ಪಾಕಿಸ್ತಾನದಲ್ಲಿ ಭೀಕರ ರೈಲು ಅವಘಡ ಸಂಭವಿಸಿದ್ದು, 15 ಮಂದಿ ಸಾವನ್ನಪ್ಪಿ 50 ಕ್ಕೂ ಹೆಚ್ಚುಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.
ಇಸ್ಲಮಾಬಾದ್ (ಆ.6): ಪಾಕಿಸ್ತಾನದಲ್ಲಿ ಭೀಕರ ರೈಲು ಅವಘಡ ಸಂಭವಿಸಿದ್ದು, 15 ಮಂದಿ ಸಾವನ್ನಪ್ಪಿ 50 ಕ್ಕೂ ಹೆಚ್ಚುಮಂದಿ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ರಾವಲ್ಪಿಂಡಿಗೆ ಹೋಗುತ್ತಿದ್ದ ರಾವಲ್ಪಿಂಡಿ-ಹಜಾರಾ ಎಕ್ಸ್‌ಪ್ರೆಸ್ ನ 10 ಬೋಗಿಗಳು ಪಲ್ಟಿಯಾಗಿ ಈ ಭೀಕರ ದುರಂತ ಸಂಭವಿಸಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಭಾನುವಾರದಂದು ಶಹಜಾದ್‌ಪುರ ಮತ್ತು ನವಾಬ್‌ಶಾ ನಡುವಿನ ಸಹಾರಾ ರೈಲು ನಿಲ್ದಾಣದ ಬಳಿ ಅಪಘಾತ ಸಂಭವಿಸಿದೆ ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ.
ಕಾರಿಗೆ ಅಡ್ಡಬಂದ ನೀಲಗಾಯ್ ಜೀವ ಉಳಿಸಲು ಹೋಗಿ ಭೀಕರ ಅಪಘಾತ, ಒಂದೇ ಕುಟುಂಬದ 7 ಮಂದಿ ಸಾವು!
ಅಪಘಾತವಾದ ರೈಲು ಕರಾಚಿಯಿಂದ ಪಾಕಿಸ್ತಾನದ ಪಂಜಾಬ್‌ಗೆ ಹೊರಟಿತ್ತು. ಸಂತ್ರಸ್ತ ಪ್ರಯಾಣಿಕರನ್ನು ನವಾಬ್‌ಶಾಹ್‌ನಲ್ಲಿರುವ ಪೀಪಲ್ಸ್ ಮೆಡಿಕಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ರೈಲು ಹಳಿ ತಪ್ಪಲು ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.
Bengaluru: ಜೈಲಿಂದ ಬಿಡುಗಡೆಯಾಗಿ ಮನೆ ಸೇರುವ ಮುನ್ನವೇ ರೌಡಿ ಶೀಟರ್ ಬರ್ಬರ
ಹಜಾರಾ ಎಕ್ಸ್‌ಪ್ರೆಸ್ ಕರಾಚಿಯಿಂದ ಅಬೋಟಾಬಾದ್‌ಗೆ ಪ್ರಯಾಣಿಸುತ್ತಿತ್ತು ಎಂದು ರೈಲ್ವೆ ಅಧಿಕಾರಿ ಮೊಹ್ಸಿನ್ ಎಂಬುವವರು ಮಾಧ್ಯಮಕ್ಕೆ ತಿಳಿಸಿದ್ದಾರೆ. ಹಳಿತಪ್ಪಿದ ಬೋಗಿಗಳ ಬಳಿ ಹೆಚ್ಚಿನ ಸಂಖ್ಯೆಯ ಜನರು ಜಮಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ. ರೈಲು ಅಪಘಾತದಲ್ಲಿ 10 ಬೋಗಿಗಳು ಹಳಿ ತಪ್ಪಿವೆ ಎಂದು ರೈಲ್ವೆ ವಿಭಾಗೀಯ ಅಧೀಕ್ಷಕ ಸುಕ್ಕೂರ್ ಮಹಮೂದೂರ್ ರಹಮಾನ್ ಖಚಿತಪಡಿಸಿದ್ದಾರೆ. ಘಟನೆಗೆ ಸಂಬಂಧಿಸಿ ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೊಗಳು ಹರಿದಾಡುತ್ತಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಕಂಡುಬರುತ್ತಿದೆ.
