ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ 4 ದಿನ ಅಮೆರಿಕ ಪ್ರವಾಸ ಕೈಗೊಂಡಿದ್ದಾರೆ. ಈಗಾಗಲೇ ಅಮೆರಿಕಾದಗೆ ತೆರಳಿರುವ ಮೋದಿ, ಈ ನಾಲ್ಕು ದಿನಗಳಲ್ಲಿ ಸಾಲು ಸಾಲು ಗಣ್ಯರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ.
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ 4 ದಿನ ಅಮೆರಿಕ ಪ್ರವಾಸ ಕೈಗೊಂಡಿದ್ದಾರೆ. ಈಗಾಗಲೇ ಅಮೆರಿಕಾದಗೆ ತೆರಳಿರುವ ಮೋದಿ, ಈ ನಾಲ್ಕು ದಿನಗಳಲ್ಲಿ ಸಾಲು ಸಾಲು ಗಣ್ಯರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. ಸ್ಪೇಸ್ ಎಕ್ಸ್ ಸಂಸ್ಥಾಪಕ ಎಲಾನ್ ಮಸ್ಕ್ ಸೇರಿದಂತೆ ಸಮಾಜದ ವಿವಿಧ ಸಮುದಾಯದ ವಿವಿಧ ಕ್ಷೇತ್ರಗಳ ಉದ್ಯಮಿಗಳು ತಂತ್ರಜ್ಞರು, ನೊಬೆಲ್ ಪ್ರಶಸ್ತಿ ವಿಜೇತರು, ಅರ್ಥಶಾಸ್ತ್ರಜ್ಞರು, ಕಲಾವಿದರು, ವಿಜ್ಞಾನಿಗಳು, ವಿದ್ವಾಂಸರು, ವಾಣಿಜ್ಯೋದ್ಯಮಿಗಳು, ಶಿಕ್ಷಣ ತಜ್ಞರು, ಆರೋಗ್ಯ ಕ್ಷೇತ್ರದ ತಜ್ಞರು ಮುಂತಾದ ಬಹುತೇಕ ಎಲ್ಲಾ ಕ್ಷೇತ್ರದ ಡಜನ್‌ಗೂ ಹೆಚ್ಚು ಗಣ್ಯರನ್ನು ಪ್ರಧಾನಿ ಭೇಟಿ ಮಾಡಲಿದ್ದಾರೆ.
ನೀಲ್ ಡಿಗ್ರಾಸ್ ಟೈಸನ್, ಪಾಲ್ ರೋಮರ್, ನಿಕೋಲಸ್ ನಾಸಿಮ್ ತಾಲೇಬ್, ರೇ ಡಾಲಿಯೊ, ಫಾಲು ಶಾ, ಜೆಫ್ ಸ್ಮಿತ್, ಮೈಕೆಲ್ ಫ್ರೋಮನ್, ಡೇನಿಯಲ್ ರಸ್ಸೆಲ್, ಎಲ್ಬ್ರಿಡ್ಜ್ ಕಾಲ್ಬಿ, ಡಾ ಪೀಟರ್ ಅಗ್ರೆ, ಡಾ ಸ್ಟೀಫನ್ ಕ್ಲಾಸ್ಕೊ, ಚಂದ್ರಿಕಾ ಟಂಡನ್ ಇವರುಗಳು ಪ್ರಧಾನಿ ಭೇಟಿ ಮಾಡುವ ಗಣ್ಯರ ಪಟ್ಟಿಯಲ್ಲಿದ್ದಾರೆ. ವಿವಿಧ ಕ್ಷೇತ್ರದ ಗಣ್ಯರೊಂದಿಗೆ ಮಾತುಕತೆ ನಡೆಸುವ ಮೂಲಕ ಮೋದಿ ಅಮೆರಿಕದಲ್ಲಿನ ಬೆಳವಣಿಗೆಗಳನ್ನು ಅರ್ಥ ಮಾಡಿಕೊಳ್ಳಲು, ಭಾರತದೊಂದಿಗೆ ಸಹಕರಿಸಲು ಗಣ್ಯರನ್ನು ಆಹ್ವಾನಿಸಲು ಮಾತುಕತೆ ನಡೆಸಲಿದ್ದಾರೆ.
ಇದು ಮೋದಿ ಅವರ ಐತಿಹಾಸಿಕ ಪ್ರವಾಸವಾಗಲಿದ್ದು, ಹಲವು ಪ್ರಥಮಗಳಿಗೆ ಸಾಕ್ಷಿಯಾಗಲಿದೆ. ಮೋದಿ ಅವರಿಗೆ ಅಮೆರಿಕ ಸರ್ಕಾರವೇ ಈ ಸಲ ಭೇಟಿಗೆ ಆಹ್ವಾನ ನೀಡಿದ್ದು, ಅಮೆರಿಕದಿಂದ ಆಹ್ವಾನಿತರಾಗಿ ಅಲ್ಲಿಗೆ ಭೇಟಿ ನೀಡುತ್ತಿರುವ ಭಾರತದ ಎರಡನೇ ಪ್ರಧಾನಿ ಎಂಬ ಹೆಗ್ಗಳಿಕೆಗೆ ಮೋದಿ ಪಾತ್ರರಾಗಲಿದ್ದಾರೆ. ಜತೆಗೆ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಅವರಿಂದ ಆಹ್ವಾನ ಪಡೆದು ಅಮೆರಿಕಕ್ಕೆ ಭೇಟಿ ನೀಡುತ್ತಿರುವ 3ನೇ ವಿಶ್ವ ನಾಯಕ ಎನ್ನಿಸಿಕೊಳ್ಳಲಿದ್ದಾರೆ.
ಇಂದಿನಿಂದ ಪ್ರಧಾನಿ ಮೋದಿ ಐತಿಹಾಸಿಕ ಅಮೆರಿಕ ಪ್ರವಾಸ: ಏನೇನು ಕಾರ್ಯಕ್ರಮ?
ಇಂದು ನ್ಯೂಯಾರ್ಕ್‌ಗೆ ತೆರಳಿರುವ ಮೋದಿ ಅವರು, ನಾಳೆ ವಿಶ್ವಸಂಸ್ಥೆಯ ಕೇಂದ್ರ ಕಚೇರಿಯಲ್ಲಿ 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ವಾಷಿಂಗ್ಟನ್ ಡಿಸಿಗೆ ತೆರಳಲಿದ್ದಾರೆ. ಜೂ.22ರಂದು ಅಲ್ಲಿ ಅವರನ್ನು ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಹಾಗೂ ಅವರ ಪತ್ನಿ ಜಿಲ್ ಬೈಡೆನ್ ಅವರು ಸ್ವಾಗತಿಸಲಿದ್ದಾರೆ. ಈ ವೇಳೆ ಮೋದಿ ಅವರು ಅಮೆರಿಕ ಸಂಸತ್ತಿನ ಜಂಟಿ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಅಮೆರಿಕ ಸರ್ಕಾರದ ಅಧಿಕೃತ ಔತಣಕೂಟದಲ್ಲೂ ಪಾಲ್ಗೊಳ್ಳಲಿದ್ದಾರೆ. ಅದೇ ದಿನ ಅಮೆರಿಕ ಸಂಸತ್ತಿನ ಜಂಟಿ ಅಧಿವೇಶನ ಉದ್ದೇಶಿಸಿ ಮೋದಿ ಮಾತನಾಡಲಿದ್ದಾರೆ. ಜೂ.23ರಂದು ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಮತ್ತು ಗೃಹ ಸಚಿವ ಆ್ಯಂಟನಿ ಬ್ಲಿಂಕನ್ ಆಯೋಜಿಸಿರುವ ಔತಣ ಕೂಟದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಅಧಿಕೃತ ಕಾರ್ಯಕ್ರಮಗಳ ಜೊತೆಗೆ ವಿವಿಧ ಕಂಪನಿಗಳ ಸಿಇಒ, ವೃತ್ತಿಪರರು ಮತ್ತು ಗಣ್ಯರನ್ನು ಮೋದಿ ಭೇಟಿ ಮಾಡಲಿದ್ದಾರೆ.
