Asianet Suvarna News Asianet Suvarna News

26/11 ಮುಂಬೈ ದಾಳಿ ಸಂಚುಕೋರ ಉಗ್ರ ಸಾಜಿದ್ ಮೀರ್‌ಗೆ ಜೈಲಲ್ಲೇ ವಿಷ: ಸ್ಥಿತಿ ಗಂಭೀರ?

 26/11 ಮುಂಬೈ ದಾಳಿಯ ಪ್ರಮುಖ ಸಂಚುಕೋರರಲ್ಲಿ ಒಬ್ಬನಾದ ಪಾಕಿಸ್ತಾನಿ ಉಗ್ರ ಸಾಜಿದ್ ಮೀರ್‌ಗೆ ಪಾಕಿಸ್ತಾನದ ಡೇರಾ ಘಾಜಿ ಖಾನ್‌ ನಗರದ ಜೈಲಲ್ಲೇ ವಿಷವುಣಿಸಲಾಗಿದೆ (poisoned).

Mumbai attack mastermind Sajid Mir poisoned in jail and in Critical condition akb
Author
First Published Dec 5, 2023, 7:12 AM IST

ಲಾಹೋರ್‌: 26/11 ಮುಂಬೈ ದಾಳಿಯ ಪ್ರಮುಖ ಸಂಚುಕೋರರಲ್ಲಿ ಒಬ್ಬನಾದ ಪಾಕಿಸ್ತಾನಿ ಉಗ್ರ ಸಾಜಿದ್ ಮೀರ್‌ಗೆ ಪಾಕಿಸ್ತಾನದ ಡೇರಾ ಘಾಜಿ ಖಾನ್‌ ನಗರದ ಜೈಲಲ್ಲೇ ವಿಷವುಣಿಸಲಾಗಿದೆ (poisoned). ಹೀಗಾಗಿ ಆತನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ದೃಢೀಕರಿಸದ ವರದಿಗಳು ಹೇಳಿವೆ.

ಕೆಲವು ತಿಂಗಳ ಹಿಂದೆ ಮೀರ್‌ನನ್ನು ಲಾಹೋರ್ (Lahore jail)ಸೆಂಟ್ರಲ್ ಜೈಲಿನಿಂದ ಡೇರಾ ಘಾಜಿ ಖಾನ್‌ನ ಸೆಂಟ್ರಲ್ (Dera Ghaji khan jail) ಸ್ಥಳಾಂತರಿಸಲಾಗಿತ್ತು. ಅಲ್ಲಿಯೇ ಆತನಿಗೆ ವಿಷವುಣಿಸಲಾಗಿದೆ ಎನ್ನಲಾಗಿದೆ.  ಪಾಕಿಸ್ತಾನಿ ಅಧಿಕಾರಿಗಳು ಈ ಹಿಂದೆ ಮೀರ್ ಸತ್ತಿದ್ದಾನೆ ಎಂದು ಹೇಳಿದ್ದರು. ಆದರೆ ಪಾಶ್ಚಿಮಾತ್ಯ ದೇಶಗಳು ಈ ಹೇಳಿಕೆ ಪ್ರಶ್ನಿಸಿ, ಆತನ ಸಾವಿಗೆ ಸಾಕ್ಷ್ಯ ನೀಡುವಂತೆ ಆಗ್ರಹಿಸಿದ್ದವು.

ಮುಂದುವರಿದ ಭಾರತ ವಿರೋಧಿಗಳ ಸಂಹಾರ: ಮತ್ತೊಬ್ಬ ಪಾಕಿಸ್ತಾನಿ ಉಗ್ರನ ನಿಗೂಢ ಹತ್ಯೆ

ಸಾಜಿದ್ ಮೀರ್ ಯಾರು?:

ಸುಮಾರು 40ರ ಹರೆಯದ ಸಾಜಿದ್ ಮೀರ್ ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಬಾ (Lashkar-e-Taiba) ಉಗ್ರ ಸಂಘಟನೆಯ ಹಿರಿಯ ಸದಸ್ಯನಾಗಿದ್ದು, 2008ರ 26/11ಮುಂಬೈ ದಾಳಿಗೆ ಕುಮ್ಮಕ್ಕು ನೀಡಿದ್ದಕ್ಕಾಗಿ ಭಾರತಕ್ಕೆ ಬೇಕಾಗಿದ್ದಾನೆ. ಈ ಹಿಂದೆ ಅಮೆರಿಕ ಕೂಡ ಆತನ ತಲೆಗೆ 5.5 ದಶಲಕ್ಷ ಡಾಲರ್‌ ಬಹುಮಾನ ಘೋಷಿಸಿತ್ತು.

2022ರ ಜೂನ್‌ನಲ್ಲಿ, ಪಾಕಿಸ್ತಾನದ ಉಗ್ರ ನಿಗ್ರಹ ನ್ಯಾಯಾಲಯವು ಭಯೋತ್ಪಾದನೆಗೆ ಸಂಬಂಧಿಸಿದ ಹಣಕಾಸಿನ ಪ್ರಕರಣದಲ್ಲಿ ಮೀರ್‌ಗೆ 15 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಅಂದಿನಿಂದ ಆತ ಜೈಲಿನಲ್ಲಿದ್ದಾನೆ. ಈ ವರ್ಷದ ಜೂನ್‌ನಲ್ಲಿ, ವಿಶ್ವಸಂಸ್ಥೆಯು ಮೀರ್‌ನನ್ನು ‘ಜಾಗತಿಕ ಭಯೋತ್ಪಾದಕ’ ಎಂದು ಘೋಷಿಸಲು ಮುಂದಾದಾಗ ಅದಕ್ಕೆ ಚೀನಾ ತಡೆ ಒಡ್ಡಿತ್ತು.

ಪಾಕ್‌ನಲ್ಲಿ ಲಷ್ಕರ್ ಉಗ್ರ ನೇಮಕಗಾರನ ನಿಗೂಢ ಹತ್ಯೆ: 1.5 ವರ್ಷದಲ್ಲಿ 19ನೇ ಉಗ್ರಗಾಮಿ ಸಾವು

Follow Us:
Download App:
  • android
  • ios