ಉಚಿತ ಸ್ಕೀಂಗಳಿಂದ ಜನರಿಗೆ ದುಡಿವ ಮನಸ್ಸೇ ಇಲ್ಲ: ರಾಜಕೀಯ ಪಕ್ಷಗಳಿಗೆ ಸುಪ್ರೀಂ ಚಾಟಿ
ಚುನಾವಣೆ ಗೆಲ್ಲಲು ರಾಜಕೀಯ ಪಕ್ಷಗಳು ನೀಡುತ್ತಿರುವ ಉಚಿತ ಕೊಡುಗೆಗಳಿಂದ ಜನರು ಕೆಲಸ ಮಾಡಲು ಹಿಂದೇಟು ಹಾಕುತ್ತಿದ್ದಾರೆ ಎಂದು ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿದೆ. ಉಚಿತ ಕೊಡುಗೆಗಳ ಬದಲು ಜನರನ್ನು ಮುಖ್ಯವಾಹಿನಿಗೆ ತಂದು ರಾಷ್ಟ್ರಾಭಿವೃದ್ಧಿಗೆ ಕೊಡುಗೆ ನೀಡುವಂತೆ ಸರ್ಕಾರಗಳನ್ನು ಪ್ರಶ್ನಿಸಿದೆ.