ಕೇರಳದ ನರ್ಸ್‌ ನಿಮಿಷಾ ಪ್ರಿಯಾ ಪ್ರಕರಣದಲ್ಲಿನ ಪ್ರಮುಖ ಬೆಳವಣಿಗೆಯೊಂದರಲ್ಲಿ, ಆಕೆಯ ಗಲ್ಲು ಶಿಕ್ಷೆಯನ್ನು ಈಗ ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ ಎಂದು ಪ್ರಕರಣದಲ್ಲಿ ಮಧ್ಯಸ್ಥಿಕೆ ವಹಿಸಿರುವ ಭಾರತೀಯ ಗ್ರ್ಯಾಂಡ್ ಮುಫ್ತಿ. ಕಾಂತಪುರಂ ಎಪಿ ಅಬೂಬಕರ್ ಮುಸ್ಲಿಯಾರ್ ಅವರ ಕಚೇರಿಯ ಹೇಳಿಕೆ ತಿಳಿಸಿದೆ.

ಕೊಚ್ಚಿ: ಕೇರಳದ ನರ್ಸ್‌ ನಿಮಿಷಾ ಪ್ರಿಯಾ ಪ್ರಕರಣದಲ್ಲಿನ ಪ್ರಮುಖ ಬೆಳವಣಿಗೆಯೊಂದರಲ್ಲಿ, ಆಕೆಯ ಗಲ್ಲು ಶಿಕ್ಷೆಯನ್ನು ಈಗ ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ ಎಂದು ಪ್ರಕರಣದಲ್ಲಿ ಮಧ್ಯಸ್ಥಿಕೆ ವಹಿಸಿರುವ ಭಾರತೀಯ ಗ್ರ್ಯಾಂಡ್ ಮುಫ್ತಿ. ಕಾಂತಪುರಂ ಎಪಿ ಅಬೂಬಕರ್ ಮುಸ್ಲಿಯಾರ್ ಅವರ ಕಚೇರಿಯ ಹೇಳಿಕೆ ತಿಳಿಸಿದೆ. 

ಆದಾಗ್ಯೂ, ಯೆಮೆನ್ ಅಧಿಕಾರಿಗಳಿಂದ ಅಧಿಕೃತ ಲಿಖಿತ ಸಂವಹನ ಇನ್ನೂ ಬಂದಿಲ್ಲ ಎಂದು ಸ್ಪಷ್ಟಪಡಿಸಿದೆ.

ಯೆಮೆನ್‌ನ ಸನಾದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ, ಅಲ್ಲಿ ಭಾರತೀಯ ಗ್ರಾಂಡ್ ಮುಫ್ತಿಯ ಕೋರಿಕೆಯ ಮೇರೆಗೆ ಶೇಖ್ ಉಮರ್ ಹಫೀಲ್ ತಂಗಲ್ ನೇಮಕ ಮಾಡಿದ ಹಿರಿಯ ಯೆಮೆನ್ ವಿದ್ವಾಂಸರು ಉತ್ತರ ಯೆಮೆನ್‌ನ ಆಡಳಿತಗಾರರು ಮತ್ತು ಅಂತಾರಾಷ್ಟ್ರೀಯ ರಾಜತಾಂತ್ರಿಕರೊಂದಿಗೆ ಮಧ್ಯಸ್ಥಿಕೆ ವಹಿಸಿದರು.

 ಜುಲೈ 16 ರಂದು ಗಲ್ಲು ಜಾರಿಯನ್ನು ತಾತ್ಕಾಲಿಕವಾಗಿ ಅಮಾನತುಗೊಳಿಗಿತ್ತು. ಈಗ ಮರಣದಂಡನೆಯನ್ನು ಸಂಪೂರ್ಣವಾಗಿ ರದ್ದುಗೊಳಿಸುವುದರೊಂದಿಗೆ ಸಭೆ ಮುಕ್ತಾಯವಾಯಿತು. ಮುಂದಿನ ಪ್ರಕ್ರಿಯೆ ಬಗ್ಗೆ ಮತ್ತೆ ಸಭೆ ನಡೆಯಲಿವೆ ಎಂದು ಅದು ಹೇಳಿದೆ.

ವ್ಯಕ್ತಿಯೊಬ್ಬನ ಹತ್ಯೆ ಪ್ರಕರಣದಲ್ಲಿ ನಿಮಿಷಪ್ರಿಯಾಗೆ ಗಲ್ಲಾಗಿತ್ತು.