ಶ್ರೀಲಂಕಾ ಪ್ರಧಾನಿ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಹಿನ್ನಡೆ ಲಂಕಾ ಆಡಳಿತ ಪಕ್ಷದ ಸಂಸದ ಸಾವು, ಕೊಲೆ ಶಂಕೆ ಸಂಸದನ ತೆರಳುತ್ತಿದ್ದ ವೇಳೆ ಪ್ರತಿಭಟನಾಕಾರರಿಂದ ದಾಳಿ

ಕೊಲೊಂಬೊ(ಮೇ.09): ಶ್ರೀಲಂಕಾದಲ್ಲಿನ ಪರಿಸ್ಥಿತಿ ತೀವ್ರ ಹದಗೆಟ್ಟಿದೆ. ಕಳೆದ ಕೆಲ ತಿಂಗಳುಗಳಿಂದ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಶ್ರೀಲಂಕಾ ಇದೀಗ ರಾಜಕೀಯ ಬಿಕ್ಕಟ್ಟಿನ ಜೊತೆಗೆ ಪ್ರತಿಭಟನೆ, ಹಿಂಸಾಚಾರವೂ ತೀವ್ರಗೊಂಡಿದೆ. ಪ್ರತಿಭಟನೆಯಿಂದ ಶ್ರೀಲಂಕಾ ಪ್ರಧಾನಿ ಮಹೀಂದ ರಾಜಪಕ್ಸೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಆಡಳಿತ ಪಕ್ಷದ ಸಂಸದ ಅಮರಕೀರ್ತಿ ಅತುಕೊರಲ ಶವವಾಗಿ ಪತ್ತೆಯಾಗಿದ್ದಾರೆ.

ಆಡಳಿತ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸುತ್ತಿರುವ ಪ್ರತಿಭಟನಾಕಾರರು, ಸಂಸದ ಅಮರಕೀರ್ತಿ ತೆರಳುತ್ತಿದ್ದ ಕಾರಿನ ಮೇಲೆ ದಾಳಿ ನಡೆಸಿದ್ದರು, ಬಡಿಗೆ, ಕೋಲು, ಕಬ್ಬಿಣ ರಾಡ್‌ನಿಂದ ಕಾರಿನ ಮೇಲೆ ದಾಳಿ ಮಾಡಿದ್ದರು. ಉದ್ರಿಕ್ತರ ಗುಂಪುನ್ನು ಚದುರಿಸಲು ಸಂಸದ ಅಮರತೀರ್ತಿ ಗುಂಡಿನ ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ಇಬ್ಬರು ಪ್ರತಿಭಟನಾಕಾರರು ತೀವ್ರವಾಗಿ ಗಾಯಗೊಂಡಿದ್ದರು.

ಆರ್ಥಿಕ ಸಂಕಷ್ಟದ ನಡುವೆ ರಾಜಕೀಯ ಬಿಕ್ಕಟ್ಟು, ಶ್ರೀಲಂಕಾ ಪ್ರಧಾನಿ ಮಹೀಂದ ರಾಜಪಕ್ಸೆ ರಾಜೀನಾಮೆ!

ಗುಂಡು ಹಾರಿಸುತ್ತಿದ್ದಂತೆ ಪ್ರತಿಭಟನಕಾರರು ಚದುರಿದ್ದಾರೆ. ಈ ವೇಳೆ ಸ್ಥಳದಿಂದ ವೇಗವಾಗಿ ತೆರಳಿದ ಸಂಸದರ ಅಮರಕೀರ್ತಿ ಹತ್ತಿದರ ಕಟ್ಟಡದಲ್ಲಿ ಆಶ್ರಯ ಪಡೆದಿದ್ದಾರೆ. ಇತ್ತ ಪ್ರತಿಭಟನಾಕಾರರು ಅಮರಕೀರ್ತಿಗಾಗಿ ಹುಡುಕಾಟ ನಡೆಸಿದ್ದಾರೆ. ಪ್ರತೀಕಾರ ತೀರಿಸುವುದಾಗಿ ಎಚ್ಚರಿಸಿದ್ದರು. ಇಂದು ಅಶ್ರಯಪಡ ಕಟ್ಡದಲ್ಲಿ ಅಮರಕೀರ್ತಿ ಶವವಾಗಿ ಪತ್ತೆಯಾಗಿದ್ದಾರೆ.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪೊಲೀಸರು ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ. ಲಂಕಾದ ಹಲವೆಡೆ ನಡೆದ ಪ್ರತಿಭಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಸೆಕ್ಷನ್ 144 ಜಾರಿ ಮಾಡಲಾಗಿದೆ. ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಸುಮಾರು 78ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. 

ಮಹೀಂದ್ರ ರಾಜಪಕ್ಸೆ ರಾಜೀನಾಮೆ
ಆರ್ಥಿಕ ಸಂಕಷ್ಟದಿಂದ ಬಳಲುತ್ತಿರುವ ಶ್ರೀಲಂಕಾ ಇದೀಗ ರಾಜಕೀಯ ಬಿಕ್ಕಟ್ಟು ಎದುರಿಸುತ್ತಿದೆ. ಶ್ರೀಲಂಕಾದಲ್ಲಿ ಪ್ರತಿಭಟನೆ ತೀವ್ರಗೊಂಡ ಬೆನ್ನಲ್ಲೇ ಪ್ರದಾನಿ ಮಹೀಂದ ರಾಜಪಕ್ಸೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮಹೀಂದ್ರ ರಾಜಪಕ್ಸೆ ಜೊತೆಗೆ ಆರೋಗ್ಯ ಸಚಿವ ಕೂಡ ರಾಜೀನಾಮೆ ಸಲ್ಲಿಸಿದ್ದಾರೆ.

ಶ್ರೀಲಂಕಾದಲ್ಲಿ ಮಧ್ಯರಾತ್ರಿಯಿಂದಲೇ ಮತ್ತೆ ತುರ್ತು ಪರಿಸ್ಥಿತಿ ಜಾರಿ!

ಪ್ರತಿಭಟನಾಕಾರರ ಮೇಲೆ ಗುಂಡು: 1 ಸಾವು
ಸರ್ಕಾರದ ವಿರುದ್ಧ ಹೋರಾಟ ನಡೆಸುತ್ತಿರುವ ಪ್ರತಿಭಟನಾಕಾರರ ಮೇಲೆ ಪೊಲೀಸರು ನಡೆಸಿದ ಗುಂಡಿನ ದಾಳಿಗೆ ಓರ್ವ ಬಲಿಯಾಗಿ 12 ಜನರು ಗಾಯಗೊಂಡ ಘಟನೆ ನಡೆದಿದೆ. ಶ್ರೀಲಂಕಾದ ನೈಋುತ್ಯ ಭಾಗದ ರಂಬುಕ್ಕನಾದಲ್ಲಿ ಪ್ರತಿಭಟನಾಕಾರರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾಕಾರರು ರೈಲ್ವೇ ಮಾರ್ಗಗಳನ್ನು ಮುಚ್ಚಿ, ರಕ್ಷಣಾ ಸಿಬ್ಬಂದಿಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಈ ಸ್ಥಳವನ್ನು ತೊರೆಯುವಂತೆ ಪೊಲೀಸರು ಸೂಚನೆ ನೀಡಿದರೂ ಸಹ ಲೆಕ್ಕಿಸದೇ ತ್ರಿಚಕ್ರ ವಾಹನಕ್ಕೆ ಬೆಂಕಿ ಹಚ್ಚಲು ಪ್ರಯತ್ನಿಸಿದ್ದಾರೆ. ಈ ಸಮಯದಲ್ಲಿ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಆಶ್ರುವಾಯು ಸಿಡಿಸಿದ್ದಾರೆ. ನಂತರ ಗುಂಡು ಹಾರಿಸಿದ್ದಾರೆ. ಈ ವೇಳೆ ಓರ್ವ ಸಾವನ್ನಪ್ಪಿದ್ದಾನೆ.

ತುರ್ತುಪರಿಸ್ಥಿತಿ ಸಂದರ್ಭದಲ್ಲಿ ಸರ್ಕಾರದ ವಿರುದ್ಧ ಯಾವುದೇ ಪ್ರತಿಭಟನೆಗಳಿಗೆ ಅವಕಾಶ ಇರುವುದಿಲ್ಲ. ಅಲ್ಲದೆ, ಸರ್ಕಾರದ ವಿರುದ್ಧ ಮಾತನಾಡುವ ವ್ಯಕ್ತಿಗಳನ್ನು ಬಂಧಿಸಲು ಭದ್ರತಾ ಪಡೆಗಳಿಗೆ ಅವಕಾಶವಿರುತ್ತದೆ. ಹೀಗಾಗಿ ಈ ಅವಕಾಶವನ್ನು ಬಳಸಿಕೊಂಡಿರುವ ರಾಜಪಕ್ಸೆ, ಶನಿವಾರ ತುರ್ತುಪರಿಸ್ಥಿತಿ ಘೋಷಿಸಿದ್ದಾರೆ.‘ಸಾರ್ವಜನಿಕ ಸುರಕ್ಷತೆ, ಶಾಂತಿ ಕಾಪಾಡುವಿಕೆ ಹಾಗೂ ಅಗತ್ಯವಸ್ತುಗಳ ಪೂರೈಕೆಗೆ ಅಡ್ಡಿ ಆಗಬಾರದೆಂದು ತುರ್ತುಪರಿಸ್ಥಿತಿ ಸಾರಲಾಗಿದೆ’ ಎಂದು ಅಧ್ಯಕ್ಷರು ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.ಈ ನಡುವೆ, ಸರ್ಕಾರದ ವಿರುದ್ಧ ಜನಾಕ್ರೋಶ ಭುಗಿಲೆದ್ದ ಕಾರಣಕ್ಕೆ ಭಾನುವಾರ ನಡೆಯಬೇಕಿದ್ದ ಪ್ರತಿಭಟನೆಗಳನ್ನು ಹತ್ತಿಕ್ಕಲು ಶನಿವಾರ ಸಂಜೆ ಗಂಟೆಯಿಂದ ಸೋಮವಾರ ಬೆಳಗ್ಗೆ 6ರವರೆಗೆ ಕಫä್ರ್ಯ ಕೂಡ ಸಾರಲಾಗಿತ್ತು. ‘ಜನರು ಯಾರೂ ಮನೆ ಬಿಟ್ಟು ಹೊರಬರಕೂಡದು’ ಎಂದು ಆದೇಶಿಸಲಾಗಿತ್ತು.