ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮೇಲೆ ಗುಂಡಿನ ದಾಳಿ, ಆಸ್ಪತ್ರೆ ದಾಖಲು!
ಪಾಕಿಸ್ತಾನದಲ್ಲಿ ಮತ್ತೆ ಮಾಜಿ ಪ್ರಧಾನಿಗಳನ್ನು ಟಾರ್ಗೆಟ್ ಮಾಡಿ ಹತ್ಯೆ ಮಾಡುವ ಪ್ರಯತ್ನಗಳು ನಡೆಯುತ್ತಿದೆ. ಇದೀಗ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮೇಲೆ ಗುಂಡಿನ ದಾಳಿ ನಡೆದಿದೆ. ತಕ್ಷಣವೇ ಇಮ್ರಾನ್ ಖಾನ್‌ರನ್ನು ಆಸ್ಪತ್ರೆ ದಾಖಲಿಸಲಾಗಿದೆ.
ವಾಜಿರಾಬಾದ್(ನ.03): ಪಾಕಿಸ್ತಾನದಲ್ಲಿ ಪ್ರಧಾನಿ, ಸಚಿವರು, ಮಾಜಿ ಪ್ರಧಾನಿಗಳನ್ನು ಟಾರ್ಗೆಟ್ ಮಾಡುವುದು ಹೊಸದೇನಲ್ಲ. ಈಗಾಗಲೇ ಹಲವು ಪ್ರಮುಖರು ಈ ದಾಳಿಯಲ್ಲಿ ಹತರಾಗಿದ್ದಾರೆ. ಇದೀಗ ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮೇಲೆ ಗುಂಡಿನ ದಾಳಿ ನಡೆದಿದೆ. ಪಾಕಿಸ್ತಾನದ ವಾಜಿರಾಬಾದ್‌ನಲ್ಲಿ ಈ ಘಟನೆ ನಡೆದಿದೆ. ಗುಂಡಿನ ದಾಳಿ ಗುರಿ ತಪ್ಪಿದ ಕಾರಣ ಇಮ್ರಾನ್ ಖಾನ್ ಕಾಲಿಗೆ ತುಗುಲಿದೆ. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇಮ್ರಾನ್ ಖಾನ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಘಟನೆ ಸಂಬಂಧ ಒರ್ವನ ಅರೆಸ್ಟ್ ಮಾಡಲಾಗಿದೆ. ಘಟನೆ ಕುರಿತು ಮಾಹಿತಿ ನೀಡಿರುವ ಪಾಕ್ ಸಚಿವ ಮೊಹಮ್ಮದ್ ಬಶರತ್ ರಾಜಾ, ಈ ಘಟನೆ ಹಿಂದಿರುವ ಎಲ್ಲರನ್ನು ಬಂಧಿಸಿ ನ್ಯಾಯ ಒದಗಿಸಲಾಗುವುದು ಎಂದಿದ್ದಾರೆ.
ಇಮ್ರಾನ್ ಖಾನ್ ಗುರಿಯಾಗಿಸಿ ದಾಳಿ ನಡೆಸಲಾಗಿದೆಯಾ? ಈ ಘಟನೆ ಹಿಂದೆ ಉಗ್ರರ ಅಥವಾ ಪ್ರಭಾವಿಗಳ ಕೈವಾಡವಿದೆಯಾ ಅನ್ನೋ ಕುರಿತು ಪಾಕಿಸ್ತಾನ ಸರ್ಕಾರ ತನಿಖೆ ನಡೆಸಲಿದೆ ಎಂದು ಮೊಹಮ್ಮದ್ ಬಶರತ್ ರಾಜಾ ಹೇಳಿದ್ದಾರೆ.
Imran Khan: ನವಾಜ್ ರೀತಿ ಓಡಿಹೋಗಲ್ಲ, ಐಎಸ್‌ಐ ಜಾತಕ ಬಯಲು ಮಾಡ್ತೀನಿ ಎಂದ ಪಾಕ್ ಮಾಜಿ ಪ್ರಧಾನಿ!
ಪಾಕಿಸ್ತಾನ ಸರ್ಕಾರದ ವಿರುದ್ಧದ ಸತತ ವಾಗ್ದಾಳಿ ನಡೆಸುತ್ತಿದ್ದ ಇಮ್ರಾನ್ ಖಾನ್, ಭಾರಿ ದೊಟ್ಟ ಮಟ್ಟದಲ್ಲಿ ರ್ಯಾಲಿ ಆಯೋಜಿಸಿ ಯಶಸ್ವಿಯಾಗಿದ್ದರು. ಸತತ ರ್ಯಾಲಿ ಮೂಲಕ ಪಾಕಿಸ್ತಾನದಲ್ಲಿ ಮತ್ತೆ ಅಧಿಕಾರ ಹಿಡಿಯಲು ಸರ್ವ ಪ್ರಯತ್ನ ನಡೆಸುತ್ತಿದ್ದರು. ತಮ್ಮ ರ್ಯಾಲಿಯಲ್ಲಿ ಮಾಡಿದ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಭಾರತದ ವಿದೇಶಾಂಗ ನೀತಿಯನ್ನು ಹಾಡಿಹೊಗಳಿದ್ದರು.
ಶೂನ್ಯ ಭ್ರಷ್ಟಾಚಾರದ ವಿಷಯಲ್ಲಿ ಮೋದಿ ಅವರನ್ನು ನೋಡಿ ಕಲೀರಿ ಎಂದು ಪಾಕಿಸ್ತಾನ ಪ್ರಧಾನಿ ನವಾಜ್ ಶರೀಫ್‌ಗೆ ಚಾಟಿ ಬೀಸಿದ್ದಾರೆ. ಇಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಇಮ್ರಾನ್, ಯಾವ ದೇಶದ ಪ್ರಧಾನಿಗೆ ವಿದೇಶದಲ್ಲಿ ನಿವಾಸವಿದೆ ಎಂದು ನವಾಜ್ ನಡೆಸಿದ ಭ್ರಷ್ಟಾಚಾರವನ್ನು ಪ್ರಶ್ನಿಸಿದ್ದಾರೆ. ದೇಶದಲ್ಲಿ ಕಾನೂನು ಸುವ್ಯವಸ್ಥೆ ಇರದಿದ್ದರೆ ಅಲ್ಲಿ ಭ್ರಷ್ಟಾಚಾರ ನಡೆಯುತ್ತದೆ. ನವಾಜ್ ವಿದೇಶದಲ್ಲಿ ಎಷ್ಟುಹಣ ಸಂಗ್ರಹಿಸಿಟ್ಟಿದ್ದಾರೆ ಯಾರೂ ಊಹಿಸಲು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.
Imran Khan Disqualified: ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ 5 ವರ್ಷ ನಿಷೇಧ
ಇಮ್ರಾನ್ ಚುನಾವಣೆ ಸ್ಪರ್ಧೆಗೆ ನಿಷೇಧ ಇಲ್ಲ:
ಮಾಜಿ ಪ್ರಧಾನಿ ಇಮ್ರಾನ್ ಖಾನ್ ಚುನಾವಣೆಯಲ್ಲಿ ಸ್ಪರ್ಧಿಸಲು ಯಾವುದೇ ನಿರ್ಬಂಧವಿಲ್ಲ ಎಂದು ಸ್ಥಳೀಯ ನ್ಯಾಯಾಲಯವೊಂದು ಸೋಮವಾರ ಹೇಳಿದೆ. ಗಣ್ಯರು ನೀಡಿದ ಉಡುಗೊರೆ ದುರ್ಬಳಕೆ ಮಾಡಿಕೊಂಡ ಪ್ರಕರಣದಲ್ಲಿ ಇಮ್ರಾನ್ ಅವರನ್ನು ಮುಂದಿನ 5 ವರ್ಷ ಚುನಾವಣೆಗೆ ಸ್ಪರ್ಧಿಸದಂತೆ ಕಳೆದ ವಾರವಷ್ಟೇ ಚುನಾವಣಾ ಆಯೋಗ ಆದೇಶಿಸಿತ್ತು. ಇದನ್ನು ಇಮ್ರಾನ್ ಪ್ರಶ್ನಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ಇಮ್ರಾನ್ ಅವರನ್ನು ಚುನಾವಣೆಗೆ ಸ್ಪರ್ಧಿಸದಂತೆ ಆಯೋಗ ನಿರ್ಬಂಧ ಹೇರಿಲ್ಲ ಎಂದು ಹೇಳಿದೆ. ಹೀಗಾಗಿ ಅ.30ರಂದು ನಡೆಯುವ ಖೈಬರ್ ಪಖ್ತಾನ್‌ಕ್ವಾ ಪ್ರಾಂತ್ಯದ ಖುರ್ರಂ ಜಿಲ್ಲೆಯಲ್ಲಿ ನಡೆವ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಇಮ್ರಾನ್ ಅವಕಾಶ ಪಡೆದಂತೆ ಆಗಿದೆ.