Mecca to Medina bus crash: ಸೌದಿ ಅರೇಬಿಯಾದಲ್ಲಿ ಮೆಕ್ಕಾದಿಂದ ಮದೀನಾಗೆ ತೆರಳುತ್ತಿದ್ದ ಭಾರತೀಯ ಉಮ್ರಾ ಯಾತ್ರಿಕರ ಬಸ್, ಡೀಸೆಲ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ. ಈ ದುರಂತದಲ್ಲಿ ಹೈದರಾಬಾದ್ ಮೂಲದ 46ಕ್ಕೂ ಹೆಚ್ಚು ಯಾತ್ರಿಕರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ಮೆಕ್ಕಾ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ ಡೀಸೆಲ್ ಟ್ಯಾಂಕರ್‌ಗೆ ಡಿಕ್ಕಿ:

ಮೆಕ್ಕಾ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್‌ಗೆ ಡೀಸೆಲ್ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ 46ಕ್ಕೂ ಹೆಚ್ಚು ಭಾರತೀಯ ಯಾತ್ರಿಕರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಸೌದಿ ಅರೇಬಿಯಾದಲ್ಲಿ ಸೋಮವಾರ ಮುಂಜಾನೆ ಈ ಘಟನೆ ನಡೆದಿದೆ. ಯಾತ್ರಿಕರಿದ್ದ ಬಸ್ ಡಿಸೇಲ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ 40ಕ್ಕೂ ಹೆಚ್ಚು ಭಾರತೀಯ ಉಮ್ರಾ ಯಾತ್ರಿಕರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ ಎಂದು ಸ್ಥಳೀಯ ಮೂಲಕಗಳ ಪ್ರಾಥಮಿಕ ವರದಿಗಳು ಹೇಳಿವೆ. ಈ ಅಪಘಾತದಲ್ಲಿ ಮೃತರಾದವರಲ್ಲಿ ಬಹುತೇಕರು ತೆಲಂಗಾಣದ ಹೈದರಾಬಾದ್‌ನವರು ಎಂದು ತಿಳಿದು ಬಂದಿದೆ.

ಬಸ್‌ನಲ್ಲಿದ್ದ 40ಕ್ಕೂ ಹೆಚ್ಚು ಭಾರತೀಯ ಪ್ರಯಾಣಿಕರು ಸಾವು

ಘಟನೆಗೆ ಸಂಬಂಧಿಸಿದಂತೆ ತೆಲಂಗಾಣದ ಮುಖ್ಯಮಂತ್ರಿ ರೇವಂತ್ ರೆಡ್ಡಿ ಆಘಾತ ವ್ಯಕ್ತಪಡಿಸಿದ್ದು, ಮೃತರ ಹಾಗೂ ಬಸ್‌ನಲ್ಲಿದ್ದ ಪ್ರಯಾಣಿಕರ ಸಂಪೂರ್ಣ ವಿವರ ತಕ್ಷಣ ಪಡೆಯುವಂತೆ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ ನಿರ್ದೇಶನ ನೀಡಿದ್ದಾರೆ ಎಂದು ವರದಿಯಾಗಿದೆ. ಸೌದಿ ಆರೇಬಿಯಾದ ಮುಫ್ರಿಹತ್ ಎಂಬ ಪ್ರದೇಶದಲ್ಲಿ ಭಾರತೀಯ ಕಾಲಮಾನ ಬೆಳಗ್ಗಿನ ಜಾವ 1.30ರ ಸುಮಾರಿಗೆ ಈ ಘಟನೆ ನಡೆದಿದೆ. ಈ ಬಸ್‌ನಲ್ಲಿ ಮಹಿಳೆಯರು ಹಾಗೂ ಮಕ್ಕಳು ಕೂಡ ಇದ್ದರು ಎಂದು ವರದಿಯಾಗಿದೆ. ದುರಂತದ ಸಮಯದಲ್ಲಿ ಸುಮಾರು 11 ಮಕ್ಕಳು ಹಾಗೂ 20 ಮಹಿಳೆಯರು ಬಸ್‌ನಲ್ಲಿದ್ದರು ಎಂದು ಆರಂಭಿಕ ಮಾಹಿತಿಯಿಂದ ತಿಳಿದು ಬಂದಿದೆ.

ದುರಂತದ ಸಮಯದಲ್ಲಿ ನಿದ್ರೆಯಲ್ಲಿದ್ದ ಪ್ರಯಾಣಿಕರು

ಮೆಕ್ಕಾದಲ್ಲಿ ಧಾರ್ಮಿಕ ವಿಧಿ ವಿಧಾನಗಳನ್ನು ಪೂರೈಸಿದ ನಂತರ ಈ ಯಾತ್ರಿಕರ ತಂಡ ಮದೀನಾಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ದುರಂತದ ಸಮಯದಲ್ಲಿ ಅನೇಕ ಪ್ರಯಾಣಿಕರು ನಿದ್ರಿಸುತ್ತಿದ್ದರು. ಆರಂಭಿಕ ವರದಿಗಳು 42 ಜನ ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದ್ದರೂ ಅಧಿಕಾರಿಗಳು ಇನ್ನೂ ಮೃತರಾದವರ ಸಂಖ್ಯೆ ಹಾಗೂ ಸಾವನ್ನಪ್ಪಿದರ ಸಂಖ್ಯೆಯನ್ನು ಪರಿಶೀಲಿಸುತ್ತಿದ್ದಾರೆ ಎಂದು ವರದಿಯಾಗಿದೆ.

ಘಟನೆಗೆ ಸಂಬಂಧಿಸಿದಂತೆ ಹೈದರಾಬಾದ್ ಸಂಸದ ಅಸಾದುದ್ದೀನ್ ಒವೈಸಿ ಅವರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸುದ್ದಿಸಂಸ್ಥೆ ಎಎನ್‌ಐ ಜೊತೆ ಮಾತನಾಡಿದ ಒವೈಸಿ, ಈ ಮೆಕ್ಕಾ ಯಾತ್ರೆಗೆ ಸಂಬಂಧಿಸಿದಂತೆ ಹೈದರಾಬಾದ್ ಮೂಲದ ಟ್ರಾವೆಲ್ ಏಜೆನ್ಸಿಗಳನ್ನು ಸಂಪರ್ಕಿಸಿದ್ದಾರೆ. ಹಾಗೂ ಅವರ ವಿವರಗಳನ್ನು ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಹಾಗೂ ವಿದೇಶಾಂಗ ಕಾರ್ಯದರ್ಶಿಗಳ ಜೊತೆ ಹಂಚಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ಜೊತೆಗೆ ರಿಯಾದ್‌ನಲ್ಲಿರುವ ರಾಯಭಾರ ಕಚೇರಿಯ ಉಪ ಮುಖ್ಯಸ್ಥ ಅಬು ಮಾಥೇನ್ ಅವರೊಂದಿಗೆ ಒವೈಸಿ ಮಾತನಾಡಿದ್ದಾಗಿ ಹೇಳಿದ್ದಾರೆ.

ಮೆಕ್ಕಾದಿಂದ ಮದೀನಾಕ್ಕೆ ಪ್ರಯಾಣಿಸುತ್ತಿದ್ದ ನಲವತ್ತೆರಡು ಹಜ್ ಯಾತ್ರಿಕರು ಬೆಂಕಿಗೆ ಆಹುತಿಯಾದ ಬಸ್ಸಿನಲ್ಲಿದ್ದರು. ನಾನು ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಉಪ ಮುಖ್ಯಸ್ಥ (ಡಿಸಿಎಂ) ಅಬು ಮಾಥೇನ್ ಜಾರ್ಜ್ ಅವರೊಂದಿಗೆ ಮಾತನಾಡಿದ್ದೇನೆ ಮತ್ತು ಅವರು ಈ ವಿಷಯದ ಬಗ್ಗೆ ಮಾಹಿತಿಯನ್ನು ಸಂಗ್ರಹಿಸುತ್ತಿದ್ದಾರೆ ಎಂದು ನನಗೆ ಭರವಸೆ ನೀಡಿದರು. ನಾನು ಹೈದರಾಬಾದ್ ಮೂಲದ ಎರಡು ಪ್ರಯಾಣ ಸಂಸ್ಥೆಗಳನ್ನು ಸಂಪರ್ಕಿಸಿದ್ದೇನೆ ಮತ್ತು ಪ್ರಯಾಣಿಕರ ವಿವರಗಳನ್ನು ರಿಯಾದ್ ರಾಯಭಾರ ಕಚೇರಿ ಮತ್ತು ವಿದೇಶಾಂಗ ಕಾರ್ಯದರ್ಶಿಯೊಂದಿಗೆ ಹಂಚಿಕೊಂಡಿದ್ದೇನೆ. ಶವಗಳನ್ನು ಭಾರತಕ್ಕೆ ಮರಳಿ ತರುವಂತೆ ಮತ್ತು ಯಾರಾದರೂ ಗಾಯಗೊಂಡಿದ್ದರೆ, ಅವರಿಗೆ ಸರಿಯಾದ ವೈದ್ಯಕೀಯ ಚಿಕಿತ್ಸೆ ದೊರೆಯುವಂತೆ ನೋಡಿಕೊಳ್ಳುವಂತೆ ಕೇಂದ್ರ ಸರ್ಕಾರವನ್ನು, ವಿಶೇಷವಾಗಿ ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಅವರನ್ನು ನಾನು ವಿನಂತಿಸುತ್ತೇನೆ ಎಂದು ಒವೈಸಿ ಹೇಳಿದ್ದಾರೆ.

Scroll to load tweet…

ಇದನ್ನೂ ಓದಿ: ಕಾಸರಗೋಡು: ಬಿಲ್ ಪಾವತಿಸದ್ದಕ್ಕೆ ಮನೆಯ ಪವರ್ ಕಟ್: ಸಿಟ್ಟಿಗೆದ್ದುಇಡೀ ಊರನ್ನೇ ಕತ್ತಲಲ್ಲಿಟ್ಟ ಯುವಕ!

ಇದನ್ನೂ ಓದಿ: 8 ಲಕ್ಷದ ಕಾರಲ್ಲಿ ಬಂದು 8 ರೂಪಾಯಿಯ ನ್ಯೂಸ್ ಪೇಪರ್ ಕದ್ದೊಯ್ದ ಕಳ್ಳ: ಸಿಸಿಟಿವಿ ವೀಡಿಯೋ ವೈರಲ್