಿ ಜನರನ್ನು ಹೆದರಿಸುತ್ತಿದೆ: ಬಿಜೆಪಿ ದೇಶದಲ್ಲಿ ಜನರನ್ನು ಹೆದರಿಸುತ್ತಿದ್ದು, ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಟೀಕಿಸಿದ್ದಾರೆ. ಕ್ಯಾಲಿಫೋರ್ನಿಯಾದ ಸಾಂತಾ ಕ್ಲಾರಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಜೆಪಿ ಮತ್ತು ಆರ್‌ಎಸ್‌ಎಸ್ ದೇಶದಲ್ಲಿರುವ ಎಲ್ಲಾ ರಾಜಕೀಯ ವ್ಯವಸ್ಥೆಗಳನ್ನು ನಿಯಂತ್ರಿಸುತ್ತಿವೆ.
ಯಾವುದೇ ಅನುಮಾನ ಬೇಡ, ಗ್ಯಾರಂಟಿ ಅನುಷ್ಠಾನ ಖಚಿತ: ಡಾ.ಜಿ.ಪರಮೇಶ್ವರ್
ಹೀಗಾಗಿಯೇ ವ್ಯವಸ್ಥೆಗಳು ನೇರವಾಗಿ ಜನರನ್ನು ಸಂಪರ್ಕಿಸಬೇಕು ಎಂಬ ಕಾರಣಕ್ಕೆ ನಾವು ಭಾರತ್ ಜೋಡೋ ಯಾತ್ರೆಯನ್ನು ಆರಂಭಿಸಿದೆವು. ಕೆಲವು ವಿಷಯಗಳನ್ನು ರಾಜಕೀಯವಾಗಿ ಕಾರ್ಯರೂಪಕ್ಕೆ ತರುವುದು ಕಷ್ಟ. ಹೀಗಾಗಿ ದಕ್ಷಿಣದ ತುದಿಯಿಂದ ಉತ್ತರ ಭಾರತದವರೆಗೂ ಪಾದಯಾತ್ರೆ ನಡೆಸಿದೆವು. ಪ್ರೀತಿ, ಗೌರವ ಮತ್ತು ಮಾನವೀಯತೆಯ ಸ್ಪೂರ್ತಿಯಲ್ಲಿ ನಾವು ಭಾರತ್ ಜೋಡೋ ಯಾತ್ರೆ ಕೈಗೊಂಡಿದ್ದೆವು. ಇತಿಹಾಸವನ್ನು ಓದಿದರೆ ಗುರು ನಾನಕರು, ಗುರು ಬಸವಣ್ಣ, ನಾರಾಯಣ ಗುರು ಅವರು ದೇಶವನ್ನು ಕಟ್ಟುವುದನ್ನೇ ಕಲಿಸಿದ್ದಾರೆ ಎಂಬುದು ತಿಳಿಯುತ್ತದೆ ಎಂದು ಅವರು ಹೇಳಿದರು.