ಮುಂಬೈ ಉಗ್ರರ ದಾಳಿಯ ಆರೋಪಿ ರಾಣಾ ಶೀಘ್ರದಲ್ಲಿಯೇ ಭಾರತಕ್ಕೆ
ಮುಂಬೈ ದಾಳಿಯಲ್ಲಿ ತಹವ್ವುರ್ ರಾಣಾನನ್ನು ಯಾಕೆ ವಿಚಾರಣೆಗೆ ಒಳಪಡಿಸಬೇಕು ಎಂಬುದನ್ನು ಭಾರತ ಕಾರಣಹಗಳೊಂದಿಗೆ ಸಾಬೀತು ಮಾಡಿದೆ ಎಂದು ಅಲ್ಡೆನ್ ತಮ್ಮ ವಾದದಲ್ಲಿ ಉಲ್ಲೇಖಿಸಿದ್ದಾರೆ.
ನವದೆಹಲಿ: 2008ರ ಮುಂಬೈ ಉಗ್ರ ದಾಳಿಯ ಆರೋಪಿ, ಪಾಕಿಸ್ತಾನ ಮೂಲದ ಕೆನಡಾ ಉದ್ಯಮಿ ತಹವ್ವುರ್ ರಾಣಾನನ್ನು ಭಾರತಕ್ಕೆ ಕರೆತರುವ ದಿನಗಳು ಸಮೀಪಿಸುತ್ತಿವೆ. ಭಾರತ-ಯುಎಸ್ ಹಸ್ತಾಂತರ ಒಪ್ಪಂದದ ನಿಬಂಧನೆಗಳ ಅಡಿಯಲ್ಲಿ ತಹವ್ವುರ್ ರಾಣಾ ಅವರನ್ನು ಭಾರತದ ವಶಕ್ಕೆ ನೀಡಬಹುದು ಎಂದು ಯುಎಸ್ ಸಹಾಯಕ ಅಟಾರ್ನಿ ಬ್ರಾಮ್ ಅಲ್ಡೆನ್ ನ್ಯಾಯಾಲಯಕ್ಕೆ ಮೇಲ್ಮನವಿಯನ್ನು ಸಲ್ಲಿಸಿದ್ದಾರೆ. ತಹವ್ವುರ್ ರಾಣಾ ವಿರುದ್ಧ 2008ರ ಮುಂಬೈ ಉಗ್ರರ ದಾಳಿಯಲ್ಲಿ ಭಾಗಿಯಾಗಿರುವ ಆರೋಪವಿದೆ. ಇತ್ತ ತಹವ್ವುರ್ ರಾಣಾ ಕಡೆಯಿಂದ ಕ್ಯಾಲಿಫೋರ್ನಿಯಾದ ಜಿಲ್ಲಾ ನ್ಯಾಯಾಲಯದಲ್ಲಿ ಹಸ್ತಾಂತರದ ವಿರುದ್ಧ ಮೇಲ್ಮನವಿ ಸಲ್ಲಿಕೆಯಾಗಿದೆ.
ತಹವ್ವುರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸುವ ದೇಶದ ಮನವಿಯನ್ನು ಅಮೆರಿಕಾ ಒಪ್ಪಿಕೊಂಡಿತ್ತು. ಆದರೆ ಭಾರತದ ಮನವಿ ವಿರುದ್ಧ ತಹವ್ವುರ್ ರಾಣಾ ಅಮೆರಿಕಾದ ಜಿಲ್ಲಾ ನ್ಯಾಯಾಲಯದಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದನು. ಈ ಅರ್ಜಿಯ ವಿಚಾರಣೆ ವೇಳೆ ವಾದ ಮಂಡಿಸಿದ ಅಮೆರಿಕಾ ಸರ್ಕಾರಿ ವಕೀಲ ಅಲ್ಡನ್, ಒಪ್ಪಂದದ ನಿಬಂಧನೆಗಳ ಅಡಿಯಲ್ಲಿ ರಾಣಾ ಅವರನ್ನು ಭಾರತಕ್ಕೆ ಹಸ್ತಾಂತರಿಸಬಹುದು ಎಂದು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ. ಮುಂಬೈ ದಾಳಿಯಲ್ಲಿ ತಹವ್ವುರ್ ರಾಣಾನನ್ನು ಯಾಕೆ ವಿಚಾರಣೆಗೆ ಒಳಪಡಿಸಬೇಕು ಎಂಬುದನ್ನು ಭಾರತ ಕಾರಣಹಗಳೊಂದಿಗೆ ಸಾಬೀತು ಮಾಡಿದೆ ಎಂದು ಅಲ್ಡೆನ್ ತಮ್ಮ ವಾದದಲ್ಲಿ ಉಲ್ಲೇಖಿಸಿದ್ದಾರೆ.
ದತ್ತಿಸಂಸ್ಥೆಗಳಿಗೆ ₹44000 ಕೋಟಿ ದಾನ: ದಾಖಲೆಯ ದೇಣಿಗೆ ನೀಡಿದ ವಾರನ್ ಬಫೆಟ್
ಹೆಡ್ಲಿ ಜೊತೆ ತಹವ್ವುರ್ ರಾಣಾ ನಿಕಟ ಸಂಪರ್ಕ
ಸದ್ಯ ತಹವ್ವುರ್ ರಾಣಾ ಲಾಸ್ ಏಂಜಲೀಸ್ ಜೈಲಿನಲ್ಲಿದ್ದು, ಮುಂಬೈನ ದಾಳಿ ಸಂಚಿನ ಪ್ರಮುಖರಲ್ಲಿ ಈತನು ಒಬ್ಬ ಎಂಬ ಆರೋಪ ಈತನ ಮೇಲಿದೆ. ಪಾಕಿಸ್ತಾನಿ-ಅಮೆರಿಕನ್ ಭಯೋತ್ಪಾದಕ ಡೇವಿಡ್ ಕೋಲ್ಮನ್ ಹೆಡ್ಲಿ ಜೊತೆಯಲ್ಲಿ ತಹವ್ವುರ್ ರಾಣಾ ನಿಕಟ ಸಂಪರ್ಕ ಹೊಂದಿದ್ದ ಎನ್ನಲಾಗಿದೆ. ಡೇವಿಡ್ ಕೋಲ್ಮನ್ ಹೆಡ್ಲಿ ಮತ್ತು ತಹವ್ವುರ್ ರಾಣಾ ಹಲವು ಬಾರಿ ಭೇಟಿಯಾಗಿದ್ದರು. ಭೇಟಿಯಾಗಿರುವ ಬಗ್ಗೆ ಹೆಡ್ಲಿ ಸಹ ತನ್ನ ಹೇಳಿಕೆಯಲ್ಲಿ ದಾಖಲಿಸಿದ್ದಾನೆ.
2008ರಲ್ಲಿ ಮುಂಬೈನ ವಿವಿಧ ಪ್ರದೇಶಗಳಲ್ಲಿ ನಡೆದ ದಾಳಿ ವೇಳೆ 166 ಮಂದಿ ಸಾವನ್ನಪ್ಪಿದ್ದು, 239 ಮಂದಿ ಗಾಯಗೊಂಡಿದ್ದರು. ಮೃತರಲ್ಲಿ ಆರು ಅಮೆರಿಕನ್ ಪ್ರಜೆಗಳು ಸೇರಿದ್ದರು. ಮುಂಬೈನ ತಾಜ್ ಹೋಟೆಲ್, ಆಸ್ಪತ್ರೆ, ಚಾಬಾದ್ ಹೌಸ್, ಛತ್ರಪತಿ ಶಿವಾಜಿ ರೈಲ್ವೆ ನಿಲ್ದಾಣದ ಮೇಲೆ ದಾಳಿ ನಡೆಸಲಾಗಿತ್ತು. 10 ಉಗ್ರರ ಪೈಕಿ ಅಜ್ಮಲ್ ಕಸಬ್ ಎಂಬಾತ ಜೀವಂತವಾಗಿ ಸೆರೆ ಸಿಕ್ಕಿದ್ದನು. ಆನಂತರ ಈತನನ್ನು ಗಲ್ಲಿಗೇರಿಸಲಾಗಿತ್ತು. ಅಜ್ಮಲ್ ಕಸಬ್ ತನ್ನನ್ನು ಪಾಕಿಸ್ತಾನಿ ಎಂದು ಹೇಳಿಕೊಂಡಿದ್ದನು.
ಭಾರತ ಮೂಲದ ಅಮೆರಿಕನ್ ಕೋಟ್ಯಾಧಿಪತಿ: ಇವರು ಗೂಗಲ್‌ನಲ್ಲಿ ಹೂಡಿಕೆ ಮಾಡಿದ್ದ ಮೊದಲ ಭಾರತೀಯ