Karnataka News Live: ಬೆಲೆ ಏರಿಕೆ ಖಂಡಿಸಿ BJP ಅಹೋರಾತ್ರಿ ಧರಣಿ; ನಾನೇ ಸಿಎಂ ಎಂದ ಯತ್ನಾಳ್
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ಖಂಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಸರ್ಕಾರದ ವಿರುದ್ಧ ಅಹೋರಾತ್ರಿ ಧರಣಿ ನಡೆಸುವ ಮೂಲಕ ಪ್ರತಿಪಕ್ಷ ಬಿಜೆಪಿ ಜನಾಕ್ರೋಶದ ಕಹಳೆ ಮೊಳಗಿಸಿದೆ. ಹಾಲು, ಮೊಸರು, ವಿದ್ಯುತ್, ಡೀಸೆಲ್ ದರ, ಕಸ ತೆರಿಗೆ ಹೀಗೆ ಒಂದರ ಹಿಂದೆ ಒಂದರಂತೆ ದರ ಏರಿಕೆಗೆ ಪ್ರತಿಪಕ್ಷ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಬಸನಗೌಡ ಪಾಟೀಲ್ ಯತ್ನಾಳ್ ಅವರ ವಜಾದಿಂದ ನಮ್ಮ ಹೋರಾಟ ನಿಲ್ಲಲ್ಲ ಎಂದು ಮಾಜಿ ಸಚಿವ ಕುಮಾರ್ ಬಂಗಾರಪ್ಪ ಹೇಳಿದ್ದಾರೆ. ಮತ್ತೊಂದೆಡೆ ನಾನೇ ಮುಂದಿನ ಸಿಎಂ ಎಂದು ಯತ್ನಾಳ್ ಹೇಳಿಕೆ ನೀಡಿದ್ದಾರೆ. ಇಂದಿನ ರಾಜ್ಯ ರಾಜಕೀಯಕ್ಕೆ ಸಂಬಂಧಿಸಿದ ಕ್ಷಣ ಕ್ಷಣದ ಮಾಹಿತಿ ಇಲ್ಲಿದೆ