ಪ್ರಧಾನಿ ಮೋದಿಯವರಿಗೆ ಆರ್ಡರ್ ಆಫ್ ಮುಬಾರಕ್ ಅಲ್ ಕಬೀರ್ ಗೌರವ
ಕುವೈತ್‌ನಲ್ಲಿ ಪ್ರಧಾನಿ ಮೋದಿಯವರಿಗೆ 'ಆರ್ಡರ್ ಆಫ್ ಮುಬಾರಕ್ ಅಲ್ ಕಬೀರ್' ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಈ ಪ್ರಶಸ್ತಿಯನ್ನು ಅಮೆರಿಕದ ಅಧ್ಯಕ್ಷ ಬಿಲ್ ಕ್ಲಿಂಟನ್ ಮತ್ತು ಪ್ರಿನ್ಸ್ ಚಾರ್ಲ್ಸ್‌ರಂತಹ ಗಣ್ಯರಿಗೂ ನೀಡಲಾಗಿದೆ. ಇದು ಪ್ರಧಾನಿ ಮೋದಿಯವರ 20ನೇ ಅಂತರಾಷ್ಟ್ರೀಯ ಪ್ರಶಸ್ತಿಯಾಗಿದೆ.
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಎರಡು ದಿನದ ಕುವೈತ್ ಪ್ರವಾಸದಲ್ಲಿದ್ದಾರೆ. ಕುವೈತ್ ಸರ್ಕಾರ ಪ್ರಧಾನಿ ನರೇಂದ್ರ ಮೋದಿಯವರಿಗೆ ಆರ್ಡರ್ ಆಫ್ ಮುಬಾರಕ್ ಅಲ್ ಕಬೀರ್ ನೀಡುವ ಮೂಲಕ ಗೌರವಿಸಿದೆ. ಇಂದು ಕುವೈತ್ ಪ್ರಧಾನಿ ಮೋದಿಯವರಿಗೆ ತನ್ನ ಅತ್ಯುನ್ನತ ಗೌರವ 'ದಿ ಆರ್ಡರ್ ಆಫ್ ಮುಬಾರಕ್ ಅಲ್ ಕಬೀರ್' ಪ್ರದಾನ ಮಾಡಿದೆ. ಪ್ರಧಾನಿ ಮೋದಿಯವರಿಗೆ ಕುವೈತ್‌ನಲ್ಲಿ ಲಭಿಸಿದ ಈ ಗೌರವವನ್ನು ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್, ಪ್ರಿನ್ಸ್ ಚಾರ್ಲ್ಸ್, ಮಾಜಿ ಅಮೆರಿಕದ ಅಧ್ಯಕ್ಷ ಜಾರ್ಜ್ ಬುಷ್‌ರಂತಹ ಗಣ್ಯರಿಗೆ ಈ ಹಿಂದೆ ನೀಡಲಾಗಿತ್ತು. ಪ್ರಧಾನಮಂತ್ರಿಗಳಿಗೆ ಲಭಿಸಿದ 20ನೇ ಅಂತರರಾಷ್ಟ್ರೀಯ ಗೌರವ ಇದಾಗಿದೆ.
ಕುವೈತ್ ಪ್ರಧಾನಿ ನರೇಂದ್ರ ಮೋದಿಯವರಿಗೆ ನೀಡಿದ ಗೌರವವು ಎರಡು ರಾಷ್ಟ್ರಗಳ ನಡುವಿನ ಸ್ನೇಹದ ಸಂಕೇತವೆಂದು ಪರಿಣಿಸಿದೆ. 'ದಿ ಆರ್ಡರ್ ಆಫ್ ಮುಬಾರಕ್ ಅಲ್ ಕಬೀರ್' ಕುವೈತ್‌ನ ನೈಟ್‌ಹುಡ್ ಆರ್ಡರ್ ಆಗಿದೆ. ಈ ಆರ್ಡರ್ ಅನ್ನು ಸ್ನೇಹದ ಸಂಕೇತವಾಗಿ ರಾಷ್ಟ್ರಾಧ್ಯಕ್ಷರು ಮತ್ತು ವಿದೇಶಿ ಸಾರ್ವಭೌಮರು ಹಾಗೂ ವಿದೇಶಿ ರಾಜಮನೆತನದ ಸದಸ್ಯರಿಗೆ ನೀಡಲಾಗುತ್ತದೆ. ಇದಕ್ಕೂ ಮೊದಲು ಇದನ್ನು ಬಿಲ್ ಕ್ಲಿಂಟನ್, ಪ್ರಿನ್ಸ್ ಚಾರ್ಲ್ಸ್ ಮತ್ತು ಜಾರ್ಜ್ ಬುಷ್‌ರಂತಹ ವಿದೇಶಿ ನಾಯಕರಿಗೆ ನೀಡಲಾಗಿತ್ತು.
ಇದನ್ನೂ ಓದಿ: PM Modi in Kuwait: ಪ್ರಧಾನಿ ಮೋದಿ ಕುವೈತ್ ಭೇಟಿಯಿಂದ ಭಾರತಕ್ಕೇನು ಲಾಭ?