ನವದೆಹಲಿ(ಫೆ.04): ಕೊರೋನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಭಾರತ, ಬ್ರಿಟನ್‌, ಪಾಕಿಸ್ತಾನ ಸೇರಿದಂತೆ 20 ರಾಷ್ಟ್ರಗಳ ವಿಮಾನ ಸಂಚಾರಕ್ಕೆ ಸೌದಿ ಅರೇಬಿಯಾ ನಿಷೇಧ ಹೇರಿದೆ.

ಈ ಸಂಬಂಧ ಹೇಳಿಕೆ ಬಿಡುಗಡೆ ಮಾಡಿರುವ ಸೌದಿ ಅರೇಬಿಯಾ, ಭಾರತ ಸೇರಿದಂತೆ 20 ರಾಷ್ಟ್ರಗಳ ವಿಮಾನ ಸಂಚಾರವನ್ನು ಬುಧವಾರದಿಂದ ಅನುಷ್ಠಾನಗೊಳ್ಳುವಂತೆ ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ. ಆದರೆ ಸೌದಿ ಪ್ರಜೆಗಳು, ವೈದ್ಯಕೀಯ ಸಿಬ್ಬಂದಿ ಮತ್ತು ಅವರ ಕುಟುಂಬಸ್ಥರು ಹಾಗೂ ರಾಜತಾಂತ್ರಿಕರಿಗೆ ಈ ನಿರ್ಬಂಧ ಅನ್ವಯಿಸುವುದಿಲ್ಲ’ ಎಂದು ತಿಳಿಸಿದೆ.

ಸೌದಿ ಅರೇಬಿಯಾದಲ್ಲಿ ಮಗಳವಾರ 310 ಹೊಸ ಕೊರೋನಾ ಪ್ರಕರಣಗಳು ದೃಢವಾಗಿದ್ದು, ಈವರೆಗೆ 3,68,639 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಸುಮಾರು 6000 ಜನರು ವೈರಸ್ಸಿಗೆ ಬಲಿಯಾಗಿದ್ದಾರೆ.