* ಉಕ್ರೇನ್‌ ರಷ್ಯಾ ಯುದ್ಧಕ್ಕೆ ಭಾರತೀಯ ವಿದ್ಯಾರ್ಥಿಗಳು ಕಂಗಾಲು* ತನ್ನ ದೇಶದ ಪ್ರಜೆಗಳ ರಕ್ಷಣೆಗೆ ಮುಂದಾದ ಭಾರತ* ಉಕ್ರೇನ್ ಅಧ್ಯಕ್ಷರ ಜೊತೆ ಮೋದಿ ಮಾತು

ಮಾಸ್ಕೋ(ಮಾ.07): ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧ 12 ನೇ ದಿನಕ್ಕೆ ತಲುಪಿದೆ. ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯ ನಾಗರಿಕರನ್ನು ರಕ್ಷಿಸಲು ಭಾರತ ಸರ್ಕಾರ ಆಪರೇಷನ್ ಗಂಗಾ ನಡೆಸುತ್ತಿದೆ. ಉಕ್ರೇನ್‌ನ ಯುದ್ಧ ಪೀಡಿತ ನಗರಗಳಲ್ಲಿ ಹೆಚ್ಚಿನ ಸಂಖ್ಯೆಯ ಭಾರತೀಯರು ಇನ್ನೂ ಸಿಕ್ಕಿಬಿದ್ದಿದ್ದಾರೆ. ಅವರನ್ನು ಸುರಕ್ಷಿತವಾಗಿ ಹೊರತರಲು ರಷ್ಯಾ ಮತ್ತು ಉಕ್ರೇನ್‌ನೊಂದಿಗೆ ಸರ್ಕಾರ ಮಾತುಕತೆ ನಡೆಸುತ್ತಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ಸೋಮವಾರ ಮಾತನಾಡಿದರು. ಉಭಯ ನಾಯಕರ ನಡುವಿನ ಮಾತುಕತೆ ಸುಮಾರು 35 ನಿಮಿಷಗಳ ಕಾಲ ನಡೆಯಿತು. ಉಕ್ರೇನ್‌ನಿಂದ ಭಾರತೀಯ ಪ್ರಜೆಗಳನ್ನು ಸ್ಥಳಾಂತರಿಸುವಲ್ಲಿ ಉಕ್ರೇನ್ ಸರ್ಕಾರ ನೀಡಿದ ನೆರವಿಗಾಗಿ ಪ್ರಧಾನಮಂತ್ರಿ ಮೋದಿ, ಉಕ್ರೇನ್ ಅಧ್ಯಕ್ಷ ಝೆಲೆನ್ಸ್‌ಕಿ ಅವರಿಗೆ ಧನ್ಯವಾದ ಅರ್ಪಿಸಿದರು. ಇದೇ ವೇಳೆ ಸುಮಿಯಿಂದ ಭಾರತೀಯ ಪ್ರಜೆಗಳನ್ನು ಸ್ಥಳಾಂತರಿಸಲು ನಡೆಯುತ್ತಿರುವ ಪ್ರಯತ್ನಗಳಲ್ಲಿ ಉಕ್ರೇನ್ ಸರ್ಕಾರದ ನಿರಂತರ ಸಹಕಾರವನ್ನು ಮೋದಿ ಕೋರಿದ್ದಾರೆ.

ಅಂದು ಪುಟಿನ್ ಹಿಂದೆ ಕೈಕಟ್ಟಿ ನಿಂತಿದ್ದ ಮೋದಿ, ಮತ್ತೆ ವೈರಲ್ ಆಯ್ತು ಫೋಟೋ

ಯುದ್ಧ ಪೀಡಿತ ಪ್ರದೇಶದಲ್ಲಿ ಸಿಲುಕಿರುವ ಭಾರತೀಯ ನಾಗರಿಕರನ್ನು ಸ್ಥಳಾಂತರಿಸುವ ಕುರಿತು ಮಾತುಕತೆ 

ಕೆಲ ಸಮಯದಲ್ಲಿ ಪ್ರಧಾನಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಮಾತನಾಡಲಿದ್ದಾರೆ. ಮೂಲಗಳ ಪ್ರಕಾರ, ಪುಟಿನ್ ಅವರೊಂದಿಗಿನ ಮಾತುಕತೆಯಲ್ಲಿ, ಉಕ್ರೇನ್‌ನ ಯುದ್ಧ ಪೀಡಿತ ಪ್ರದೇಶದಲ್ಲಿ ಸಿಲುಕಿರುವ ಭಾರತೀಯ ನಾಗರಿಕರನ್ನು ಸ್ಥಳಾಂತರಿಸುವ ಬಗ್ಗೆ ನರೇಂದ್ರ ಮೋದಿ ಚರ್ಚಿಸಬಹುದು. ಉಕ್ರೇನ್‌ನಲ್ಲಿ ಯುದ್ಧ ಪ್ರಾರಂಭವಾದಾಗಿನಿಂದ ಪ್ರಧಾನಿ ನರೇಂದ್ರ ಮೋದಿ ಅವರು ಪುಟಿನ್ ಅವರೊಂದಿಗೆ ಹಲವಾರು ಬಾರಿ ಮಾತನಾಡಿದ್ದಾರೆ. ಯುದ್ಧವನ್ನು ನಿಲ್ಲಿಸಲು ರಷ್ಯಾ ಮನವೊಲಿಸಲು ಉಕ್ರೇನ್ ಭಾರತವನ್ನು ಹಲವಾರು ಬಾರಿ ಒತ್ತಾಯಿಸಿದೆ ಎಂಬುವುದು ಉಲ್ಲೇಖನೀಯ. ಪ್ರಧಾನಿ ಮೋದಿ ಅವರು ರಷ್ಯಾ ಅಧ್ಯಕ್ಷರೊಂದಿಗೆ ಉತ್ತಮ ಸಂಬಂಧ ಹೊಂದಿದ್ದಾರೆ ಎಂದು ಉಕ್ರೇನ್ ರಾಯಭಾರಿ ಹೇಳಿದ್ದಾರೆ. 

"

ರಷ್ಯಾ ಮತ್ತು ಉಕ್ರೇನ್ ನಡುವೆ ಯುದ್ಧ ಪ್ರಾರಂಭವಾದ ನಂತರ, ಮಾರ್ಚ್ 2 ರಂದು, ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಎರಡನೇ ಬಾರಿ ಮಾತನಾಡಿರುವುದು ಗಮನಾರ್ಹವಾಗಿದೆ. ಈ ಸಂದರ್ಭದಲ್ಲಿ, ಉಕ್ರೇನ್‌ನಲ್ಲಿನ ಪರಿಸ್ಥಿತಿಯನ್ನು ಇಬ್ಬರೂ ನಾಯಕರು ಪರಿಶೀಲಿಸಿದರು. ಖಾರ್ಕಿವ್‌ನಲ್ಲಿ ಅನೇಕ ಭಾರತೀಯ ವಿದ್ಯಾರ್ಥಿಗಳು ಸಿಲುಕಿರುವ ಪರಿಸ್ಥಿತಿಯ ಬಗ್ಗೆ ಅವರು ನಿರ್ದಿಷ್ಟವಾಗಿ ಮಾತನಾಡಿದರು ಮತ್ತು ಸಂಘರ್ಷ ವಲಯಗಳಿಂದ ಭಾರತೀಯ ಪ್ರಜೆಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸುವ ಬಗ್ಗೆ ಚರ್ಚಿಸಿದರು.

Ukraine Crisis: ರಷ್ಯಾ ಸೋಲುತ್ತಿದೆ, ನಾವೀಗ ದುಸ್ವಪ್ನವಾಗಿದ್ದೇವೆ: ಜೆಲೆನ್‌ಸ್ಕಿ

ಈ ಸಂಭಾಷಣೆಯ ಪರಿಣಾಮವು ಕೆಲವು ಗಂಟೆಗಳ ನಂತರ ಬೆಳಕಿಗೆ ಬಂದಿತ್ತು. ಬುಧವಾರ ರಾತ್ರಿ, ಖಾರ್ಕಿವ್‌ನಲ್ಲಿ ಸಿಲುಕಿರುವ ಭಾರತೀಯರನ್ನು ರಕ್ಷಿಸಲು ರಷ್ಯಾ ಸುಮಾರು ಆರು ಗಂಟೆಗಳ ಕಾಲ ದಾಳಿಯನ್ನು ನಿಲ್ಲಿಸಿತು. ಉಕ್ರೇನ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯು ಭಾರತೀಯರಿಗೆ ತಕ್ಷಣವೇ ಖಾರ್ಕಿವ್ ತೊರೆಯುವಂತೆ ಸೂಚಿಸಿತ್ತು. ಇದಾದ ನಂತರ ರಷ್ಯಾ ಜೊತೆಗಿನ ರಾಜತಾಂತ್ರಿಕ ಮಾತುಕತೆಯ ಮೂಲಕ ದಾಳಿಯನ್ನು ನಿಲ್ಲಿಸಲು ಭಾರತಕ್ಕೆ ಸಹಾಯ ಸಿಕ್ಕಿತು.