ವಾಷಿಂಗ್ಟನ್(ಜ.07): ಅಮೆರಿಕ ಅಧ್ಯಕ್ಷೀಯ ಚುನಾವಣೆ ಬೆನ್ನಲ್ಲೇ ಅನೇಕ ಬೆಳವಣಿಗೆಗಳು ನಡೆದಿವೆ.  ಅತ್ತ ಮಾಜಿ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಈವರೆಗೆ ಸೋಲೊಪ್ಪಿಕೊಳ್ಳದ ಟ್ರಂಪ್ ಚುನಾವಣಾಧಿಕಾರಿಗಳು ಫಲಿತಾಂಶ ತಿರುಚಿದ್ದಾರೆ ಎಂದು ಆರೋಪಿಸುತ್ತಿದ್ದಾರೆ. ಪದೇ ಪದೇ ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲೂ ಹೇಳಿಕೆಗಳನ್ನು ಬಿಡುಗಡೆ ಮಾಡುತ್ತಿದ್ದಾರೆ. ಆದರೀಗ ಇದರ ಪರಿಣಾಮವಾಗಿ ವಾಷಿಂಗ್ಟನ್‌ನ ಅಮೆರಿಕ ಸಂಸತ್ ಮೇಲೆ ಟ್ರಂಪ್ ಬೆಂಬಲಿಗರು ಅನಿರೀಕ್ಷಿತ ದಾಳಿ ನಡೆಸಿದ್ದಾರೆ. ಈ ವೇಳೆ ಗುಂಡಿನ ದಾಳಿ ನಡೆದಿದ್ದು, ಇದರಲ್ಲಿ ಓರ್ವ ಮೃತಪಟ್ಟಿದ್ದು ಹಲವರು ಗಾಯಗೊಂಡಿದ್ದಾರೆ. ಅಲ್ಲದೆ ಒಬ್ಬ ಮಹಿಳೆಯ ಭುಜಕ್ಕೆ ಗುಂಡು ತಗುಲಿದೆ.

"

ಈಗಿರುವಾಗಲೇ ಡೊನಾಲ್ಡ್​ ಟ್ರಂಪ್ ಅವರ ಅಸಂಬದ್ಧ ಹೇಳಿಕೆಗಳೇ ಗಲಭೆಗೆ ಕಾರಣ ಎಂದು ಫೇಸ್​ಬುಕ್​ ಮತ್ತು ಟ್ವಿಟರ್​ ಅಮೆರಿಕ ಮಾಜಿ ಅಧ್ಯಕ್ಷ ಟ್ರಂಪ್ ಖಾತೆಯನ್ನೇ ನಿಷ್ಕ್ರಿಯಗೊಳಿಸಿದೆ. ಅಲ್ಲದೆ, ಕೆಲವು ಆಕ್ಷೇಪಾರ್ಹ ಹೇಳಿಕೆಗಳನ್ನು ತೆಗೆದುಹಾಕಿದೆ ಎಂದು ವರದಿಗಳು ತಿಳಿಸಿವೆ. ಇದಕ್ಕಾಗಿ ಇಲ್ಲಿ ಹಲವಾರು ಶಾಸಕರು ಸೇರಿದ್ದರು. ಈ ವೇಳೆ ಸಂಸತ್ ಹೊರಗಿದ್ದ ಟ್ರಂಪ್ ಬೆಂಬಲಿಗರು ಬಲವಂತವಾಗಿ ಬ್ಯಾರಿಕೇಡ್ ಮುರಿದು ಒಳ ಪ್ರವೇಶಿಸಿದ್ದಾರೆ. ಇದರಂದ ಗೊಂದಲ ಉಂಟಾಗಿದ್ದು ಪೊಲೀಸರು ನಿಯಂತ್ರಿಸಲು ಹರಸಾಹಸ ಪಟ್ಟಿದ್ದು, ಅಂತಿಮವಾಗಿ ಫೈರಿಂಗ್ ಮಾಡಿದ್ದಾರೆ. ಈ ವೇಳೆ ಗುಂಡಿನ ದಾಳಿಯಲ್ಲಿ ಒಬ್ಬ ಮೃತಪಟ್ಟಿದ್ದಾನೆ.

ಟ್ರಂಪ್ ಟ್ವಿಟರ್ ಫೇಸ್ಬುಕ್ ನಿಷ್ಕ್ರಿಯ

ಟ್ರಂಪ್‌ರವರ ಮೂರು ಆಕ್ಷೇಪಾರ್ಹ ಟ್ವೀಟ್‌ಗಳನ್ನು ತೆಗೆದುಹಾಕಬೇಕೆಂದು ಟ್ವಿಟರ್ ಹೇಳಿದೆ. 12 ಗಂಟೆಗಳ ಒಳಗಾಗಿ ಟ್ವೀಟ್‌ಗಳನ್ನು ತೆಗೆದುಹಾಕದಿದ್ದರೆ ಖಾತೆಯನ್ನು ನಿಷ್ಕ್ರಿಯಗೊಳಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದೆ. ಅಲ್ಲದೇ ಟ್ರಂಪ್‌ ಚುನಾವಣಾ ಫಲಿತಾಂಶಗಳನ್ನು ತಿರುಚಲು ಪ್ರಯತ್ನಿಸುತ್ತಿದ್ದಾರೆ. ಇದರಿಂದಾಗಿಯೇ ಸಂಸತ್‌ನಲ್ಲಿ ಗಲಭೆ ನಡೆದಿದೆ ಎನ್ನಲಾಗಿದೆ. ಫೇಸ್‌ಬುಕ್‌ನ ಸಾಮುದಾಯಿಕ ನಿಯಮಗಳನ್ನು ಉಲ್ಲಂಘಿಸಿದ ಕಾರಣಕ್ಕಾಗಿ 24 ಗಂಟೆಗಳ ಕಾಲ ಟ್ರಂಪ್ ಖಾತೆಯನ್ನು ನಿಷ್ಕ್ರಿಯಗೊಳಿಸಲಾಗಿದೆ ಎಂದು ತಿಳಿಸಿದೆ. ಚುನಾವಣಾ ಫಲಿತಾಂಶಗಳನ್ನು ತಿರುಚುವಂತೆ ಟ್ರಂಪ್‌ ಆದೇಶಿಸುತ್ತಿರುವ ವಿಡಿಯೋವೊಂದನ್ನು ಫೇಸ್‌ಬುಕ್, ಯೂಟ್ಯೂಬ್, ಇನ್ಸ್ಟಾಗ್ರಾಮ್ ಗೂಗಲ್ ತೆಗೆದುಹಾಕಿವೆ. ಇನ್ಸ್ಟಾಗ್ರಾಮ್ ಖಾತೆಯನ್ನು 24 ಗಂಟೆಗಳ ಕಾಲ ನಿಷ್ಕ್ರಿಯಗೊಳಿಸಲಾಗಿದೆ.

ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಜೋ ಬೈಡನ್ ಡೊನಾಲ್ಡ್ ಟ್ರಂಪ್ ವಿರುದ್ಧ 306-232ರಿಂದ ಅಂತರದಿಂದ ಜಯಗಳಿಸಿದ್ದಾರೆ. ಆದರೆ ಇದನ್ನು ಟ್ರಂಪ್ ಒಪ್ಪುತ್ತಿಲ್ಲ. ಹಾಗಾಗಿ ಟ್ರಂಪ್ ಬೆಂಬಲಿಗರು ಇಂದು ಸಂಸತ್ ಮೇಲೆ ದಾಳಿ ನಡೆಸಿದ್ದಾರೆ. ಅಲ್ಲದೆ ಟ್ರಂಪ್ ಉಪಾಧ್ಯಕ್ಷ ಮೈಕ್ ಪೆನ್ಸ್ ಫಲಿತಾಂಶಗಳನ್ನು ಬದಲಿಸಬೇಕೆಂದು ಆಗ್ರಹಿಸುತ್ತಿದ್ದಾರೆ. ಯುಎಸ್ ಸಂವಿಧಾನವು ಚುನಾವಣೆಯ ಫಲಿತಾಂಶಗಳನ್ನು ಏಕಪಕ್ಷೀಯವಾಗಿ ರದ್ದುಗೊಳಿಸುವ ಅಧಿಕಾರವನ್ನು ಪೆನ್ಸ್‌ಗೆ ನೀಡುವುದಿಲ್ಲ, ಆದರೆ ಟ್ರಂಪ್‌ನಿಂದ ಅದನ್ನು ಮಾಡುವಂತೆ ಒತ್ತಡ ಹಾಕುತ್ತಿದ್ದಾರೆ.