* ಕ್ವಾಡ್ ಶೃಂಗಸಭೆಯಲ್ಲಿ ಭಾಗವಹಿಸಲು ಅಮೆರಿಕಾಗೆ ಮೋದಿ* ಮೂರು ದಿನಗಳ ಭೇಟಿಯಲ್ಲಿ ಅಫ್ಘಾನಿಸ್ತಾನ ಸೇರಿದಂತೆ ಭಾರತ-ಅಮೆರಿಕ ಸಂಬಂಧಗಳ ಬಗ್ಗೆಯೂ ಚರ್ಚೆ* ಅಮೆರಿಕಾ ಭೇಟಿಗೂ ಮುನ್ನ ಟ್ವೀಟ್ ಮಾಡಿದ ಪಿಎಂ ಮೋದಿ

ನವದೆಹಲಿ(ಸೆ.22): ಕ್ವಾಡ್ ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ(Prime Minister Narendra Modi) ಇಂದು ಅಮೆರಿಕಕ್ಕೆ ತೆರಳಲಿದ್ದಾರೆ. ಮೋದಿ ತಮ್ಮ ಮೂರು ದಿನಗಳ ಭೇಟಿಯಲ್ಲಿ ಅಫ್ಘಾನಿಸ್ತಾನ ಸೇರಿದಂತೆ ಭಾರತ-ಅಮೆರಿಕ ಸಂಬಂಧಗಳ ಬಗ್ಗೆಯೂ ಚರ್ಚಿಸಲಿದ್ದಾರೆ. ತಾಲಿಬಾನ್ ಸರ್ಕಾರ ರಚನೆಯಾದ ನಂತರ ಅಫ್ಘಾನಿಸ್ತಾನದಲ್ಲಿ ಭಯೋತ್ಪಾದನೆ ಪ್ರಮುಖ ಸಮಸ್ಯೆಯಾಗಿ ಮಾರ್ಪಟ್ಟಿರುವ ಸಂದರ್ಭದಲ್ಲೇ ಈ ಭೇಟಿ ನಡೆಯುತ್ತಿರುವುದು ಪ್ರಮುಖ ಪಾತ್ರ ವಹಿಸಿದೆ. ಚೀನಾ ಮತ್ತು ಪಾಕಿಸ್ತಾನ ಎರಡೂ ಬಹಿರಂಗವಾಗಿ ತಾಲಿಬಾನ್ ಸರ್ಕಾರವನ್ನು ಬೆಂಬಲಿಸುತ್ತಿವೆ. ಮೋದಿಯ ಈ ಭೇಟಿಯ ಮೇಲೆ ಚೀನಾ ಮತ್ತು ಪಾಕಿಸ್ತಾನದ ಕಣ್ಣುಗಳು ನೆಟ್ಟಿವೆ. ಈ ಹಿಂದೆ ಮೋದಿ 2019 ರಲ್ಲಿ ಅಮೆರಿಕಕ್ಕೆ ಹೋಗಿದ್ದರು.

Scroll to load tweet…

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಪ್ರವಾಸಕ್ಕೂ ಮುನ್ನ ಟ್ವೀಟ್ ಮಾಡಿದ್ದು, ಜೋ ಬೈಡೆನ್(Joe Biden) ಜೊತೆಗಿನ ನನ್ನ ಮಾತುಕತೆ ಮುಂದುವರಿಸಲು ಮತ್ತು ಪರಸ್ಪರ ಆಸಕ್ತಿಯ ಕ್ಷೇತ್ರಗಳ ಬಗ್ಗೆ ಅಭಿಪ್ರಾಯ ವಿನಿಮಯ ಮಾಡಿಕೊಳ್ಳಲು ನಾನು ಯುಎಸ್ಎಗೆ ಭೇಟಿ ನೀಡುತ್ತಿದ್ದೇನೆ. ಜಾಗತಿಕ ಸಮಸ್ಯೆಗಳನ್ನು ಚರ್ಚಿಸಲು ಮತ್ತು ಸಹಯೋಗಕ್ಕಾಗಿ ಅವರ ಆಲೋಚನೆಗಳನ್ನು ತಿಳಿದುಕೊಳ್ಳುವ ನಿಟ್ಟಿನಲ್ಲಿ ನಾನು ವಿಸಿ ಕಮಲಾ ಹ್ಯಾರಿಸ್(Kamala Harris) ಅವರನ್ನು ಭೇಟಿ ಮಾಡಲು ಎದುರು ನೋಡುತ್ತಿದ್ದೇನೆ ಎಂದಿದ್ದಾರೆ.

ಫ್ರಾನ್ಸ್ ಅಧ್ಯಕ್ಷರೊಂದಿಗೆ ಮೋದಿ ದೂರವಾಣಿ ಮಾತುಕತೆ, ಭಯೋತ್ಪಾದನೆ ಹತ್ತಿಕ್ಕಲು ಚರ್ಚೆ!

Scroll to load tweet…

ಕೋವಿಡ್ ಶೃಂಗಸಭೆಯಲ್ಲಿಯೂ ಭಾಗಿ

ವಿದೇಶಾಂಗ ಕಾರ್ಯದರ್ಶಿ(foreign Secretary) ಹರ್ಷವರ್ಧನ್ ಶೃಂಗ್ಲಾ ಅವರು ಹೇಳಿಕೆ ಬಿಡುಗಡೆ ಮಾಡಿ,ವಿದೇಶಾಂಗ ವ್ಯವಹಾರಗಳ ಸಚಿವರು, ರಾಷ್ಟ್ರೀಯ ಭದ್ರತಾ ಸಲಹೆಗಾರ (NSA) ಅಜಿತ್ ದೋವಲ್ ಸೇರಿದಂತೆ ಉನ್ನತ ಮಟ್ಟದ ನಿಯೋಗವು ಪ್ರಧಾನಮಂತ್ರಿಯೊಂದಿಗೆ ಇರುತ್ತಾರೆ ಎಂದು ಹೇಳಿದ್ದಾರೆ. ಅಮೆರಿಕ ಅಧ್ಯಕ್ಷರು ಆಯೋಜಿಸಿರುವ ಕೋವಿಡ್ -19 ಜಾಗತಿಕ ಶೃಂಗಸಭೆಯಲ್ಲಿ ಮೋದಿ ಭಾಗವಹಿಸಲಿದ್ದಾರೆ. ಸೆಪ್ಟೆಂಬರ್ 24 ರಂದು ನಡೆಯಲಿರುವ ದ್ವಿಪಕ್ಷೀಯ ಸಭೆಯಲ್ಲಿ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಬಿಡೆನ್ ಭಾರತ-ಅಮೆರಿಕ ಸಂಬಂಧವನ್ನು ಪರಿಶೀಲಿಸಲಿದ್ದಾರೆ. ಉಭಯ ನಾಯಕರು ವ್ಯಾಪಾರ ಮತ್ತು ಹೂಡಿಕೆ ಸಂಬಂಧಗಳನ್ನು ಬಲಪಡಿಸುವ ಮಾರ್ಗಗಳು, ರಕ್ಷಣಾ ಮತ್ತು ಭದ್ರತಾ ಸಹಕಾರ ಮತ್ತು ಶುದ್ಧ ಇಂಧನ ಪಾಲುದಾರಿಕೆಯನ್ನು ಉತ್ತೇಜಿಸುವ ಬಗ್ಗೆ ಚರ್ಚಿಸುವ ನಿರೀಕ್ಷೆಯಿದೆ.