ಪ್ರಪಂಚದ ಏಳು ಅದ್ಭುತಗಳಲ್ಲಿ ಒಂದಾದ ಬ್ರೆಜಿಲ್‌ನ( Brazil) ರಿಯೋ ಡಿ ಜನೈರೊದ (Rio de Janeiro)ಮೇಲಿರುವ ವಿಶ್ವದ ಅತಿ ದೊಡ್ಡ ಏಸುಕ್ರಿಸ್ತನ ಪ್ರತಿಮೆಗೆ ಸಿಡಿಲು ಬಡಿದಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಮೂಡಿಸಿದೆ. 

ಬ್ರಿಸಿಲಿಯ: ಪ್ರಪಂಚದ ಏಳು ಅದ್ಭುತಗಳಲ್ಲಿ ಒಂದಾದ ಬ್ರೆಜಿಲ್‌ನ( Brazil) ರಿಯೋ ಡಿ ಜನೈರೊದ (Rio de Janeiro)ಮೇಲಿರುವ ವಿಶ್ವದ ಅತಿ ದೊಡ್ಡ ಏಸುಕ್ರಿಸ್ತನ ಪ್ರತಿಮೆಗೆ ಸಿಡಿಲು ಬಡಿದಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಮೂಡಿಸಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಶುಕ್ರವಾರ ಬ್ರೆಜಿಲ್‌ ಕರಾವಳಿಗೆ ಫ್ಲ್ಯಾಶ್‌ ಚಂಡಮಾರುತ (Cyclone Flash) ಅಪ್ಪಳಿಸಿದ ಸಮಯದಲ್ಲಿ ಈ ದೃಶ್ಯವನ್ನು ಸೆರೆಹಿಡಿಯಲಾಗಿದೆ. 100 ಅಡಿ ಎತ್ತರದ ಏಸುಕ್ರಿಸ್ತನ ಮೂರ್ತಿಯ ತಲೆಯಿಂದ ಆಕಾಶಕ್ಕೆ ಸಂಪರ್ಕ ಹೊಂದಿರುವಂತೆ ಸಿಡಿಲು ಬಡಿದ ದೃಶ್ಯ ಸೆರೆಯಾಗಿದ್ದು ಇದು ದೈವಿಕ ದೃಶ್ಯ ಎಂಬಂತೆ ಭಾಸವಾಗಿದೆ. ಆದರೆ ಇದರಿಂದ ಮೂರ್ತಿಗೆ ಯಾವುದೇ ಹಾನಿಯಾಗಿಲ್ಲ. ಈ ದೃಶ್ಯವನ್ನು ಫರ್ನಾಂಡೋ ಬ್ರಾಗಾ (Fernando Braga) ಎಂಬುವವರು ಸೆರೆಹಿಡಿದಿದ್ದು ತಮ್ಮ ಇನ್‌ಸ್ಟಾಗ್ರಾಂ (Instagram)ಖಾತೆಯಲ್ಲಿ ಹಂಚಿಕೊಂಡು ‘ಡಿವೈನ್‌ ಲೈಟಿಂಗ್‌ (ದೈವಿಕ ಬೆಳಕು) ಇಂದು ಶುಕ್ರವಾರ’ ಎಂದು ಬರೆದುಕೊಂಡಿದ್ದಾರೆ.

ಆದಿಯೋಗಿ ಪ್ರತಿಮೆ ಪ್ರಶ್ನಿಸಿದ್ದ ಅರ್ಜಿ ವಜಾ; ಅರ್ಜಿದಾರರು ಶುದ್ಧಹಸ್ತರಲ್ಲ ಎಂದ ಕೋರ್ಟ್