ದಿನೇ ದಿನೇ ಹೆಚ್ಚುತ್ತಿರುವ ರೇಪ್‌ ಕೇಸ್‌, ಪಂಜಾಬ್‌ ಪ್ರಾಂತ್ಯದಲ್ಲಿ ತುರ್ತು ಪರಿಸ್ಥಿತಿ ಘೋಷಣೆಗೆ ನಿರ್ಧಾರ!

* ನೆರೆ ರಾಷ್ಟ್ರ ಪಾಕಿಸ್ತಾನದಲ್ಲಿ ಹೆಚ್ಚುತ್ತಿದೆ ಅತ್ಯಾಚಾರ ಪ್ರಕರಣಗಳು

* ಪಂಜಾಬ್‌ ಪ್ರಾಂತ್ಯದಲ್ಲಿ ದಿನಕ್ಕೆ ನಾಲ್ಕೈದು ರೇಪ್‌ ಪ್ರಕರಣಗಳು

* ಮನೆಯ;್ಲಿ ಮಕ್ಕಳಿಗೆ ಶಿಕ್ಷಣ ಕೊಡಿಸಲು ಸೂಚನೆ

Pakistan Punjab province decides to impose emergency due to rising rape cases pod

ಪಂಜಾಬ್(ಜೂ.22): ಮಹಿಳೆಯರು ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಮಾನವ ಹಕ್ಕುಗಳು ಮತ್ತು ಧಾರ್ಮಿಕ ಹಕ್ಕುಗಳ ಅಧಿಕಾರಿಗಳು "ತುರ್ತು ಪರಿಸ್ಥಿತಿ" ಘೋಷಿಸಲು ನಿರ್ಧರಿಸಿದ್ದಾರೆ. "ಅತ್ಯಾಚಾರ ಪ್ರಕರಣಗಳನ್ನು ಎದುರಿಸಲು ತುರ್ತು ಪರಿಸ್ಥಿತಿಯನ್ನು ಘೋಷಿಸಲು" ಆಡಳಿತವನ್ನು ಒತ್ತಾಯಿಸಲಾಗಿದೆ ಎಂದು ಪಂಜಾಬ್ ಗೃಹ ಸಚಿವ ಅಟಾ ತರಾರ್ ಭಾನುವಾರ ಹೇಳಿದ್ದಾರೆ. ಪ್ರಾಂತ್ಯದಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ತೀವ್ರವಾಗಿ ಹೆಚ್ಚುತ್ತಿರುವುದು ಸಮಾಜ ಮತ್ತು ಸರ್ಕಾರಿ ಅಧಿಕಾರಿಗಳಿಗೆ ಗಂಭೀರ ಸಮಸ್ಯೆಯಾಗಿದೆ ಎಂದು ಸಚಿವರು ಹೇಳಿದರು.

ಪಂಜಾಬ್‌ನಲ್ಲಿ ದಿನಕ್ಕೆ 4 ರಿಂದ 5 ಅತ್ಯಾಚಾರ ಪ್ರಕರಣಗಳು

ಪಾಕಿಸ್ತಾನ್ ಮುಸ್ಲಿಂ ಲೀಗ್ ನವಾಜ್ (ಪಿಎಂಎಲ್-ಎನ್) ಪ್ರಧಾನ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಪಂಜಾಬ್‌ನಲ್ಲಿ ಪ್ರತಿದಿನ ನಾಲ್ಕೈದು ಅತ್ಯಾಚಾರ ಪ್ರಕರಣಗಳು ವರದಿಯಾಗುತ್ತಿವೆ, ಈ ಕಾರಣದಿಂದಾಗಿ ಸರ್ಕಾರವು ಲೈಂಗಿಕ ಕಿರುಕುಳದ ಆರೋಪವನ್ನು ಎದುರಿಸುತ್ತಿದೆ. ಹೀಗಿರುವಾಗ ನಿಂದನೆ ಮತ್ತು ಅಂತಹ ಪ್ರಕರಣಗಳನ್ನು ಎದುರಿಸಲು ವಿಶೇಷ ಕ್ರಮ ತೆಗೆದುಕೊಳ್ಳಲು ನಿರ್ಧರಿಸಲಾಗಿದೆ ಎಂದಿರುವುದಾಗಿ ಡಾನ್ ಪತ್ರಿಕೆ ಉಲ್ಲೇಖಿಸಿದೆ.

ಕಾನೂನು ಸಚಿವ ಮಲಿಕ್ ಮುಹಮ್ಮದ್ ಅಹ್ಮದ್ ಖಾನ್ ಅವರ ಸಮ್ಮುಖದಲ್ಲಿ, ಅತ್ಯಾಚಾರ ಮತ್ತು ಕಾನೂನು ಮತ್ತು ಸುವ್ಯವಸ್ಥೆಯ ಕ್ಯಾಬಿನೆಟ್ ಸಮಿತಿಯು ಎಲ್ಲಾ ಪ್ರಕರಣಗಳನ್ನು ಪರಿಶೀಲಿಸುತ್ತದೆ ಮತ್ತು ನಾಗರಿಕ ಸಂಸ್ಥೆಗಳು, ಮಹಿಳಾ ಹಕ್ಕುಗಳ ಸಂಘಟನೆಗಳು, ಶಿಕ್ಷಕರು ಮತ್ತು ವಕೀಲರನ್ನು ಸಹ ಇಂತಹ ಘಟನೆಗಳ ಮೇಲೆ ನಿಗಾ ಇಡಲು ಸಮಾಲೋಚಿಸಲಾಗುವುದು ಎಂದು ತರಾರ್ ಹೇಳಿದರು.

ಪೋಷಕರು ತಮ್ಮ ಮಕ್ಕಳಿಗೆ ಸುರಕ್ಷತೆಯ ಮಹತ್ವದ ಬಗ್ಗೆ ತಿಳುವಳಿಕೆ ನೀಡಬೇಕು ಮತ್ತು ಮೇಲ್ವಿಚಾರಣೆಯಿಲ್ಲದೆ ಮಕ್ಕಳನ್ನು ತಮ್ಮ ಮನೆಗಳಲ್ಲಿ ಒಂಟಿಯಾಗಿ ಬಿಡಬಾರದು ಎಂದು ತಾರಾರ್ ಒತ್ತಾಯಿಸಿದರು. ಅನೇಕ ಪ್ರಕರಣಗಳಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ ಮತ್ತು ಲೈಂಗಿಕ ಕಿರುಕುಳದ ಬಗ್ಗೆ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಗುವುದು ಎಂದು ಸಚಿವರು ಹೇಳಿದರು. ಅತ್ಯಾಚಾರ ಪ್ರಕರಣಗಳನ್ನು ತಡೆಯಲು ಸರಕಾರ ನಾನಾ ಅಭಿಯಾನಗಳನ್ನು ಹಮ್ಮಿಕೊಂಡಿದೆ ಎಂದರು.

Latest Videos
Follow Us:
Download App:
  • android
  • ios